ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯುವ ಬಗ್ಗೆ ಪರಿಶೀಲನೆ: ಸಚಿವ ಆಚಾರ್ ಹಾಲಪ್ಪ ಬಸಪ್ಪ
ಉಡುಪಿ, ಜ.28: ಕರಾವಳಿ ಜಿಲ್ಲೆಗಳ ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ […]
ಪರ್ಯಾಯ ಮಹೋತ್ಸದ ಸ್ವಚ್ಛತೆ ಕಾರ್ಯದಲ್ಲಿ ಅವ್ಯವಹಾರ: ಸಾಮಾನ್ಯ ಸಭೆಯಲ್ಲಿ ಸದಸ್ಯರ ಆರೋಪ
ಉಡುಪಿ: ಪರ್ಯಾಯ ಮಹೋತ್ಸದ ಸ್ವಚ್ಛತೆ ಕಾರ್ಯಕ್ಕೆ ಸಂಬಂಧಿಸಿ ನೀಡಲಾಗಿದ್ದ ಗುತ್ತಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂದು ನಗರಸಭಾ ಸದಸ್ಯರು ಶುಕ್ರವಾರ ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಆರೋಪಿಸಿದ್ದಾರೆ. ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪಿಸಿದ ನಗರಸಭೆ ಸದಸ್ಯರಾದ ಗಿರೀಶ್ ಅಂಚನ್ ಹಾಗೂ ಸಂತೋಷ್ ಜತ್ತನ್ನ ಅವರು, ಪರ್ಯಾಯ ಶುಚಿತ್ವ ಕಾರ್ಯದ ಗುತ್ತಿಗೆ 23ಲಕ್ಷ ರೂ. ಮೊತ್ತಕ್ಕೆ ನೀಡಲಾಗಿದೆ. ಆದರೆ ಗುತ್ತಿಗೆದಾರರಿಂದ ಅಷ್ಟು ಮೊತ್ತದ ಕೆಲಸ ಆಗಿಲ್ಲ ದೂರಿದರು. ಗುತ್ತಿಗೆದಾರರು ನೂರು […]
ಹಿಜಾಬ್ ವಿವಾದದ ಮೂಲಕ ತಾಳ್ಮೆ ಪರೀಕ್ಷೆಯ ಯತ್ನ ಬೇಡ: ಯಶ್ ಪಾಲ್ ಸುವರ್ಣ
ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಬೆರಳೆಣಿಕೆಯ ವಿದ್ಯಾರ್ಥಿನಿಯರು ಮತೀಯವಾದಿ ಸಂಘಟನೆಗಳ ಕುಮ್ಮಕ್ಕಿನಿಂದ ತರಗತಿಯಲ್ಲಿ ಹಿಜಾಬ್ ಧರಿಸಿ ವಿವಾದ ಸೃಷ್ಟಿಸಿ ಕಾಲೇಜಿನ ಶೈಕ್ಷಣಿಕ ವಾತಾವರಣ ಹದಗೆಡಿಸಲು ಯತ್ನಿಸುತ್ತಾ ನಮ್ಮ ತಾಳ್ಮೆ ಪರೀಕ್ಷೆಗೆ ಮುಂದಾಗಿದ್ದು ಮುಂದಿನ ದಿನದಲ್ಲಿ ಈ ಬಗ್ಗೆ ದಿಟ್ಟ ಉತ್ತರ ನೀಡಲು ಬದ್ಧ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಕಾಲೇಜಿನ ಅಭಿವೃದ್ಧಿ ಸಮಿತಿ ಕಾಲೇಜಿನ ಹಿತ ದೃಷ್ಟಿಯಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂಯಮದಿಂದ ಸಮಸ್ಯೆ ಬಗೆಹರಿಸಲು […]
ಉಡುಪಿ: ಲಾಡ್ಜ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ; ನಾಲ್ವರ ಬಂಧನ
ಉಡುಪಿ: ಇಲ್ಲಿನ ಸರ್ವಿಸ್ ಬಸ್ ನಿಲ್ದಾಣದ ಬಳಿ ಲಾಡ್ಜ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಇಂದು ಬಂಧಿಸಿದ್ದು, ಇಬ್ಬರು ಹುಡುಗಿಯರನ್ನು ವಶಕ್ಕೆ ಪಡೆದಿದ್ದಾರೆ. ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಪಕ್ಕಾ ಮಾಹಿತಿ ಮೇರೆಗೆ ಉಡುಪಿ ಸರ್ಕಲ್ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್ ಮತ್ತು ಅವರ ತಂಡ ಶುಕ್ರವಾರ ದಾಳಿ ನಡೆಸಿ, ಇಬ್ಬರು ಹುಡುಗಿಯರು ಮತ್ತು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗುರುರಾಜ್, ವಿಜಯ ಶೆಟ್ಟಿ, ಹೇಮಂತ್, ಸಂದೀಪ್ ಮೊಗವೀರ […]
ಮಂಗಳೂರಿನಲ್ಲಿಯೂ ಕುಸಿತಿದೆ ಗಾಳಿಯ ಗುಣಮಟ್ಟ: ಆತಂಕಕಾರಿ ವರದಿ
ಬೆಂಗಳೂರು: ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿರುವ ಆತಂಕಕಾರಿ ಮಾಹಿತಿ ಹೊರ ಬಿದ್ದಿದೆ. ದಕ್ಷಿಣಭಾರತದ 10 ವಾಯುಮಾಲಿನ್ಯ ಪೀಡಿತ ನಗರಗಳ ಪಟ್ಟಿಯಲ್ಲಿ ರಾಜ್ಯದ ಮೂರು ನಗರಗಳು ಸ್ಥಾನ ಪಡೆದಿವೆ. ಪರಿಸರ ಕಾಳಜಿ ಕುರಿತು ಜಾಗೃತಿ ಮೂಡಿಸುವ ಸಂಸ್ಥೆ ಗ್ರೀನ್ ಪೀಸ್ ಇಂಡಿಯಾ ಈ ಮಾಹಿತಿಯನ್ನು ಹೊರಗೆಡವಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಅಧ್ಯಯನ ವರದಿಯನ್ನು ಗ್ರೀನ್ ಪೀಸ್ ಸಂಸ್ಥೆ ಉಲ್ಲೇಖಿಸಿದೆ.