ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ- ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಪ್ರವರ್ಗ-1, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.ssp.postmatric.karnataka.gov.in ವೆಬ್‌ಸೈಟ್ ಅಥವಾ ಇಲಾಖಾ ಸಹಾಯವಾಣಿ […]
ಪ್ರಧಾನಮಂತ್ರಿ ಶಿಷ್ಯ ವೇತನ: ಅವಧಿ ವಿಸ್ತರಣೆ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಮಾಜಿ ಸೈನಿಕರ ಮಕ್ಕಳು ಪಿ.ಯು.ಸಿ 2 ನೇ ವರ್ಷ ಹಾಗೂ ಡಿಪ್ಲೋಮಾ 3 ನೇ ವರ್ಷದಲ್ಲಿ ಶೇ. 60 ಅಂಕ ಪಡೆದು ಪ್ರಸಕ್ತ ಸಾಲಿನಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದಿರುವವರು ಪ್ರಧಾನ ಮಂತ್ರಿ ಶಿಷ್ಯವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.ksb.gov.in ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ […]
ಕುಂದಾಪುರ ಡಾ. ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ರಕ್ಷಕ ಶಿಕ್ಷಕರ ಸಭೆ

ಕುಂದಾಪುರ: ಈಗಿನ ಆಹಾರ ಪದ್ಧತಿ, ಮೊಬೈಲ್ ಬಳಕೆಗಳ ಕಾರಣಕ್ಕೆ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ. ದುರ್ಬಲ ಮನಸ್ಸಿನ ಮಕ್ಕಳ ಬಗ್ಗೆ ಪೋಷಕರು ಎಚ್ಚರಿಕೆ ವಹಿಸಬೇಕು. ಇಂತಹ ವಿದ್ಯಾರ್ಥಿಗಳನ್ನು ತರಗತಿಯಲ್ಲಿ ಸಾಮೂಹಿಕವಾಗಿ ವಿಚಾರಿಸುವುದಕ್ಕಿಂತ ಸಾಧ್ಯವಾದಷ್ಟು ಪ್ರತ್ಯೇಕವಾಗಿ ವಿಚಾರಣೆ ಅತಿ ಅವಶ್ಯಕ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ ಭಂಡಾರಿಯವರು ಹೇಳಿದರು. ಅವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ ಕಾಲೇಜಿನ […]
ದೂರದರ್ಶಿತ್ವದ ಅಭಿವೃದ್ಧಿ ಪರ ಅತ್ಮನಿರ್ಭರ ಬಜೆಟ್: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಮಂಡಿಸಿರುವ ಕೇಂದ್ರ ಬಜೆಟ್ ದೂರದರ್ಶಿತ್ವದ ಚಿಂತನೆಯೊಂದಿಗೆ ಅಭಿವೃದ್ಧಿ ಪರ ಅತ್ಮನಿರ್ಭರ ಬಜೆಟ್ ಆಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಉತ್ಪಾದಕತೆ, ಹಣಕಾಸು ಹೂಡಿಕೆ, ಹವಾಮಾನ ಕ್ರಮ ಮತ್ತು ಪಿಎಂ ಗತಿಶಕ್ತಿ ಯೋಜನೆ ಈ ನಾಲ್ಕು ಪ್ರಮುಖ ಆಯಾಮಗಳಲ್ಲಿ ರೂಪಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಲಿದೆ. ರಸ್ತೆಗಳ ನಿರ್ಮಾಣಕ್ಕೆ ಒತ್ತು, ಸಣ್ಣ ಉದ್ದಿಮೆಗಳಿಗೆ ಪ್ರೋತ್ಸಾಹ, ಕೈಗಾರಿಕೆ, ಸಾವಯವ ಕೃಷಿ, […]