ಭೂ ಒಡೆತನ ಯೋಜನೆಯಡಿ ಜಮೀನು ಖರೀದಿ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ಅಧೀನಕ್ಕೊಳಪಟ್ಟಿರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಭೂ ಒಡೆತನ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು, ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಘಟಕ ವೆಚ್ಚ 15 ಲಕ್ಷ ರೂ. ಗಳಲ್ಲಿ ಲಭ್ಯವಾಗುವಷ್ಟು ಖುಷ್ಕಿ ಅಥವಾ ತರಿ ಅಥವಾ ಭಾಗಾಯ್ತು ಜಮೀನನ್ನು ಖರೀದಿಸಿಕೊಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಹೊರತುಪಡಿಸಿ ಇತರೆ ಜಾತಿಗೆ ಸೇರಿದ […]
ಉಡುಪಿXPRESS ನ ಪರ್ಯಾಯ ವಿಶೇಷ ಸಂಚಿಕೆ “ಪರ್ಯಾಯ ಪುಣ್ಯೋತ್ಸವ” ಬಿಡುಗಡೆ
ಉಡುಪಿ: ಉಡುಪಿ ಮೀಡಿಯಾ ನೆಟ್ ವರ್ಕ್ ಉಡುಪಿXPRESS.COM ನ “ಪರ್ಯಾಯ ಪುಣ್ಯೋತ್ಸವ” ಪರ್ಯಾಯ ವಿಶೇಷ ಸಂಚಿಕೆಯನ್ನು ಪಲಿಮಾರು ಮಠದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಅವರು ಸೋಮವಾರ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿXPRESS ನ ಪ್ರಧಾನ ಸಂಪಾದಕರಾದ ಪ್ರಸಾದ್ ಶೆಣೈ, ಸಹ ಸಂಪಾದಕರಾದ ಜೀವನ್ ಶೆಟ್ಟಿ, ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥರಾದ ಸ್ವರೂಪ್ ಶ್ರಿಯಾನ್, ಶುಭನ್ ಆಚಾರ್ಯ ಉಪಸ್ಥಿತರಿದ್ದರು.
ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಣೆ: ರಾಮ್ ಸೇನಾ ಆಕ್ರೋಶ
ಉಡುಪಿ: ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೆಡ್ ನಲ್ಲಿ ಭಾಗವಹಿಸಲು ಪ್ರತೀ ರಾಜ್ಯದಿಂದ ಒಂದೊಂದು ಸ್ತಬ್ಧ ಚಿತ್ರ ಕಳುಹಿಸುವುದು ವಾಡಿಕೆ. ಅದರಂತೆ ಈ ಬಾರಿ ಕೇರಳ ರಾಜ್ಯವು ವಿಶ್ವ ವಿಖ್ಯಾತ ಸಮಾಜ ಸುಧಾರಣೆಯ ಹರಿಕಾರ “ಬ್ರಹ್ಮಶ್ರೀ ನಾರಾಯಣ ಗುರುಗಳ” ಸ್ತಬ್ಧ ಚಿತ್ರವನ್ನು ಕಳುಹಿಸಿತ್ತು. ಆದರೆ ಕೇಂದ್ರ ಸರ್ಕಾರ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿಶ್ವಮಾನ್ಯ ಸಂತನಿಗೆ ಮಾಡಿದ ಅಗೌರವ ಎಂದು ಉಡುಪಿ ಜಿಲ್ಲಾ ರಾಮ್ ಸೇನೆಯು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ […]
ಬೆಳ್ಮಣ್: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ನಡೆದಿದೆ. ಬೆಳ್ಮಣ್ ಗ್ರಾಮದ 44 ವರ್ಷ ಪ್ರಾಯದ ರವಿ ಮೂಲ್ಯ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ರವಿ ಕಳೆದ ನಾಲ್ಕೈದು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಉಡುಪಿ ಬಾಳಿಗಾ ಆಸ್ಪತ್ರೆಯ ವೈದ್ಯಾಧಿಕಾರಿಯವರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಮಾನಸಿಕ ಖಾಯಿಲೆ ಗುಣವಾಗದ ಕಾರಣದಿಂದ ಮನನೊಂದು ರವಿ ಅವರು, ಜ.16ರಂದು ರಾತ್ರಿ 9 ಗಂಟೆ ಸುಮಾರಿಗೆ ಮನೆಯ ಸಮೀಪದ ಬಾವಿಗೆ […]
ಉಡುಪಿ ಕೃಷ್ಣಾಪುರ ಪರ್ಯಾಯೋತ್ಸವಕ್ಕೆ ರಾಯಚೂರಿನ ಭಕ್ತರಿಂದ ಹೊರಕಾಣಿಕೆ ಸಮರ್ಪಣೆ
ಶ್ರೀಕೃಷ್ಣಾಪುರ ಪರ್ಯಾಯೋತ್ಸವಕ್ಕೆ, ರಾಯಚೂರಿನ ಶ್ರೀಕೃಷ್ಣಭಕ್ತರಿಂದ 220 ಕ್ವಿಂಟಲ್ ಅಕ್ಕಿ ಮತ್ತು ಬೆಲ್ಲವನ್ನು ಪರ್ಯಾಯ ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗು ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಮುಖಾಂತರ ಭಾವೀಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರಿಗೆ ಪರ್ಯಾಯ ಕಾಣಿಕೆಯಾಗಿ ಅರ್ಪಿಸಿದರು. ಈ ಸಂದರ್ಭದಲ್ಲಿ, ಪರ್ಯಾಯೋತ್ಸವ ಸಮಿತಿಯ ಅಧ್ಯಕ್ಷರಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್, ಜೊತೆಕಾರ್ಯದರ್ಶಿ ರಾಜಗೋಪಾಲ ಭಟ್, ಪ್ರವೀಣ ಉಪಾಧ್ಯಾಯ, ಹೊರೆಕಾಣಿಕೆ ಸಮಿತಿಯ ಸಂಚಾಲಕರಾದ ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.