ವೀಕೆಂಡ್ ಕರ್ಫ್ಯೂ ಭವಿಷ್ಯ ನಾಳೆ ನಿರ್ಧಾರ: ಸಿಎಂ

ಬೆಂಗಳೂರು: 10-12 ದಿನಗಳ ಕಾಲ ಕ್ವಾರಂಟೈನ್ ಇದ್ದು ಕೋವಿಡ್ ನೆಗೆಟಿವ್ ವರದಿ ಬಂದಿದ್ದು ಇದೀಗ ಸಂಪೂರ್ಣ ಗುಣಮುಖನಾಗಿರುವುದರಿಂದ ಇಂದು ಬುಧವಾರದಿಂದ ದೈನಂದಿನ ಕೆಲಸ ಕಾರ್ಯಗಳು ಕಚೇರಿಯಲ್ಲಿ ಮುಂದುವರಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿನ್ನೆ ಜಿಲ್ಲಾಧಿಕಾರಿಗಳ ಸಭೆಯನ್ನು ವರ್ಚುವಲ್ ಮಾಡಲಾಗಿದ್ದು, ಯಾವ ಜಿಲ್ಲೆಗಳಲ್ಲಿ ಕೋವಿಡ್ ಲಸಿಕೆಯ ಕೊರತೆಯಿದೆಯೋ ಅಲ್ಲಿ ಲಸಿಕೆ ಪ್ರಮಾಣ ಹೆಚ್ಚು ಮಾಡಬೇಕೆಂದು ವಿಶೇಷವಾಗಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವುದು, ಕೋವಿಡ್ ವಾರಿಯರ್ಸ್ ಗೆ ಇನ್ನಷ್ಟು ತೀವ್ರಗತಿಯಲ್ಲಿ ನೀಡುವುದು ಸರ್ಕಾರದ ಆದ್ಯತೆಯಾಗಿದೆ ಎಂದರು. ಶುಕ್ರವಾರ […]