ಸಮವಸ್ತ್ರ ನಿಯಮ‌ ಎಲ್ಲರಿಗೂ ಅನ್ವಯಿಸುತ್ತದೆ: ಸುನಿಲ್ ಕುಮಾರ್

ಉಡುಪಿ: ಕಾಲೇಜಿಗೆ ಸಮವಸ್ತ್ರ ಹಾಕಿಕೊಂಡು ಬರುವ ನಿಯಮ ಎಲ್ಲರಿಗೂ ಅನ್ವಯವಾಗುತ್ತದೆ. ಇದು ಯಾವುದೋ ಒಂದು ಗುಂಪಿಗೆ, ಸಮುದಾಯದ ಸಂಘಟನೆಗೆ ಸೀಮಿತ ಎನ್ನುವ ಮಾತನ್ನು ಹೇಳಲಾಗದು. ಎಲ್ಲರೂ ಸಮವಸ್ತ್ರ ಪಾಲನೆ ಮಾಡಬೇಕೆಂದು ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಹಿಜಾಬ್ ವಿವಾದದ ಕುರಿತಾಗಿ ಉಡುಪಿಯಲ್ಲಿ ಮಾಧ್ಯಮದ ಜತೆಗೆ ಮಾತನಾಡಿದ ಅವರು, ಹಿಜಾಬ್ ಹಿಂದಿನ ಹಿಡನ್ ಅಜೆಂಡಾವನ್ನು ನಮ್ಮ ಸರಕಾರ ಸಹಿಸುವುದಿಲ್ಲ. ಇದರ ಹಿಂದಿರುವ ಕಾಣದ ಮತೀಯ ಸಂಘಟನೆಗಳನ್ನು ಸರಕಾರ ಬಗ್ಗು ಬಡಿಯುತ್ತದೆ. ಈ ನೆಲದ ಕಾನೂನು ಗೌರವಿಸಬೇಕಾಗಿರುವುದು ಎಲ್ಲರ […]

ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ನಿಯಮ ಪಾಲನೆಗೆ ರಾಜ್ಯ ಸರಕಾರದ ಆದೇಶ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಇತ್ತೀಚೆಗೆ ಪ್ರಚಲಿತವಾಗಿರುವ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಸರಕಾರ ಹೊರಡಿಸಿರುವ ಆದೇಶವನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದ್ದಾರೆ. ಎಲ್ಲ ಸರಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸರಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಆಡಳಿತ ಮಂಡಳಿಗಳು ನಿರ್ಧರಿಸುವ ಸಮವಸ್ತ್ರವನ್ನೇ ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಧರಿಸಬೇಕು ಎಂಬುದನ್ನು ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ […]

35ನೇ ವರ್ಷದ ಬಾರಾಡಿ ಬೀಡು “ಸೂರ್ಯ- ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕಾರ್ಕಳ: ಶನಿವಾರ ನಡೆದ 35ನೇ ವರ್ಷದ ಬಾರಾಡಿ ಬೀಡು “ಸೂರ್ಯ- ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 02 ಜೊತೆ ಅಡ್ಡಹಲಗೆ: 06 ಜೊತೆ ಹಗ್ಗ ಹಿರಿಯ: 13 ಜೊತೆ ನೇಗಿಲು ಹಿರಿಯ: 30 ಜೊತೆ ಹಗ್ಗ ಕಿರಿಯ: 21 ಜೊತೆ ನೇಗಿಲು ಕಿರಿಯ: 90 ಜೊತೆ ಒಟ್ಟು ಕೋಣಗಳ ಸಂಖ್ಯೆ: 162 ಜೊತೆ ಕನೆಹಲಗೆ: ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ […]

‘ಸಾಮಾಜಿಕ ಅರಿವು’ ಬೀದಿ ನಾಟಕ ಕಾರ್ಯಕ್ರಮ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಬ್ರಹ್ಮಾವರ ಬೈಕಾಡಿ ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಪ್ರಸ್ತುತ ಪಡಿಸುವ 2021-2022 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಅಸ್ಪ್ರಶ್ಯತೆ ನಿವಾರಣೆ ಕುರಿತು ಅರಿವು ಮೂಡಿಸುವುದಕ್ಕಾಗಿ “ಸಾಮಾಜಿಕ ಅರಿವು” ಬೀದಿ ನಾಟಕ ಕಾರ್ಯಕ್ರಮವು ಶನಿವಾರ ನಡೆಯಿತು.

ಚಿತ್ರ ನಟ ಯಶ್ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಳಕ್ಕೆ ಭೇಟಿ

ಕುಂದಾಪುರ: ಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಅವರು ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ ಬ್ರಹ್ಮರಥೋತ್ಸವ ಸಂದರ್ಭದಲ್ಲಿ ಶನಿವಾರ ದೇವಳಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಅವರನ್ನು ಆಡಳಿತ ಮಂಡಳಿಯ ವತಿಯಿಂದ ಸ್ವಾಗತಿಸಿ, ಶಾಲು ಹೊದಿಸಿ, ದೇವಿಯ ಪ್ರಸಾದ ನೀಡಿ ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು, ದೇವಳದ ಅರ್ಚಕರು ತಾಂತ್ರಿಕ ವರ್ಗದವರು ಮತ್ತಿತರ ಭಕ್ತಾದಿಗಳು ಉಪಸ್ಥಿತರಿದ್ದರು.