ಮಣಿಪಾಲ: ಸುರೇಶ್ ಶೆಣೈ ಅವರಿಂದ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ಸಾಧನೆ
ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಾನವ ಸಂಪನ್ಮೂಲ ವಿಭಾಗದ ಚೀಫ್ ಮ್ಯಾನೇಜರ್ ಆಗಿರುವ ಸುರೇಶ್ ಶೆಣೈ ಅವರು ಇಂದು ಪ್ರತಿಷ್ಟಿತ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ತಮ್ಮ ಸಾಧನೆಯನ್ನು ದಾಖಲಿಸಿದ್ದಾರೆ. ಭಾರತದಲ್ಲಿ ಬಣ್ಣ ಬಳಸದೆ ಹಳೆಯ ಮ್ಯಾಗಜೀನ್ ಕಾಗದಗಳನ್ನು ಬಳಸಿ ತಯಾರಿಸುವ ಚಿತ್ರಗಾರಿಕೆಯಾಗಿರುವ Collage Art- Painting without Paint) ಗರಿಷ್ಟ ಚಿತ್ರಗಾರಿಕೆ ಮಾಡಿರುವ ಬಗ್ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ. ಅದಕ್ಕಾಗಿ ಅವರು ಅವರ ಹೆತ್ತವರು ಅವರ ಪತ್ನಿ, […]
ಕಾರ್ಕಳ: ಹಟ್ಟಿಯಲ್ಲಿ ಕಟ್ಟಿದ್ದ ಎರಡು ಹೆಣ್ಣು ಕರು ಸಹಿತ ಐದು ದನಗಳ ಕಳ್ಳತನ
ಕಾರ್ಕಳ: ಹಟ್ಟಿಯಲ್ಲಿ ಕಟ್ಟಿದ್ದ ಎರಡು ಕರು ಸಹಿತ ಐದು ದನಗಳನ್ನು ಕಳ್ಳತನ ಮಾಡಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಲೆಮಿನಾ ಕ್ರಾಸ್ ಎಂಬಲ್ಲಿ ನಡೆದಿದೆ. ಈ ಬಗ್ಗೆ ನಿಟ್ಟೆ ಗ್ರಾಮದ ದರ್ಖಾಸು ಮನೆಯ ರಾಜೇಶ್ ಆಚಾರ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ಮನೆಯ ಹಟ್ಟಿಯಲ್ಲಿ ಜ.10ರ ರಾತ್ರಿ ಕಟ್ಟಿ ಹಾಕಿದ್ದ ಮೂರು ಕಪ್ಪು ಬಣ್ಣ ದನ ಹಾಗೂ ಎರಡು ಕಪ್ಪು ಬಣ್ಣದ ಹೆಣ್ಣು ಕರುವಿನ ಹಗ್ಗವನ್ನು ತುಂಡು ಮಾಡಿ, ಅವುಗಳನ್ನು ವಾಹನದಲ್ಲಿ ಹಾಕಿಕೊಂಡು ಯಾರೋ ಕಳ್ಳರು […]
ಉಡುಪಿ: ನೈಟ್ ಕರ್ಫ್ಯೂ, ವಿಕೇಂಡ್ ಕರ್ಫ್ಯೂ ಗೊಂದಲ; ಜಿಲ್ಲಾಧಿಕಾರಿ ಸ್ಪಷ್ಟನೆ
ಉಡುಪಿ: ಒಮಿಕ್ರಾನ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಉಡುಪಿ ಜಿಲ್ಲಾಡಳಿತದಿಂದ ಹೊರಡಿಸಿರುವ ಆದೇಶದನ್ವಯ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಜ.19ರ ಬೆಳಿಗ್ಗೆ 5ರ ವರೆಗೆ ಜಾರಿಯಲ್ಲಿರುತ್ತದೆ. ಹಾಗೆ ವಿಕೇಂಡ್ ಕರ್ಫ್ಯೂ ಕೂಡ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂವನ್ನು ರದ್ದುಪಡಿಸಿದ್ದಾರೆ ಎಂಬ ವಿಡಿಯೋ ತುಣುಕು ಹರಿಯಬಿಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿರುವ ಘಟನೆ ಸ್ಪಷ್ಟನೆ ನೀಡಿದ್ದಾರೆ. ಇದು ಸುಳ್ಳು ವದಂತಿಯಾಗಿದ್ದು, ಜಿಲ್ಲೆಯಲ್ಲಿ ಸರಕಾರದ ಆದೇಶದಂತೆ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ […]
ನಗರದಲ್ಲಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ; ಯುವಕರಿಗೆ ಸಾರ್ವಜನಿಕರಿಂದ ಬಿತ್ತು ಗೂಸಾ
ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿ ಅಪಘಾತ ಎಸಗಿರುವ ಯುವಕರಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಇಂದು ನಡೆದಿದೆ. ಕಾರಿನಲ್ಲಿ ಮೂವರು ಯುವಕರು ಇದ್ದು, ಇವರು ಬೆಂಗಳೂರು ಮೂಲದವರೆಂದು ತಿಳಿದುಬಂದಿದೆ. ಕುಡಿದ ಮತ್ತಿನಲ್ಲಿ ಚಾಲಕ ಕಾರನ್ನು ಯರ್ರಾಬಿರ್ರಿ ಚಲಾಯಿಸಿ ಕಂಪೌಂಡ್ ಗೋಡೆಗೆ ಗುದ್ದಿದ್ದಾನೆ. ಬಳಿಕ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಎರಡು ಕಾರು ಜಖಂಗೊಂಡಿದೆ. ಈ ವೇಳೆ ಅಲ್ಲೇ ಇದ್ದ ತಾಯಿ- ಮಗು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. […]
ಪಡುಬಿದ್ರಿಯಲ್ಲಿ ಅಂಬೇಡ್ಕರ್ ಯುವ ಸೇನೆಯ ಅಧ್ಯಕ್ಷರ ಹತ್ಯೆಗೆ ಸಂಚು; ದೂರು ದಾಖಲು
ಪಡುಬಿದ್ರಿ: ಕಾಪು ತಾಲೂಕು ಅಂಬೇಡ್ಕರ್ ಯುವ ಸೇನೆಯ ಅಧ್ಯಕ್ಷರ ಹತ್ಯೆಗೆ ಸುಪಾರಿ ನೀಡಿರುವ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಅಂಬೇಡ್ಕರ್ ಯುವ ಸೇನೆಯ ಅಧ್ಯಕ್ಷ ಲೋಕೇಶ್ ಅಂಚನ್ ಪೊಲೀಸರಿಗೆ ದೂರು ನೀಡಿದ್ದಾರೆ. ಪಡುಬಿದ್ರಿ ಕಂಚಿನಡ್ಕ ನಿವಾಸಿ ಮನ್ಸೂರ್ ಎಂಬಾತ ನನ್ನ ಕೊಲೆಗೆ ಸುಪಾರಿ ನೀಡಿದ್ದು, ಡಿ. 31ರಂದು ರಿಕ್ಷಾ ಚಾಲಕರೊಬ್ಬರ ಮೂಲಕ ಈ ವಿಷಯ ನನಗೆ ತಿಳಿಯಿತು. ಅಲ್ಲದೆ, ಕೊಲೆಗೆ ಸಂಚು ರೂಪಿಸಿರುವ ಕುರಿತು ಪಡುಬಿದ್ರಿ ಪಂಚಾಯತ್ ಸದಸ್ಯರಾದ ಹಸನ್ ಬಾವಾ, ಫಿರೋಜ್, […]