ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿದ ಕೇಂದ್ರ ಸರಕಾರ: ಶೋಭಾ ಕರಂದ್ಲಾಜೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ, ಈ ಕುರಿತು ಕೇಂದ್ರ ಸರಕಾರದ ಗಮನವನ್ನು ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆಗೊಳಿಸಬೇಕು, ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಯಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ, ಶೋಭಾ ಕರಂದ್ಲಾಜೆಯವರಿಗೆ ಮನವಿಯನ್ನು ಸಲ್ಲಿಸಿತ್ತು. ರಾಜ್ಯದಲ್ಲಿ 10,100 ಕ್ಕೂ ಅಧಿಕ ನಾಡದೋಣಿಗಲಿದ್ದು, 60,000 ಕ್ಕಿಂತಲೂ ಹೆಚ್ಚಿನ ಮೀನುಗಾರರ ಜೀವನಾಧಾರವಾಗಿದೆ. ಕೇಂದ್ರ […]
ಬ್ರಹ್ಮಾವರ: ಕೆರೆಯಲ್ಲಿ ಮುಳುಗಿ ವ್ಯಕ್ತಿ ಮೃತ್ಯು
ಬ್ರಹ್ಮಾವರ: ಕೆರೆಗೆ ಸ್ನಾನ ಮಾಡಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಪೇತ್ರಿ ಮದಗ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಪೇತ್ರಿ ಮದಗ ಸಮೀಪದ ನಿವಾಸಿ 55 ವರ್ಷದ ಪಾಂಡು ನಾಯ್ಕ್ ಎಂದು ಗುರುತಿಸಲಾಗಿದೆ. ಅವರು ಇಂದು ಮಧ್ಯಾಹ್ನ ಪೇತ್ರಿ ಮದಗ ಕೆರೆಗೆ ಸ್ನಾನ ಮಾಡಲು ಹೋಗಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಕೆರೆಯಲ್ಲಿ ಸಾಕಷ್ಟು ಹೂಳು ತುಂಬಿದ್ದರಿಂದ ಸ್ಥಳೀಯರು ಯಾರೂ […]
ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿದೆ ನೌಕರಿ :ಈಗಲೇ ಅರ್ಜಿ ಸಲ್ಲಿಸಿ
ಮಂಗಳೂರು: ವಿಶ್ವವಿದ್ಯಾಲಯದಲ್ಲಿ(Mangalore University) ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಲ್ಯಾಬ್, ಲೈಬ್ರರಿ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಫೆಬ್ರವರಿ 4ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ mangaloreuniversity.ac.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಹುದ್ದೆಯ ಮಾಹಿತಿ: ಲ್ಯಾಬ್ ಅಸಿಸ್ಟೆಂಟ್ ಲೈಬ್ರರಿ ಅಸಿಸ್ಟೆಂಟ್ ಎ/ಸಿ […]
ಕೊನೆಗೂ ಆಯ್ತು ಜಿಲ್ಲಾ ಉಸ್ತುವಾರಿ ಸಚಿವರ ನೇಮಕ:ಯಾವ ಜಿಲ್ಲೆಗೆ ಯಾರು ಉಸ್ತುವಾರಿ?
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಇಬ್ಬರು ಪ್ರಮುಖ ಸಚಿವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿಲ್ಲ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಐದು ತಿಂಗಳ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗಿದೆ. ಇಷ್ಟು ದಿನ ಸ್ವಾತಂತ್ರ್ಯ ದಿನಾಚರಣೆ ಮತ್ತು ನವೆಂಬರ್ 1ರಂದು ಧ್ವಜಾರೋಹಣ ಮಾಡಲು ಮಾತ್ರ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿತ್ತು. ಇದೀಗ ಪೂರ್ಣ ಪ್ರಮಾಣದಲ್ಲಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಆದರೆ […]
ಮಣಿಪಾಲ: ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಬೀದಿನಾಟಕದ ಮೂಲಕ ಆರೋಗ್ಯ ಜಾಗೃತಿ
ಉಡುಪಿ ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಇವರ ಸಹಯೋಗದಲ್ಲಿ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಮುಂದಾಳತ್ವದಲ್ಲಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳ ಕಲಾ ತಂಡದಿಂದ ‘ತಾಯಿ ಮತ್ತು ಮಕ್ಕಳ ಆರೋಗ್ಯ, ಕ್ಷಯರೋಗ ಮತ್ತು ಕೊರೊನಾ ಮಹಾಮಾರಿ’ ಕುರಿತು ಮಾಹಿತಿ ನೀಡುವ ಜಾನಪದ ಕಲಾ ಪ್ರದರ್ಶನ ಹಾಗೂ ಬೀದಿನಾಟಕದ ಮೂಲಕ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಣಿಪಾಲದ ಟೈಗರ್ […]