ನಿಟ್ಟೂರು ಪ್ರೌಢಶಾಲೆಯ 14 ವಿದ್ಯಾರ್ಥಿಗಳಿಗೆ ಉಚಿತ ಎಲ್ ಪಿಜಿ ಗ್ಯಾಸ್ ವಿತರಣೆ
ಉಡುಪಿ ನಿಟ್ಟೂರು ಪ್ರೌಢಶಾಲೆಯ 14 ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಎಲ್ ಪಿಜಿ ಗ್ಯಾಸ್ ವಿತರಿಸಲಾಯಿತು. ಕಳೆದ ಏಳು ವರ್ಷಗಳಲ್ಲಿ ಶಾಲೆಯ 80 ವಿದ್ಯಾರ್ಥಿಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ. ಶಾಲೆಯ ಹಳೆ ವಿದ್ಯಾರ್ಥಿ, ದಾನಿ ಅನಂತ ಭಟ್ ಮಡಾಮಕ್ಕಿ ವಿದ್ಯಾರ್ಥಿಗಳಿಗೆ ಉಚಿತ ಎಲ್.ಪಿ.ಜಿ ಗ್ಯಾಸ್ ವಿತರಿಸಿದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಾಸ್ತಾವಿಕ ಮಾತನಾಡಿದರು. ಉಡುಪಿ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ| ಹರಿಶ್ಚಂದ್ರ, ನಿವೃತ್ತ ಮುಖ್ಯೋಪಾಧ್ಯಾಯ ಎಸ್. ವಿ. ಭಟ್, ಜಾಹ್ನವಿ […]
ಮಂಚಿ: ಪೂರ್ಣಪ್ರಜ್ಞ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದಿಂದ ಸಮುದಾಯ ಸೇವಾ ಶಿಬಿರ
ಮಣಿಪಾಲ: ಪೂರ್ಣಪ್ರಜ್ಞಾ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದ ವತಿಯಿಂದ ಒಂದು ದಿನದ ಸಮುದಾಯ ಸೇವಾ ಶಿಬಿರವನ್ನು ಶನಿವಾರ ಮಂಚಿ ರಾಜೀವನಗರ ಪರಿಸರದಲ್ಲಿ ಹಮ್ಮಿಕೊಳ್ಳಲಾಯಿತು. ಸೇವಾ ಶಿಬಿರದ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ, ಸ್ವಚ್ಛತಾ ಕಾರ್ಯಕ್ರಮ, ಹೆಣ್ಣು ಮಕ್ಕಳ ರಕ್ಷಣೆ ಕುರಿತಾದ ಜಾಥಾ ಮತ್ತು ಪರಿಸರ ಸ್ವಚ್ಛತೆ ಹಾಗೂ ನೈರ್ಮಲ್ಯದ ಸಮೀಕ್ಷೆಯನ್ನು ಕೈಗೊಳ್ಳಲಾಯಿತು. ಈ ಶಿಬಿರವನ್ನು ಮಂಚಿ ವಾಸುಕಿ ನಾಗಯಕ್ಷಿ ಟ್ರಸ್ಟ್ ನ ಅಧ್ಯಕ್ಷ ಶಾಂತರಾಮ ಶೆಟ್ಟಿ ಉದ್ಘಾಸಿದರು. ಟ್ರಸ್ಟ್ ನ ಕಾರ್ಯದರ್ಶಿ ವಿಶ್ವ ಮೂರ್ತಿ ಆಚಾರ್ಯ, ಗ್ರಾಮ […]