ನವೀಕೃತ ಅಂಬಲಪಾಡಿ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ
ಉಡುಪಿ: ಖ್ಯಾತ ವ್ಯಾಯಾಮ ಶಿಕ್ಷಕರಾಗಿದ್ದ ಅಂಬಲಪಾಡಿ ದಿ| ಕುಸ್ತಿ ಐತಪ್ಪ ಸುವರ್ಣರವರಿಂದ ಸ್ಥಾಪಿಸಲ್ಪಟ್ಟಿದ್ದ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯ ನವೀಕೃತ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಇದರ ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಜ.17ರಂದು ಕುತ್ಪಾಡಿ ಕಾನಂಗಿ ಬಾಲಕೃಷ್ಣ ಭಟ್ ರವರ ಪೌರೋಹಿತ್ಯದಲ್ಲಿ ಸರಳ ರೀತಿಯಲ್ಲಿ ನೆರವೇರಿತು. ಶ್ರೀ ನಾರಾಯಣ ಗುರು ಭಜನಾ ಮಂಡಳಿ ಕಿದಿಯೂರು ಇವರಿಂದ ಭಜನಾ ಸೇವೆ ನಡೆಯಿತು. ಮಹಾಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ […]
ಹೆಬ್ರಿ: ಕಾಲು ಜಾರಿ ಬಾವಿಗೆ ಬಿದ್ದು ವೃಧ್ಧೆ ಮೃತ್ಯು
ಹೆಬ್ರಿ: ನಡೆದುಕೊಂಡು ಹೋಗುತ್ತಿದ್ದಾಗ ಮೈ ವಾಲಿ ಕಾಲುಜಾರಿ ಬಾವಿಗೆ ಬಿದ್ದು ವೃಧ್ಧೆಯೊಬ್ಬದು ಮೃತಪಟ್ಟ ಘಟನೆ ಹೆಬ್ರಿಯಲ್ಲಿ ನಡೆದಿದೆ. ಕಮಲ ಪೂಜಾರ್ತಿ ಮೃತಪಟ್ಟವರು (90). ಜ.17 ರಂದು ಮಗ ಶೇಖರ ಪೂಜಾರಿ ಮನೆಯಿಂದ ದೇವಿ ಪೂಜಾರಿ ಮನೆಗೆ ಕಮಲಾ ಪೂಜರ್ತಿಯವರು ನಡೆದುಕೊಂಡು ಹೋಗುವಾಗ ಮೈ ವಾಲಿ ಆಕಸ್ಮಿಕವಾಗಿ ಮನೆ ಹತ್ತಿರದ ಆವರಣವಿಲ್ಲದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದಿನಿಂದ ಶ್ರೀಕೃಷ್ಣಾಪುರ ಪರ್ಯಾಯ ಆರಂಭ: ಚತುರ್ಥ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಿದ ವಿದ್ಯಾಸಾಗರತೀರ್ಥ ಸ್ವಾಮೀಜಿ
ಉಡುಪಿ: ಕಾಪು ಬಳಿಯ ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪವಿತ್ರ ಸ್ನಾನ ಮಾಡಿ ಬಳಿಕ ಉಡುಪಿ ಆಗಮಿಸಿ ಜೋಡುಕಟ್ಟೆಯಲ್ಲಿ ಪಟ್ಟದ ದೇವರಿಗೆ ಮಂಗಳಾರತಿ ಬೆಳಗಿಸಿ ಪರ್ಯಾಯ ಮೆರವಣಿಗೆ ಆರಂಭವಾಯಿತು. ಉಡುಪಿಯ ರಥಬೀದಿಯ ಕನಕನ ಕಿಂಡಿಯಲ್ಲಿ ಶ್ರೀ ಕೃಷ್ಣದೇವರ ದರ್ಶನಮಾಡಿ ನವಗ್ರಹ ದಾನ ನೀಡಿ ಚಂದ್ರಮೌಳೀಶ್ವರ ಮತ್ತು ಅನಂತೇಶ್ವರ ದೇವರ ದರ್ಶನ ಪಡೆದು ಅನಂತೇಶ್ವರದಲ್ಲಿ ಶ್ರೀ ಮಧ್ವಾಚಾರ್ಯರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಸಿ ಶ್ರೀ ಕೃಷ್ಣ ಮಠದ ಮುಂಭಾಗದಲ್ಲಿ ಶ್ರೀ ಈಶಪ್ರಿಯ ತೀರ್ಥ […]
ಉಡುಪಿ: ಯುವತಿ ನಾಪತ್ತೆ
ಉಡುಪಿ: ಮದುವೆ ಸಮಾರಂಭದ ಪ್ರಯುಕ್ತ ಜನವರಿ 16 ರಂದು ಕೆಮ್ಮಣ್ಣುವಿನ ಲಿಟ್ಲ್ ಫ್ಲವರ್ ಸಭಾಭವನಕ್ಕೆ ತೆರಳಿದ್ದ ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ನಿಮ್ರಾಜ್ (19) ಎಂಬ ಯುವತಿಯು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋದಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447 ಅಥವಾ ಉಡುಪಿ ವೃತ್ತ ನಿರೀಕ್ಷಕರು […]
ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆ: ಮುಂದೂಡಿಕೆ
ಉಡುಪಿ: ಪ್ರಸ್ತುತ ಕೋವಿಡ್-19 ಸೊಂಕಿನ ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತ್ ವತಿಯಿಂದ ಜನವರಿ 21 ರಂದು ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಸ್ಫರ್ದೆಯನ್ನು ಮುಂದೂಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸ್ಪರ್ಧೆಯ ರಾಜ್ಯ ಸಂಯೋಜಕಿ ಮೀನಾಕ್ಷಿ ಶಿವಾನಂದ ಕುಡಸೋಮಣ್ಣವರ ಮೊ.ನಂ: 7353960666 ಅಥವಾ ಜಿಲ್ಲಾ ಸಂಯೋಜಕರನ್ನು ಸಂಪರ್ಕಿಸುವಂತೆ ರಾಜ್ಯ ವಿಜ್ಞಾನ ಪರಿಷತ್ನ ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.