ಉಡುಪಿ: ಆದರ್ಶ ನರ್ಸಿಂಗ್ ಕಾಲೇಜು, ಪ್ಯಾರಾ ಮೆಡಿಕಲ್ ಸೈನ್ಸಸ್ ಉದ್ಘಾಟನೆ

ಉಡುಪಿ: ಅಲೆವೂರು ಗ್ರಾಮದ ರಾಂಪುರದಲ್ಲಿ ಆದರ್ಶ ಕಾಲೇಜ್ ಆಫ್ ನರ್ಸಿಂಗ್ ಮತ್ತು ಆದರ್ಶ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸಸ್ ಭಾನುವಾರ ಉದ್ಘಾಟನೆಗೊಂಡಿತು. ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಆದರ್ಶ ನರ್ಸಿಂಗ್, ಪ್ಯಾರಾ ಮೆಡಿಕಲ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ರಾಜ್ಯದಲ್ಲಿ ರೋಗಿಗಳನ್ನು ಆರೈಕೆ ಮಾಡುವ ದಾದಿಯರ ಕೊರತೆ ಇದ್ದು, ಅದನ್ನು ಸರಿದೂಗಿಸಲು ಇಂತಹ ತರಬೇತಿ ಸಂಸ್ಥೆಗಳು […]

ಮಲ್ಪೆ: ಪರಿಚಯಸ್ಥರಿಗೆ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕೊಟ್ಟು ಮೋಸ ಹೋದ ಮಹಿಳೆ

ಮಲ್ಪೆ: ಪರಿಚಯಸ್ಥರಿಗೆ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕೊಟ್ಟು ಮಹಿಳೆಯೊಬ್ಬರು ಮೋಸ ಹೋದ ಘಟನೆ ಪಡುತೋತ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ‌. ಗುಜ್ಜರಬೆಟ್ಟು ನಿವಾಸಿ ಪ್ರಮೀಳಾ ಮೆಂಡನ್ ವಂಚನೆಗೊಳಗಾದ ಮಹಿಳೆ. ಇವರಿಗೆ ಪರಿಚಯದವರಾದ ನೆರೆಮನೆಯ ನಿವಾಸಿ ಶಶಾಂಕ ಮತ್ತು ಆತನ ಗೆಳೆಯ ಕೌಶಿಕ್ ಎಂಬವರು ವಂಚನೆ ಎಸಗಿದ್ದಾರೆ. ಆರೋಪಿಗಳಿಬ್ಬರು ಪಿರ್ಯಾದಿದಾರರ ಮನೆಗೆ ಆಗಾಗ ಬಂದು ಹೋಗುತ್ತಿದ್ದು, ವಿಶ್ವಾಸದಿಂದ ಮಾತನಾಡಿ ಸಲುಗೆ ಬೆಳೆಸಿಕೊಂಡಿದ್ದರು. 2021ರ ಜನವರಿ‌ ತಿಂಗಳಲ್ಲಿ ಮನೆಗೆ ಬಂದ ಇಬ್ಬರು, ನಮಗೆ ತೀವ್ರ ಆರ್ಥಿಕ ಮುಗ್ಗಟ್ಟಿದ್ದು , […]

ಉಡುಪಿ- ದ.ಕ ಜಿಲ್ಲೆಯಲ್ಲಿ 1400 ಕಿಂಡಿ ಅಣೆಕಟ್ಟು ನಿರ್ಮಾಣ: ಸಚಿವ ಮಾಧುಸ್ವಾಮಿ

ಉಡುಪಿ: ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳಲ್ಲಿ 1400 ಕಿಂಡಿ ಅಣೆಕಟ್ಟುಗಳನ್ನು ಗುರುತಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು, ಈ ವರ್ಷ ಇದಕ್ಕಾಗಿ 500 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿ ಕಾರ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು. ಅವರು ಇಂದು ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 560 ಲಕ್ಷ ರೂ. ವೆಚ್ಚದಲ್ಲಿ 4 ಕಿಂಡಿ ಅಣೆಕಟ್ಟುಗಳನ್ನು ಕಾಮಗಾರಿಗಳನ್ನು ಉದ್ಘಾಟಿಸಿ […]

ಶಿರ್ವ: ಗ್ರಾಮ ಒನ್ ಕೇಂದ್ರ ಉದ್ಘಾಟನೆ

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಯೋಜನೆಯು ಶಿರ್ವ ಗ್ರಾಮದ ವ್ಯಾಪ್ತಿಯಲ್ಲಿ ಉದ್ಘಾಟನೆಗೊಂಡಿತು. 750ಕ್ಕೂ ಹೆಚ್ಚಿನ ಸೇವೆಗಳನ್ನು ಒಳಗೊಂಡ ಗ್ರಾಮ ಒನ್ ಕೇಂದ್ರವಾಗಿದ್ದು, ಆಧಾರ್ , ಇ-ಸ್ಟ್ಯಾಂಪ್ ಹಾಗೂ ಸೇವಾ ಸಿಂಧುವಿನ ಎಲ್ಲ ಸೇವೆಗಳನ್ನು ಗ್ರಾಮೀಣ ಭಾಗದ ನಾಗರಿಕರಿಗೆ ಹಲವು ಸೇವೆಗಳನ್ನು ಒದಗಿಸುವ ಸೇವಾ ವೇದಿಕೆ ಇದಾಗಿರುತ್ತದೆ. ಕಾರ್ಯಕ್ರಮವನ್ನು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರು ಕೆ.ಆರ್.ಪಾಟ್ಕರ್ ಉದ್ಘಾಟಿಸಿದರು. ಮುಖ್ಯ ಅಥಿತಿಗಳಾಗಿ ಶಿರ್ವ ಗ್ರಾಮ ಪಂಚಾಯತ್ ಲೆಕ್ಕಾಧಿಕಾರಿ ವಿಜಯ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ […]

ಕಾರ್ಕಳ: ಕಾರು ಹತ್ತಿಸಿ ಪೊಲೀಸರನ್ನೇ ಕೊಲೆ ಮಾಡಲು ಯತ್ನಿಸಿದ ಗೋ ಕಳ್ಳರು.!

ಗೋ ಕಳ್ಳರು ಪೋಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿರುವ ಘಟನೆ ಕಾರ್ಕಳ ತಾಲೂಕಿನ ಮಾಳ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಮಾಳ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ. ಈ ವೇಳೆ ಗೋವುಗಳನ್ನು ತುಂಬಿದ ಕಾರು ಮತ್ತು ರಕ್ಷಣೆ ಒದಗಿಸಲು ಬರುತಿದ್ದ ಬೈಕನ್ನು ರಸ್ತೆಗೆ ಬ್ಯಾರಿಕೇಡ್ ಅಡ್ಡ ಇಟ್ಟು ತಡೆಯಲು ಯತ್ನಿಸಿದ್ದಾರೆ. ಆ ವೇಳೆ ದುಷ್ಕರ್ಮಿಗಳು ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಗಾಯಗೊಂಡರೂ ಗೋಕಳ್ಳರನ್ನು ಬೆನ್ನತ್ತಿದ್ದು, ಈ ವೇಳೆ ಗೋವು ತುಂಬಿದ್ದ […]