ಬೈಲಕೆರೆ ವನಿತಾ ರೊಡ್ರಿಗಸ್ ಸಂಶಯಾಸ್ಪದ ಸಾವಿನ ಕುರಿತು ಸಮಗ್ರ ತನಿಖೆಗೆ ಸ್ಥಳೀಯರ ಆಗ್ರಹ
ಕಳೆದ ಡಿ. 31 ರಂದು ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದ ಬೈಲಕೆರೆ ನಿವಾಸಿ 32 ವರ್ಷದ ವನಿತಾ ರೊಡ್ರಿಗಸ್ ಅವರ ಸಾವಿನ ಬಗ್ಗೆ ಸೂಕ್ತವಾದ ತನಿಖೆ ಮಾಡಬೇಕೆಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ. ವನಿತಾ ರಾಡ್ರಿಗಸ್ ಡಿ. 28 ರಂದು ಹಟ್ಟಾತ್ ಅನಾರೋಗ್ಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಚಿಕಿತ್ಸೆ ಫಲಕಾರಿಯಾಗದೆ ಡಿ 31 ರಂದು ಮೃತರಾಗಿದ್ದು, ಕೋವಿಡ್ ಲಸಿಕೆ ಪಡೆದ ಹಿನ್ನಲೆಯಲ್ಲಿ ಮೃತರಾಗಿದ್ದಾರೆ ಎಂದು ಮೃತರ ಗಂಡ ಸುಳ್ಳು ಪ್ರಚಾರ ನಡೆಸಿದ್ದರು. ಆದರೆ ವನಿತಾರಿಗೆ ಅವರ ಗಂಡ ಹಲವಾರು […]
ಇಂಧನ ಸಚಿವ ಸುನಿಲ್ ಕುಮಾರ್ ಗೆ ಕೋವಿಡ್ ಪಾಸಿಟಿವ್
ಉಡುಪಿ: ಇಂಧನ, ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ಸ್ವತಃ ಸಚಿವರು ಟ್ವಿಟರ್ ಮಾಡಿ ಮಾಹಿತಿ ನೀಡಿದ್ದಾರೆ. ತನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಸಚಿವ ಸುನಿಲ್ ಕುಮಾರ್ ಗೆ ಎರಡನೇ ಬಾರಿಗೆ ಕೊರೊನಾ ಸೋಂಕು ತಗುಲಿದ್ದು, ಕಳೆದ ವರ್ಷ ಕೂಡ ಸಚಿವರು ಸೋಂಕಿಗೆ ತುತ್ತಾಗಿದ್ದಾರೆ.
ಬೈಲಕೆರೆ ವನಿತಾ ರೊಡ್ರಿಗಸ್ ಸಂಶಯಾಸ್ಪದ ಸಾವಿನ ಕುರಿತು ಸಮಗ್ರ ತನಿಖೆಗೆ ಸ್ಥಳೀಯರ ಆಗ್ರಹ
ಉಡುಪಿ: ಕಳೆದ ಡಿ. 31 ರಂದು ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದ ಬೈಲಕೆರೆ ನಿವಾಸಿ 32 ವರ್ಷದ ವನಿತಾ ರೊಡ್ರಿಗಸ್ ಅವರ ಸಾವಿನ ಬಗ್ಗೆ ಸೂಕ್ತವಾದ ತನಿಖೆ ಮಾಡಬೇಕೆಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ. ವನಿತಾ ರಾಡ್ರಿಗಸ್ ಡಿ. 28 ರಂದು ಹಟ್ಟಾತ್ ಅನಾರೋಗ್ಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಚಿಕಿತ್ಸೆ ಫಲಕಾರಿಯಾಗದೆ ಡಿ 31 ರಂದು ಮೃತರಾಗಿದ್ದು, ಕೋವಿಡ್ ಲಸಿಕೆ ಪಡೆದ ಹಿನ್ನಲೆಯಲ್ಲಿ ಮೃತರಾಗಿದ್ದಾರೆ ಎಂದು ಮೃತರ ಗಂಡ ಸುಳ್ಳು ಪ್ರಚಾರ ನಡೆಸಿದ್ದರು. ಆದರೆ ವನಿತಾರಿಗೆ ಅವರ ಗಂಡ […]
ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆ: ಅರ್ಜಿ ಆಹ್ವಾನ
ಉಡುಪಿ: ಉಡುಪಿ ನಗರಸಭೆಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ದೀನದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಗೌರವಧನದೊಂದಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ ನಗರಸಭೆಯಿಂದ ರಚಿಸಲ್ಪಟ್ಟ 18 ರಿಂದ 45 ವರ್ಷದೊಳಗಿನ, ಸ್ವ-ಸಹಾಯ ಗುಂಪು ಅಥವಾ ಪ್ರದೇಶ ಮಟ್ಟದ ಒಕ್ಕೂಟದ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಜನವರಿ […]
ಉಡುಪಿ: ವ್ಯಕ್ತಿ ನಾಪತ್ತೆ
ಉಡುಪಿ: ಮೈಸೂರಿನ ಹೋಟೆಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ಗುಡ್ಡಿಮನೆ ನಡುಜೆಡ್ಡು ನಿವಾಸಿ ಮಂಜುನಾಥ ಮರಕಾಲ (48) ಎಂಬ ವ್ಯಕ್ತಿಯು ನವೆಂಬರ್ 5 ರಂದು ಕೆಲಸದ ಸ್ಥಳದಿಂದ ನಾಪತ್ತೆಯಾಗಿರುತ್ತಾರೆ. 5 ಅಡಿ 10 ಇಂಚು ಎತ್ತರ, ದಪ್ಪ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಅಥವಾ ಕಂಟ್ರೋಲ್ ರೂಂ ದೂ. ಸಂಖ್ಯೆ: 0820-2526444, ಬ್ರಹ್ಮಾವರ […]