ಕ್ಯಾನ್ಸರ್ ಅನ್ನು ಆರಂಭದಲ್ಲೇ ಪತ್ತೆ ಹಚ್ಚಿದರೆ ಗುಣಮುಖರಾಗಲು ಸಾಧ್ಯ: ಸುಮಿತ್ರಾ ನಾಯಕ್
ಉಡುಪಿ, ಫೆ.4: ಕ್ಯಾನ್ಸರ್ನ ಲಕ್ಷಣಗಳ ಬಗ್ಗೆ ಅರಿತುಕೊಂಡು, ಖಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದಲ್ಲಿ, ಕ್ಯಾನ್ಸರ್ನಿಂದ ಗುಣಮುಖವಾಗಲು ಸಾಧ್ಯವಿದೆ ಎಂದು ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದರು. ಅವರು ಇಂದು, ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಸ್ಪತ್ರೆ (ಎನ್.ಸಿ.ಡಿ ವಿಭಾಗ), ಜಿಲ್ಲಾ ಸರ್ವೇಕ್ಷಣಾ ಘಟಕ (ಎನ್.ಸಿ.ಡಿ&ಎನ್.ಟಿ.ಸಿ.ಪಿ ಘಟಕ), ದಂತ ವೈದ್ಯಕೀಯ ವಿಭಾಗ ಜಿಲ್ಲಾ ಆಸ್ಪತ್ರೆ, ಭಾರತೀಯ […]
ಸಿದ್ದರಾಮಯ್ಯ ಬಿತ್ತಿದ ಜಾತಿ ವಿಷ ಬೀಜದ ಮುಂದುವರಿದ ಭಾಗವೇ ಹಿಜಾಬ್ ಘರ್ಷಣೆ: ಸಚಿವ ಸುನಿಲ್ ಕುಮಾರ್ ಟೀಕೆ
ಬೆಂಗಳೂರು: ಕರ್ನಾಟಕವನ್ನು ತಾಲೀಬಾನ್ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,ಜನ ಮಾನಸದಲ್ಲಿ ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ಬೇಕು ಎಂಬ ಅಭಿಪ್ರಾಯವಿದೆ. ಖುಷಿ ಬಂದಾಗ ಒಬ್ಬೊಬ್ಬರು ಒಂದೊಂದು ವಸ್ತ್ರ ಹಾಕಿಕೊಂಡು ಬರೋದಕ್ಕೆ ಅಲ್ಲ. ನಿಯಮಗಳು ಅನ್ನೋದಕ್ಕಿಂತ ಇದೊಂದು ಸಂಪ್ರದಾಯವಾಗಿದೆ ಎಂದರು. ಧರ್ಮದ ಕಾರಣಕ್ಕೆ ಮತೀಯವಾದದ ಕಾರಣಕ್ಕೆ ಹೀಗೆ ವಸ್ತ್ರ ಹಾಕಿಕೊಂಡು ಬರೊದನ್ನ ನಾವು ಸಹಿಸಲು ಆಗೋದಿಲ್ಲ. ಕರ್ನಾಟಕ, ಉಡುಪಿ, ಮಂಗಳೂರು ಜಿಲ್ಲೆಯನ್ನ ತಾಲಿಬಾನ್ ಮಾಡಲು ಬಿಡೋದಿಲ್ಲ […]
ಕನ್ನಡನಾಡಿನ ಸ್ತಬ್ದಚಿತ್ರಕ್ಕೆ ಸಿಕ್ಕಿತು ದ್ವಿತೀಯ ಬಹುಮಾನ
ನವದೆಹಲಿ: ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ. ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ ಪ್ರಶಸ್ತಿ ಘೋಷಿಸಿದ್ದು, ಕರಕುಶಲ ಕಲೆಯ ವೈಭವವನ್ನು ಬಿಂಬಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ 2ನೇ ಸ್ಥಾನ ಲಭ್ಯವಾಗಿದೆ. ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಕಾರಿಡಾರ್ ಕುರಿತ ಸ್ತಬ್ಧಚಿತ್ರ ಪ್ರಥಮ ಸ್ಥಾನ ಪಡೆದಿದೆ ಮೇಘಾಲಯದ ಮಹಿಳೆಯರ ಸಹಕಾರ ಸಂಘ ಹಾಗೂ ರಾಜ್ಯದ ಸುವರ್ಣ ಮಹೋತ್ಸವ ಸಂಭ್ರಮ ಬಿಂಬಿಸುವ ಸ್ತಬ್ಧಚಿತ್ರ ತೃತೀಯ ಸ್ಥಾನ ದೊರೆತಿದೆ. ‘ವಂದೇ ಭಾರತಮ್’ […]
ಹಿರಿಯಡಕ: ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿ ನೇಣಿಗೆ ಶರಣು
ಹೆಬ್ರಿ: ಹಿರಿಯಡಕ ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕ ಸಮೀಪದ ಮಾಣಾಯಿ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮೃತರನ್ನು ಮಾಣಾಯಿ ನಿವಾಸಿ 57 ವರ್ಷದ ರಘುರಾಮ ಎಂದು ಗುರುತಿಸಲಾಗಿದೆ. ಅವರು ಹಿರಿಯಡಕ ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ರಾತ್ರಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಯಾನ್ಸರ್ ಗೆದ್ದ ಹುಡುಗಿಯ ಈ ಕತೆ ನಿಮಗೂ ಸ್ಪೂರ್ತಿಯಾಗಬಹುದು!:ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಬರಹ
ಸಾಮಾಜಿಕ ಜಾಲತಾಣದಲ್ಲಿ ಸುಮ್ಮನೆ ಕಾಲಹರಣಕ್ಕೆ ಕಣ್ಣಾಡಿಸುತ್ತಿದ್ದಾಗ ಅರುಣಿಮಾ ಅಂತ ಕ್ಯಾನ್ಸರಿಗೆ ಸವಾಲೆಸೆದ ಹುಡುಗಿಯ ಜೀವನ ಪ್ರೀತಿಯ ಬಗ್ಗೆ ಓದಿದೆ ಆಗ ಅಕಸ್ಮಾತಾಗಿ ನನ್ನ ಕಣ್ಣು ಅಲ್ಲೇ ಹತ್ತಿರದಲ್ಲೇ ಬರೆದಿದ್ದ ಮತ್ತೊಂದು ಲೇಖನದ ಮೇಲೆ ಬಿಟ್ಟು ಅದುವೇ “ಕ್ಯಾನ್ಸರ್ ಎಂಬ ಯಮನಿಗೆ ಸಡ್ಡು ಹೊಡೆದ ಗಟ್ಟಿಗಿತ್ತಿ ಶಿವಮೊಗ್ಗದ ಶ್ರುತಿ” ಅಂತ ತೃಪ್ತಿ ಹೆಗ್ಡೆ ಅನ್ನೋರು ಬರೆದ ಲೇಖನ ಅದನ್ನು ಓದುತ್ತ ಸಾಗಿದ ಹಾಗೆ “ಬದುಕ ದಿಕ್ಕು ಬದಲಿಸಿದ ಆಸ್ಟಿಯೋ ಸರ್ಕೋಮಾ” ಅನ್ನೋ ಪುಸ್ತಕದ ಬಗ್ಗೆ ತಿಳಿಯಿತು ಕುತೂಹಲ ಬೆಳೆಯಿತು. […]