ಉಡುಪಿ: ಶಾಲೆಗಳಿಗೆ ಒಂದೇ ನಿಯಮ, ಶಾಲೆಗೊಂದು ನಿಯಮ ಮಾಡಲು ಸಾಧ್ಯವಿಲ್ಲ; ಉಸ್ತುವಾರಿ ಸಚಿವ ಅಂಗಾರ ಹೇಳಿಕೆ
ರಾಜ್ಯದ ಶಾಲೆಗಳಲ್ಲಿ ಒಂದೇ ನಿಯಮ ಇರಬೇಕು. ಶಾಲೆಗೊಂದು ನಿಯಮ ಮಾಡಲು ಸಾಧ್ಯವಿಲ್ಲ. ಒಂದೊಂದು ಶಾಲೆಯಲ್ಲಿ ಬೇರೆ ಬೇರೆಯಾದ ನಿಯಮ ಅನುಸರಿಸಿದರೆ, ಅದರ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಉಡುಪಿ ಬಾಲಕಿಯರ ಕಾಲೇಜಿನ ಸ್ಕಾರ್ಫ್ ವಿವಾದ ಹಾಗೂ ಅದರ ಬಳಿಕ ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಬಾಲಕಿಯರ ಕಾಲೇಜಿನ ಸ್ಕಾರ್ಫ್ ವಿವಾದದ ಕುರಿತಂತೆ ಸರ್ಕಾರ ಈಗಾಗಲೇ ಸಮಿತಿ […]
ವಿಕಲಚೇತನರಿಗೆ ವಿವಿಧ ಯೋಜನೆ: ಅರ್ಜಿ ಆಹ್ವಾನ
ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯ ಅಂಗವಿಕಲರಿಗಾಗಿ, ಎಸ್.ಎಸ್.ಎಲ್.ಸಿ ಮತ್ತು ನಂತರದ ಪಬ್ಲಿಕ್ ಪರೀಕ್ಷೆಗಳಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ಮಹಿಳೆಗೆ ಜನಿಸುವ ಮೊದಲ ಮತ್ತು 2 ನೇ ಮಗುವಿನ ಪಾಲನೆಗಾಗಿ ಶಿಶುಪಾಲನಾ ಭತ್ಯೆ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕ […]
ಫೆ.5 ರಂದು ಹೆಬ್ರಿಯಲ್ಲಿ ಆರ್.ಟಿ.ಓ ಕ್ಯಾಂಪ್
ಉಡುಪಿ: ಹೆಬ್ರಿಯಲ್ಲಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಯ ಕ್ಯಾಂಪ್‌ನ್ನು ಫೆಬ್ರವರಿ 5 ರಂದು ಬೆಳಗ್ಗೆ 9.30 ಕ್ಕೆ ಹೆಬ್ರಿಯ ಚೈತನ್ಯ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ನಡೆಸಲಾಗುವುದು. ಹಾಗೂ ಅಂದು ಮಧ್ಯಾಹ್ಮ 3.30 ಕ್ಕೆ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.