ಶೃಂಗೇರಿ ಶಾರದಾಂಬೆ ದೇಗುಲದಲ್ಲಿ 10 ಅಡಿ ಉದ್ದದ ಕಾಳಿಂಗ ಪ್ರತ್ಯಕ್ಷ..

ಶೃಂಗೇರಿ: ಶೃಂಗೇರಿಯ ಶಾರದಾಂಬೆ ದೇವಾಲಯದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಭಕ್ತರು ಕಂಗಾಲಾಗಿದ್ದಾರೆ. ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಕಾಳಿಂಗನನ್ನು ಸ್ನೇಕ್ ಅರ್ಜುನ್ ಸೆರೆಹಿಡಿದು ಕೆರೆಕಟ್ಟೆ ಅರಣ್ಯಕ್ಕೆ ಬಿಡಲಾಯಿತು. -ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು.

ಕವಿ, ಹಿರಿಯ ಪತ್ರಕರ್ತ ಜಿ.ಎಂ.ಕುಲಕರ್ಣಿ ನಿಧನ

ಕವಿ, ಹಿರಿಯ ಪತ್ರಕರ್ತರಾಗಿದ್ದ  ಜಿ.ಎಂ.ಕುಲಕರ್ಣಿ(58) ಅವರು ತೀವ್ರ ಅನಾರೋಗ್ಯದಿಂದ ಇದ್ದು, ಹೃದಯದಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರು ‘ಕತ್ತಲಲ್ಲಿ ಕಾಲಿ ತಟ್ಟೆ ಹಿಡಿದವರು’ ಎಂಬ ಕವನ ಸಂಕಲನ ಹೊರತಂದಿದ್ದರು. ಅಲ್ಲದೆ ಜೊತೆಗೆ ‘ಸಿಂಚನ ಪ್ರಕಾಶ’ನ ಹೊಂದಿದ್ದರು. ತಮ್ಮ ಪ್ರಕಾಶನದ ಮೂಲಕ ಅನೇಕ ಲೇಖಕರ ಪುಸ್ತಕವನ್ನು ಪ್ರಕಟಿಸುತ್ತಿದ್ದರು. ಜಿ.ಎಂ.ಕುಲಕರ್ಣಿ ಅವರ ಕೊಡುಗೆ ಮಾಧ್ಯಮ ಲೋಕದಲ್ಲಿ ಅಪಾರವಾಗಿದ್ದು, ಹಾಗೂ ಅವರ […]

ಮೂಳೂರು ಬಳಿ‌ ಬೈಕ್ ಗೆ ಲಾರಿ ಡಿಕ್ಕಿ: ಬೈಕ್ ಸವಾರ ಸಾವು

ಕಾಪು: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಾಪು ತಾಲೂಕಿನ ಮೂಳೂರು ಸಿಎಸ್ಐ ಸ್ಕೂಲ್ ಮುಂಭಾಗದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಗಣೇಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಮೃತ ಗಣೇಶ್ ಆಚಾರ್ಯ ಪಲ್ಸರ್ ಬೈಕ್ ನಲ್ಲಿ ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದರು. ಈ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸಮೇತವಾಗಿ ರಸ್ತೆಗೆ ಎಸೆಯಲ್ಪಟ್ಟ ಗಣೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ […]

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶ: ಅವಧಿ ವಿಸ್ತರಣೆ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ, ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವೃತ್ತಿಪರ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 27 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ಅಥವಾ ಸಹಾಯವಾಣಿ […]

ಜಿಲ್ಲೆಯಲ್ಲಿ 4,253 ಯುವ ಮತದಾರರ ನೋಂದಣಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಜಿಲ್ಲೆಯಲ್ಲಿ ಈ ಸಾಲಿನ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ 4,253 ಯುವ ಮತದಾರರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ಹಾಲ್‌ನಲ್ಲಿ, ಭಾರತೀಯ ಚುನಾವಣಾ ಆಯೋಗವು 1-1-2022 ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಸಿದ್ಧಪಡಿಸಿರುವ ಭಾವಚಿತ್ರವುಳ್ಳ  ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ, ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು  ಹಸ್ತಾಂತರಿಸಿ ಮಾತನಾಡಿದರು. ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 4,87,676 ಪುರುಷರು, 5,25,155 ಮಹಿಳಾ ಮತದಾರರು, ಇತರೆ […]