ಉಡುಪಿ: ಅನುಗ್ರಹ ಕಾಂಪ್ಲೆಕ್ಸ್ ನಲ್ಲಿ ಬೆಂಕಿ ಅವಘಡ; ಅಪಾರ ವಸ್ತುಗಳಿಗೆ ಹಾನಿ

ಉಡುಪಿ: ಉಡುಪಿ ನಗರದ ಮೈನ್ ಶಾಲೆಯ ಎದುರಿನ ಅನುಗ್ರಹ ಕಾಂಪ್ಲೆಕ್ಸ್ ನಲ್ಲಿ ಗುರುವಾರ ರಾತ್ರಿ 9 ಗಂಟೆಯ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅನಾಹುತ ಸಂಭವಿರುವ ಸಾಧ್ಯತೆ ಇದ್ದು, ಹಲವಾರು ವಸ್ತುಗಳಿಗೆ ಹಾನಿಯಾಗಿದೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಈ ದುರ್ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಮುಕ್ತ ವಿ.ವಿ ಪರೀಕ್ಷಾ ಶುಲ್ಕ ಪಾವತಿಗೆ ಸೂಚನೆ

ಉಡುಪಿ : ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2001-02 ರಿಂದ 2014-15 ಹಾಗೂ 2018-19, 2019-20 ಸ್ನಾತಕ ಪದವಿ, ಎಲ್.ಎಲ್.ಎಂ, ಎಂ.ಬಿ.ಎ(ಲಾ), ಎಂ.ಟಿ.ಎA ಪದವಿಯ ಪುನಾರಾವರ್ತಿತ ವಿದ್ಯಾರ್ಥಿಗಳು ಹಾಗೂ 2020-21 ನೇ ಶೈಕ್ಷಣಿಕ ಸಾಲಿನಲ್ಲಿ (ಜನವರಿ ಆವೃತಿ) ಪ್ರವೇಶಾತಿ ಪಡೆದ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಲಿಬ್, ಐ.ಎಸ್ಸಿ, ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ, ಎಸ್ಸಿ ಮತ್ತು ಎಲ್ಲಾ ಸ್ನಾತಕ, ಸ್ನಾತಕೋತ್ತರ ಡಿಪ್ಲೋಮಾ, ಸರ್ಟಿಫಿಕೇಟ್ ಕಾರ್ಯಕ್ರಮಗಳ ವಿದ್ಯಾರ್ಥಿಗಳು ವಾರ್ಷಿಕ ಅಥವಾ ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕವನ್ನು […]

ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು   https://ssp.postmatric.karnataka.gov.in ನಲ್ಲಿ ನೇರವಾಗಿ ಮಾರ್ಚ್ 31 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ವಿದ್ಯಾರ್ಥಿವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in/udupi/public  ಸಹಾಯವಾಣಿ ಸಂಖ್ಯೆ :8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ […]

ಕಾರ್ಕಳ: ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ

ಉಡುಪಿ: ಕೊರೊನಾ ಭೀತಿಯಿಂದ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಹಿರ್ಗಾನ ಗ್ರಾಮದ ಹೊಸಮಾರು ಮನೆ ನಾರಾಯಣ ಆಚಾರ್ಯ ಅವರ ಪತ್ನಿ ಲಕ್ಷ್ಮೀ (65) ಆತ್ಮಹತ್ಯೆಗೆ ಶರಣಾದ ಮಹಿಳೆ. ಲಕ್ಷ್ಮೀ ಅವರು ಕೊರೊನಾ ಸೋಂಕಿನ ಬಗ್ಗೆ ಭಯಭೀತರಾಗಿದ್ದರು. ಇದರಿಂದಾಗಿ ನನಗೆ ಕೊರೊನಾ ಬಂದಿದೆಯೆಂದು ಚೀಟಿ ಬರೆದಿಟ್ಟಿದ್ದರು. ಕೊರೊನಾಕ್ಕೆ ಹೆದರಿ ಡೀಸೆಲ್‌ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ […]

ಪ್ರಸಾರ ಭಾರತಿ ಹುದ್ಧೆಗಳಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ಪ್ರಸಾರ ಭಾರತಿ: ಪ್ರಸಾರ ಭಾರತಿಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಪನ್ಮೂಲ ವ್ಯಕ್ತಿ ​, ವಿಡಿಯೋ ಪರ್ಸನ್​, ವಿಡಿಯೋ ಅಸಿಸ್ಟೆಂಟ್, ಪೋಸ್ಟ್​ ಪ್ರೊಡಕ್ಷನ್​ ಅಸಿಸ್ಟೆಂಟ್, ಜನರಲ್ ಅಸಿಸ್ಟೆಂಟ್ ಹಾಗೂ ಇತರೆ ಹುದ್ದೆಗಳಿಗೆ  ಆಹ್ವಾನಿಸಿಲಾಗಿದೆ. ಆಸಕ್ತ ಅಭ್ಯರ್ಥಿಗಳು  ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ  prasarbharati.gov.in  ಗೆ ಭೇಟಿ ನೀಡಬಹುದು. ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಯ ಮಾಹಿತಿ:ಸಂಪನ್ಮೂಲ ವ್ಯಕ್ತಿ, ವಿಡಿಯೋ ಪರ್ಸನ್​, ವಿಡಿಯೋ ಅಸಿಸ್ಟೆಂಟ್​, ಪೋಸ್ಟ್​​ ಪ್ರೊಡಕ್ಷನ್​ ಅಸಿಸ್ಟೆಂಟ್​​,ಜನರಲ್ ಅಸಿಸ್ಟೆಂಟ್ ವಿದ್ಯಾರ್ಹತೆ: […]