ಉಡುಪಿ: ಜ.12ರಂದು ಕುರ್ಮಾ ಬಳಗದಿಂದ ‘ಜಯೋಸ್ತುತೇ’ ಸಾರ್ವಕರ್ ಸಾಹಿತ್ಯ ಸಂಭ್ರಮ

ಉಡುಪಿ: ಸ್ವಾಮಿ ವಿವೇಕಾನಂದರ ಜನ್ಮವರ್ಷದ ಪ್ರಯುಕ್ತ ಕುರ್ಮಾ ಬಳಗ ವತಿಯಿಂದ ‘ಜಯೋಸ್ತುತೇ’ ಸಾರ್ವಕರ್ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ಉಡುಪಿಯ ಪುರಭವನದಲ್ಲಿ ಜ.12ರಂದು ಮಧ್ಯಾಹ್ನ 3ಗಂಟೆಗೆ ನಡೆಯಲಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿಯಲ್ಲಿ‌ ಕೂರ್ಮ ಬಳಗದ ಸಂಚಾಲಕ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾಹಿತಿ ನೀಡಿದರು. ಸ್ವಾತಂತ್ರ್ಯ ಸೇನಾನಿ ವಿನಾಯಕ ದಾಮೋದರ ಸಾರ್ವಕರ್ ಅವರ ಬದುಕು ಬರಹಗಳನ್ನು ಯುವಜನತೆಗೆ ತೆರೆದಿಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಕಾರ್ಯಕ್ರಮದ ಅಂಗವಾಗಿ ನಡೆಯುವ ವಿಚಾರಗೋಷ್ಠಿಯಲ್ಲಿ ಮೊದಲಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ […]

ಕಾರ್ಕಳ: ತಲೆನೋವಿನಿಂದ ಬಳಲುತ್ತಿದ್ದ ಯುವತಿ ಮೃತ್ಯು

ಕಾರ್ಕಳ: ತಲೆನೋವಿನಿಂದ ಬಳಲುತ್ತಿದ್ದ ಯುವತಿಯೊಬ್ಬಳು ಹಠಾತ್ ಆಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನೀರೆ ಗ್ರಾಮದ ಬಾರೆಜಡ್ಡು ಎಂಬಲ್ಲಿ ನಡೆದಿದೆ. ನೀರೆ ಗ್ರಾಮದ ಶಿವರಾಮ ಆಚಾರ್ಯ ಅವರ ಮಗಳು 18 ವರ್ಷದ ಶರಣ್ಯ ಮೃತ ಯುವತಿ. ಶರಣ್ಯಳಿಗೆ 12 ದಿನಗಳ ಹಿಂದೆ ತಲೆನೋವು ಕಾಣಿಸಿಕೊಂಡಿತ್ತು. ಬಳಿಕ ಮನೆಯವರು ಆಕೆಯನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿಕೊಂಡು ಬಂದಿದ್ದರು. ಜ.9 ರಂದು ಸಂಜೆ 4ಗಂಟೆಗೆ ಮತ್ತೆ ತಲೆನೋವು ಕಾಣಿಸಿಕೊಂಡಿದೆ. ಬಳಿಕ ವಾಂತಿ ಮಾಡಿಕೊಂಡು ಅಸ್ವಸ್ಥಳಾಗಿದ್ದ ಆಕೆಯನ್ನು […]

ಹಿಂದೂ ದೈವ ದೇವರುಗಳ ಅಪಹಾಸ್ಯ ಖಂಡನೀಯ: ಸಾಮೂಹಿಕ ಪ್ರಾರ್ಥನೆಗೆ ಕೈಜೋಡಿಸಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಇತ್ತೀಚೆಗೆ ಹಿಂದೂ ದೈವ ದೇವರುಗಳನ್ನು ಅಪಹಾಸ್ಯ ಮಾಡುವ ಕೆಟ್ಟ ಪ್ರವೃತ್ತಿ ಮಿತಿ ಮೀರುತ್ತಿದೆ. ಕೊರಗಜ್ಜ ದೈವದ ಪ್ರತಿಕೃತಿಯಂತೆ ವೇಷ ಹಾಕಿ ಕುಣಿದು ವಿಕೃತಿ ಮೆರೆಯುವುದು ಸೇರಿದಂತೆ ಹಿಂದೂಗಳ ಶೃದ್ಧಾ ಕೇಂದ್ರಗಳ ಸಹಿತ ಪುಣ್ಯ ಕ್ಷೇತ್ರಗಳನ್ನು ಉದ್ದೇಶ ಪೂರ್ವಕವಾಗಿ ಅಪವಿತ್ರಗೊಳಿಸುವ ಹುನ್ನಾರ ಹೊಂದಿರುವ ಮತಾಂಧ ದುಷ್ಟ ಶಕ್ತಿಗಳ ಕುಕೃತ್ಯವನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಸಮಾಜ ಘಾತುಕ ಶಕ್ತಿಗಳನ್ನು ಸೂಕ್ತ ರೀತಿಯಲ್ಲಿ ಮಟ್ಟ ಹಾಕಿ ಸಾಮಾಜಿಕ ಶಾಂತಿ ಸುವ್ಯವಸ್ತೆಯನ್ನು ಕಾಪಾಡುವಂತೆ […]

ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ (ಚಂಪಾ) ನಿಧನ

ಬೆಂಗಳೂರು: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಪರ ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿದ್ದ ಚಂಪಾ ಎಂದೇ ಪ್ರಸಿದ್ದರಾಗಿದ್ದ ಚಂದ್ರಶೇಖರ ಪಾಟೀಲ (83) ಅವರು ಇಂದು ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಂಪಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18ರಂದು ಚಂಪಾ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. ಇಂಗ್ಲಿಷ್ […]

ಕೊರೊನಾ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಯನಾ ಗಣೇಶ್ ಆಗ್ರಹ

ಉಡುಪಿ: ಕೊರೋನಾ ಸಂದರ್ಭದಲ್ಲಿ ಸರಕಾರದ ಸುರಕ್ಷತಾ ಕ್ರಮ ನಿಯಮಗಳನ್ನು ಉಲ್ಲಂಘಿಸಿ ಕೇವಲ ರಾಜಕೀಯ ದುರುದ್ದೇಶದಿಂದ ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಜನ ವಿರೋಧಿ ಧೋರಣೆಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಖಂಡಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇಕೊರೊನಾ ಸೋಂಕು ವ್ಯಾಪಕವಾಗಿ ಸಮುದಾಯ ಮಟ್ಟಕ್ಕೆ ಹರಡುತ್ತಿರುವ ಬಗ್ಗೆ ರಾಜ್ಯ ಸರಕಾರ ಸೂಕ್ತ ಮುನ್ನೆಚ್ಚರಿಕೆಯನ್ನು ನೀಡಿದೆ. ಆದರೂ ಕಾಂಗ್ರೆಸ್ ನಾಯಕರು ಸಾವಿರಾರು ಜನರನ್ನು ಸೇರಿಸಿಕೊಂಡು ಸರ್ಕಾರದ ನಿಯಮವನ್ನು ಪಾಲಿಸದೇ ಮೇಕೆದಾಟು ಪಾದಯಾತ್ರೆ ಮಾಡುವುದರ ಮುಖಾಂತರ ಹಠಮಾರಿ ಧೋರಣೆ ಪ್ರದರ್ಶಿಸಿ […]