ಉಡುಪಿ: ನಾಳೆ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ
ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ಬೆಳಗ್ಗೆ 9 ಗಂಟೆಗೆ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ […]
ಕಾರ್ಕಳ: ನಾಳೆ (ಜ.26) ನೂತನ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನೆ
ಕಾರ್ಕಳ: ನೂತನವಾಗಿ ಅಸ್ವಿತ್ವಕ್ಕೆ ಬಂದಿರುವ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನೆ ಸಮಾರಂಭ ಜ.26 ರಂದು ಪ್ರೈಮ್ ಮಾಲ್‌ನ್ 1ನೇ ಮಹಡಿಯಲ್ಲಿ ಕಚೇರಿ ಉದ್ಘಾಟನೆಗೊಳ್ಳಲಿದ್ದು, ಉಷಾ ಸೆಲೆಬ್ರೇಷನ್ ಹಾಲ್‌ನಲ್ಲಿ ನಾಳೆ ಬೆಳಿಗ್ಗೆ 10:30ಕ್ಕೆ ಉದ್ಘಾಟನಾ ಸಮಾರಂಭ ಜರಗಲಿದೆ. ಕೇಮಾರು ಶ್ರೀ ಸಾಂದೀಪನೀ ಸಾಧನಾಶ್ರಮದ ಶ್ರೀ ಈಶವಿಠಲ ದಾಸ ಸ್ವಾಮೀಜಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಲಿರುವರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ಬ್ಯಾಂಕ್ ಉದ್ಘಾಟಿಸಲಿರುವರು. ಎಂಆರ್‌ಜಿ ಗ್ರೂಪ್ಸ್ ಅಧ್ಯಕ್ಷ […]
ವಸತಿ ಸೌಲಭ್ಯ: ಅರ್ಜಿ ಆಹ್ವಾನ
ಉಡುಪಿ: ಉಡುಪಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಮನೆ ನಿರ್ಮಿಸಲು ವಾಜಪೇಯಿ ನಗರ ವಸತಿ ಯೋಜನೆಯಡಿ 76 ಫಲಾನುಭವಿಗಳಿಗೆ 1,20,000 ರೂ. ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯಡಿ 24 ಫಲಾನುಭವಿಗಳಿಗೆ 2 ಲಕ್ಷ ರೂ. ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಸತಿ ಸೌಲಭ್ಯ ಪಡೆಯಲು, ಸ್ವಂತ ನಿವೇಶನ ಹೊಂದಿರುವ ಮಹಿಳೆ, ವಿಧುರ ಅಂಗವಿಕಲ ಹಾಗೂ ಹಿರಿಯ ನಾಗರೀಕರು ಸೂಕ್ತ ದಾಖಲೆಗಳೊಂದಿಗೆ ಫೆಬ್ರವರಿ 28 ರ ಒಳಗೆ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಿ […]
ಹೆಣ್ಣು ಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಾಣವಾಗಬೇಕು: ನ್ಯಾ.ಶರ್ಮಿಳಾ
ಉಡುಪಿ: ಹೆಣ್ಣು ಮಕ್ಕಳ ಬೆಳವಣಿಗೆಗೆ ಸುರಕ್ಷಿತ ವಾತಾವರಣ ನಿರ್ಮಿಸುವುದರ ಮೂಲಕ ಸಮಾಜದಲ್ಲಿನ ಲಿಂಗ ತಾರತಮ್ಯ ಸಮಸ್ಯೆಯನ್ನು ಸರಿಪಡಿಸಲು ಸಾಧ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸೋಮವಾರ, ಉಡುಪಿಯ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚೈಲ್ಡ್ಲೈನ್ 1098 ಉಡುಪಿ ಮತ್ತು ಶ್ರೀಕೃಷ್ಣ ರೋರ‍್ಯಾಕ್ಟ್ ಕ್ಲಬ್ ಇವರ ಜಂಟಿ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ […]
ಕಾರ್ಕಳ: ಅಪರಿಚಿತ ವ್ಯಕ್ತಿ ನೇಣಿಗೆ ಶರಣು
ಕಾರ್ಕಳ: ತಾಲೂಕಿನ ಕುಕ್ಕುಂದೂರು ಗ್ರಾಮದ ನೆಲ್ಲಿಗುಡ್ಡೆ ವಿವೇಕಾನಂದ ನಗರದ ಹಾಡಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನೆಲ್ಲಿಗುಡ್ಡೆ ವಿವೇಕಾನಂದ ನಗರದ ಯಶವಂತ ಎಂಬವರ ಅಂಗಡಿಯ ಎದುರಿನ ಹಾಡಿಯಲ್ಲಿ ಜ.24 ರಂದು ಬೆಳಿಗ್ಗೆ 11ಗಂಟೆ ಸುಮಾರಿಗೆ ಕೆಟ್ಟ ವಾಸನೆ ಬರುತ್ತಿದ್ದು, ಹಾಡಿಗೆ ಹೋಗಿ ನೋಡಿದಾಗ 45 ರಿಂದ 50 ವರ್ಷದ ಪ್ರಾಯದ ಗಂಡಸಿನ ಶವ ಮರದ ಕೊಂಬೆಗೆ ನೈಲಾನ್ ಹಗ್ಗವನ್ನು ಕಟ್ಟಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಾರೋ ಅಪರಿಚಿತ ವ್ಯಕ್ತಿ […]