ಮಣಿಪಾಲ: ಸಹರಾ ತಂಡದಿಂದ ಬಡವರಿಗೆ ಬಟ್ಟೆ ವಿತರಣೆ

ಗಣರಾಜ್ಯೋತ್ಸವದ ಅಂಗವಾಗಿ ಸಹರಾ ತಂಡದ ವತಿಯಿಂದ ಮಣಿಪಾಲದ ಸರಳೇಬೆಟ್ಟುವಿನ ಸ್ಲಮ್ ನಲ್ಲಿ ವಾಸಿಸುತ್ತಿರುವ ಬಡವರಿಗೆ ಬಟ್ಟೆಗಳನ್ನು ಗುರುವಾರ ವಿತರಿಸಲಾಯಿತು. ಸಹರಾ ತಂಡದ ವತಿಯಿಂದ ಉಡುಪಿ, ಮಣಿಪಾಲ ಸಹಿತ ಜಿಲ್ಲೆಯ ವಿವಿಧೆಡೆ ಇರುವ ಸುಮಾರು ಮೂರು ಸಾವಿರಕ್ಕೂ ಅಧಿಕ ಬಡವರಿಗೆ ಬಟ್ಟೆಗಳನ್ನು ವಿತರಣೆ ಮಾಡಲಾಯಿತು. ಸಹಾರಾ ತಂಡವು ಉಡುಪಿ ಜಿಲ್ಲೆ ಹಾಗೂ ಹೊರಗಿನಿಂದ ಸುಮಾರು 3500ರಿಂದ 4000 ಸಾವಿರ ಬಟ್ಟೆಗಳನ್ನು ಸಂಗ್ರಹಿಸಿದೆ. ಅವುಗಳನ್ನು ಜಿಲ್ಲೆಯ ವಿವಿಧ ಕಡೆ ಬಡವರಿಗೆ ವಿತರಿಸುವ ಕಾರ್ಯ ನಡೆಯುತ್ತಿದೆ. ಕಳೆದ ಮೂರು ವರ್ಷಗಳಿಂದ ಈ […]

ಟಾಟಾ ಗ್ರೂಪ್‌ಗೆ ಏರ್ ಇಂಡಿಯಾ ಅಧಿಕೃತವಾಗಿ ಹಸ್ತಾಂತರ: 69 ವರ್ಷದ ಬಳಿಕ ಮತ್ತೆ ಟಾಟಾ ಮಡಿಲಿಗೆ ಏರ್ ಇಂಡಿಯಾ.!

ನವದೆಹಲಿ: ಕೇಂದ್ರ ಸರ್ಕಾರ ಗುರುವಾರ ಅಧಿಕೃತವಾಗಿ ಏರ್ ಇಂಡಿಯಾವನ್ನು ಟಾಟಾ ಗ್ರೂಪ್‌ಗೆ ಹಸ್ತಾಂತರಿಸಲಾಗಿದೆ. 69 ವರ್ಷಗಳ ಬಳಿಕ ಪುನಃ ಟಾಟಾ ಮಡಿಲಿಗೆ ಏರ್ ಇಂಡಿಯಾ ಬಂದಿದೆ. ಟಾಟಾ ಗ್ರೂಪ್ ಕಂಪನಿಯ ಎನ್ ಚಂದ್ರಶೇಖರನ್ ಗುರುವಾರ ಕಂಪನಿ ಅಧಿಕೃತವಾಗಿ ಟಾಟಾ ಗ್ರೂಪ್ ಸುಪರ್ದಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ನಡೆಸಿದರು. ಕಳೆದ ವರ್ಷ ಸರ್ಕಾರ ಏರ್ ಇಂಡಿಯಾವನ್ನು ಟಾಟಾ ಗ್ರೂಪ್‌ನ ಹಿಡುವಳಿ ಕಂಪನಿಯ ಅಂಗಸಂಸ್ಥೆಯಾದ ಟಾಲೇಸ್ ಪ್ರೈವೇಟ್ ಲಿಮಿಟೆಡ್‌ಗೆ 18,000 ಕೋಟಿ ರೂಪಾಯಿಗಳಿಗೆ ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಮಾರಾಟ ಮಾಡಿತ್ತು. ಮಾರಾಟವನ್ನು […]

ಜ.28, 29: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಜನವರಿ 28 ಹಾಗೂ 29 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜ.28 ರಂದು ಸಂಜೆ 4 ರಿಂದ 6 ಗಂಟೆಯವರೆಗೆ ಕಾರ್ಕಳ ವಿಕಾಸ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜ.29 ರಂದು ಬೆಳಗ್ಗೆ 8 ಗಂಟೆಯಿಂದ 10.15 ರ ವರೆಗೆ ನಿಟ್ಟೆ, ಬೋಳ, ನಂದಳಿಕೆ ಹಾಗೂ ಬೆಳ್ಮಣ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿ […]

ಕೋವಿಡ್ ಸಹಾಯಧನ: ಕಟ್ಟಡ ಕಾರ್ಮಿಕರ ಮಾಹಿತಿ ಅಪ್‌ಡೇಟ್ ಮಾಡಲು ಸೂಚನೆ

ಉಡುಪಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಲಾದ ಕೋವಿಡ್ -19 ಎರಡನೇ ಅಲೆಯ ಸಹಾಯಧನ ಮೊತ್ತ 3000 ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ಶೇಕಡಾ 90 ರಷ್ಟು ಈಗಾಗಲೇ ಪಾವತಿ ಮಾಡಲಾಗಿದ್ದು, ಶೇ. 10 ರಷ್ಟು ಡೇಟಾದಲ್ಲಿ ಫಲಾನುಭವಿ ಆಧಾರ್ ಸಂಖ್ಯೆ ಅವರ ಬ್ಯಾಂಕ್ ಖಾತೆಗೆ ಜೋಡಣೆ ಆಗದ ಹಾಗೂ ಬ್ಯಾಂಕ್‌ನವರು ಖಾತೆಯನ್ನು ಎನ್.ಪಿ.ಸಿ.ಐ ಗೆ ಮ್ಯಾಪಿಂಗ್ ಮಾಡದೇ […]

ಜ.28: ಸಮಾಜ ಕಲ್ಯಾಣ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜನವರಿ 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.30 ರಿಂದ 9 ಗಂಟೆಯ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಗಂಟೆ 10 ಕ್ಕೆ ಬ್ರಹ್ಮಾವರದ ಹಂದಾಡಿ ಗ್ರಾಮ ಪಂಚಾಯತ್‌ನಲ್ಲಿ ಬ್ರಹ್ಮಾವರ ತಾಲೂಕು ಡಿ.ಸಿ ಮನ್ನಾ ಭೂಮಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ, ನಂತರ ಮುರುಡೇಶ್ವರಕ್ಕೆ ತೆರಳಲಿರುವರು.