ಉಡುಪಿ: ನಾರಾಯಣ ಗುರುಗಳ ಸ್ತಬ್ದಚಿತ್ರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಬಿಲ್ಲವ ಸಂಘಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿರುವ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿ ಹಾಗೂ ನಾರಾಯಣ ಗುರುಗಳ ಸ್ತಬ್ದಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಉಡುಪಿ ಜಿಲ್ಲೆಯ ಸಮಸ್ತ ಬಿಲ್ಲವ ಸಂಘ ಹಾಗೂ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರಸಕ್ತ ವರ್ಷದ ಗಣರಾಜ್ಯೋತ್ಸವ ಪರೇಡಿಗೆ ಕೇರಳ ಸರ್ಕಾರ ಕಳುಹಿಸಿರುವ ಮಹಾಮಾನವತಾವಾದಿ, ಸಾಮಾಜಿಕ ಸಮಾನತೆಯ ಹರಿಕಾರರಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಥಬ್ದಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರವು […]

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಉದ್ಯೋಗವಕಾಶ: ನೇರ ಸಂದರ್ಶನ

ಧಾರವಾಡ: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 4 Part Time  ಟೀಚರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 12 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜನವರಿ 28 ರಂದು ನೇರ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ uasd.edu  ಗೆ ಭೇಟಿ ನೀಡಬಹುದು. ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂಎ, […]

ಶ್ರೀ ಪುತ್ತಿಗೆ ಮಠದ ಚತುರ್ಥ ಪರ್ಯಾಯದ ಪ್ರಮುಖ ಯೋಜನೆಗಳ ಕೇಂದ್ರಕಾರ್ಯಾಲಯ ಉದ್ಘಾಟನೆ.

ಉಡುಪಿ: ಬರುವ 2024-25 ರಲ್ಲಿ ಉಡುಪಿಯ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ನಡೆಯಲಿರುವ ಶ್ರೀ ಪುತ್ತಿಗೆ ಮಠದ ಚತುರ್ಥ ಪರ್ಯಾಯದ ನಿಮಿತ್ತವಾಗಿ ಸಂಕಲ್ಪಿಸಿರುವ ಪ್ರಮುಖ ಯೋಜನೆಗಳ ಕಾರ್ಯಾಲಯ “ಅಂತರ್ಯಾಮಿ” ಕೇಂದ್ರವನ್ನು ಶ್ರೀ ಪುತ್ತಿಗೆ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರು ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪರ್ಯಾಯದ ಪ್ರಮುಖ ಯೋಜನೆಯಾದ ಕೋಟಿಗೀತಾಲೇಖನ ಯಜ್ಞದ ಅಭಿಯಾನಕ್ಕೂ ಪೂಜ್ಯ ಶ್ರೀಪಾದರು ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀ ನಾಗರಾಜ ಆಚಾರ್ಯ, ಶ್ರೀ ಪ್ರಸನ್ನ ಆಚಾರ್ಯ, ಶ್ರೀರತೀಶ್ ತಂತ್ರಿ, […]

ಯಕ್ಷಗಾನ ಕಲಾವಿದ ರಸ್ತೆ ಅಪಘಾತದಲ್ಲಿ ನಿಧನ 

 ಮೂಡಬಿದಿರೆ :  ಗಂಟಾಲಕಟ್ಟೆ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ (47) ಅವರು ನಿಧನರಾಗಿದ್ದಾರೆ. ಹಿರಿಯಡಕ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ವಾಮನ ಕುಮಾರ್ ಕಳೆದ ರಾತ್ರಿ ಕುಂದಾಪುರದ ಕೊಂಕಿ ಎಂಬಲ್ಲಿಂದ ಯಕ್ಷಗಾನ ಪ್ರದರ್ಶನ  ಮುಗಿಸಿ ಮಂಜಾನೆ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ.   ಪ್ರಸಂಗಕರ್ತ ಮನೋಹರ್ ಕುಮಾರ್ ಅವರಿಂದ ಪ್ರಭಾವಿತರಾಗಿ ಧರ್ಮಸ್ಥಳದಲ್ಲಿ ಕರ್ಗಲ್ಲು ವಿಶ್ವೇಶ್ವರ ಭಟ್ ಅವರಿಂದ ಯಕ್ಷಗಾನದ ಹೆಜ್ಜೆ ಕಲಿತಿದ್ದರು. ಪ್ರಾರಂಭದಲ್ಲಿ ಧರ್ಮಸ್ಥಳ ಮೇಳ, ನಂತರ ನಾಲ್ಕು ವರ್ಷಗಳ […]