ಬಸ್ರೂರು: ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಕುಂದಾಪುರ: ಅಡುಗೆಯ ಮನೆಯ ಒಲೆಗೆ ಹಾಕಿದ್ದ ಬೆಂಕಿ ಆಕಸ್ಮಿಕವಾಗಿ ಸೀರೆಗೆ ತಗುಲಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಸ್ರೂರು ಗ್ರಾಮದ ಹಟ್ಟಿಕುದ್ರು ಎಂಬಲ್ಲಿ ಶುಕ್ರವಾರ ನಡೆದಿದೆ. ಬಸ್ರೂರು ಗ್ರಾಮದ ಹಟ್ಟಿಕುದ್ರು ನಿವಾಸಿ 78 ವರ್ಷದ ಬುಡ್ಡು ಮೊಗವೀರ್ತಿ ಮೃತ ಮಹಿಳೆ. ಇವರು ಜ.19 ರಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಚಳಿ ಕಾಯಿಸುತ್ತಿದ್ದು, ಈ ವೇಳೆ ಅವರ ಸೀರೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊಟ್ಟೆ ಹಾಗೂ […]

ಉಡುಪಿ: ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿ ಕಳಿಸುತ್ತೇವೆ; ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ

ಉಡುಪಿ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಬಾಜ್ ವಿವಾದ ತಾರಕ್ಕೇರಿದ್ದು, ಇದೀಗ ಹಿಂದೂ ಸಂಘಟನೆಗಳು ಇದರ ವಿರುದ್ಧ ಸಿಡಿದೆದ್ದಿವೆ. ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ಹಾಕಿ ಕಳಿಸುತ್ತೇವೆ ಎಂದು ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ ನೀಡಿದೆ. ಹಿಜಾಬ್ ವಿವಾದದ ಕುರಿತು ಶುಕ್ರವಾರ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಹಿಂದೂ ಜಾಗರಣ ವೇದಿಕೆಯ ಮಂಗಳೂರು ವಿಭಾಗದ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ಮತೀಯ ಬೀಜ ಬಿತ್ತಿ ಶೈಕ್ಷಣಿಕವಾಗಿ ತೊಂದರೆ ಕೊಡುವ […]

ಉಡುಪಿ: ಜ.24ರಂದು ‘ತುಳು-ಕೊಡವ ಭಾಷೆಗಳ ಅಳಿವು ಉಳಿವು’ ಪುಸ್ತಕ ಲೋಕಾರ್ಪಣೆ

ಉಡುಪಿ: ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಬರೆದಿರುವ ‘ತುಳು-ಕೊಡವ ಭಾಷೆಗಳ ಅಳಿವು ಉಳಿವು’ (ಸಂಸತ್ ಭಾಷಣಗಳು ಭಾಗ-1) ಪುಸ್ತಕ ಬಿಡುಗಡೆ ಸಮಾರಂಭ ಉಡುಪಿಯ ಬಡಗಬೆಟ್ಟು ಜಗನ್ನಾಥ ಸಭಾಭವನದಲ್ಲಿ ಜ.24ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಜಿ ಎಐಸಿಸಿ ಸದಸ್ಯ ಅಮೃತ್ ಶಣೈ ಮಾಹಿತಿ ನೀಡಿದರು. ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮಿನ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪುಸ್ತಕದ ಲೇಖಕರು ಆಗಿರುವ  ವಿಧಾನ ಪರಿಷತ್ […]

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಫ್ಯಾಕಲ್ಟಿ ಹುದ್ದೆಗಳು  ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಫ್ಯಾಕಲ್ಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಎಚ್​ಡಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೇಮಕಾತಿ […]

ಹಿಜಾಬ್ ವಿವಾದದ ಬಗ್ಗೆ ಶಿಕ್ಷಣ ಸಚಿವರ ನಿಲುವು ಸ್ವಾಗತಾರ್ಹ: ಯಶ್ ಪಾಲ್ ಸುವರ್ಣ.

ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಉಂಟಾದ ವಿವಾದದ ಬಗ್ಗೆ ಕಾಲೇಜು ಧಾರ್ಮಿಕ ಆಚರಣೆಯ ಕೇಂದ್ರವಲ್ಲ ಈ ಬಗ್ಗೆ ಯಾವುದೇ ಅಶಿಸ್ತಿಗೆ ಅವಕಾಶವಿಲ್ಲವೆನ್ನುವ ಮೂಲಕ ಕಠಿಣ ನಿಲುವು ತಳೆದ ಶಿಕ್ಷಣ ಸಚಿವರಾದ ಶ್ರೀ ನಾಗೇಶ್ ರವರ ನಿರ್ಧಾರವನ್ನು ಸ್ವಾಗತಿಸುವುದಾಗಿ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಹಿಜಾಬ್ ವಿಚಾರದಲ್ಲಿ ಬೆರಳೆಣಿಕೆಯ ವಿದ್ಯಾರ್ಥಿಗಳು ಗೊಂದಲ ಸೃಷ್ಟಿಸಿ ಕಾಲೇಜಿನ ಶೈಕ್ಷಣಿಕ ವಾತಾವರಣವನ್ನು ಹಾಳುಗೆಡವಿ ಇತರ ವಿದ್ಯಾರ್ಥಿಗಳ ವ್ಯಾಸಾಂಗಕ್ಕೂ ಸಮಸ್ಯೆ ಸೃಷ್ಟಿಸುತ್ತಿದ್ದರೆ. […]