ಮಾ.28 ರಿಂದ ಎ.13 ರ ವರೆಗೆ ಪ್ರಥಮ ಪಿಯುಸಿ ಪರೀಕ್ಷೆ
ಬೆಂಗಳೂರು: 2021-22 ಸಾಲಿನ ಪ್ರಥಮ ಪಿಯುಸಿ ಮಾ.28 ರಿಂದ ಎ.13 ರ ವರೆಗೆ ಪರೀಕ್ಷೆ ನಡೆಸುವಂತೆ ಪಿಯು ಇಲಾಖೆಯು ಸೂಚನೆ ನೀಡಿದೆ. ಪಿಯು ಪರೀಕ್ಷೆಗಳನ್ನು ಅಪರಾಹ್ನ 2.30ರಿಂದ ಸಂಜೆ 5.45 ರ ವರೆಗೆ ಜಿಲ್ಲಾ ಹಂತದಲ್ಲಿಯೇ ನಡೆಸಬೇಕು. ಕಾಲೇಜಿನ ಎಲ್ಲಾ ಪ್ರಾಂಶುಪಾಲರಿಗೆ ಪರೀಕ್ಷಾ ಪೂರ್ವ ಸಿದ್ಧತೆ ಕಾರ್ಯಗಳನ್ನು ವ್ಯವಸ್ಥಿತವಾಗಿ ಮಾಡುವಂತೆ ನಿರ್ದೇಶನ ನೀಡಲಾಗಿದೆ. ಫಲಿತಾಂಶವನ್ನು ಎ.30 ರಂದು ಪ್ರಕಟಿಸಬೇಕು ಮತ್ತು ಅದೇ ದಿನ ಪೂರಕ ಪರೀಕ್ಷೆಗಳನ್ನು ನಡೆಸುವ ದಿನಾಂಕವನ್ನು ಪ್ರಕಟಿಸುವಂತೆ ಸೂಚಿಸಲಾಗಿದೆ.
‘ಹಿಜಾಬ್’ ಹೆಸರಲ್ಲಿ ಮತ್ತೊಮ್ಮೆ ದೇಶ ಒಡೆಯುವ ಕುತಂತ್ರ; ರಮೇಶ್ ಕಲ್ಲೊಟ್ಟೆ
ಉಡುಪಿ: ಶಾಲಾ ಕಾಲೇಜುಗಳಲ್ಲಿ ಉತ್ತಮ ಗುಣಮಟ್ಟದ ವಿದ್ಯಾರ್ಜನೆ ಆಗಬೇಕೇ ಹೊರತು ಅಲ್ಲಿ ಜಾತಿ-ಧರ್ಮ ಬಡವ ಶ್ರೀಮಂತ ಎನ್ನುವ ಭೇದ ಭಾವ ಇರಬಾರದು. ಆ ಕಾರಣಕ್ಕಾಗಿಯೇ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಧಾರಣೆ ಕಡ್ಡಾಯ ಮಾಡಲಾಗಿದೆ. ಆದರೆ, ಕೆಲವೊಂದು ದೇಶದ್ರೋಹಿ ಹಿತಾಸಕ್ತಿಗಳು ಹಿಜಾಬ್ ವಿಚಾರದಲ್ಲಿ ದೇಶ ಒಡೆಯುವ ಕುತಂತ್ರ ಮಾಡುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆಯ ಭೂ ಸುರಕ್ಷಾ ಸಂಯೋಜಕ್ ರಮೇಶ್ ಕಲ್ಲೊಟ್ಟೆ ಹೇಳಿದ್ದಾರೆ. ಸ್ವಾತಂತ್ರ್ಯ ನಂತರವೂ ಭಾರತದ ಕೆಲವೇ ಜನ ಸ್ವಾರ್ಥ ರಾಜಕಾರಣಿಗಳ ಸ್ವಹಿತಾಸಕ್ತಿಗಾಗಿ ದೇಶವನ್ನು ಮೂರು ತುಂಡುಗಳಾಗಿ […]
ಯುವ ಜನತೆಯಿಂದ ಜನಪರ ಕಾರ್ಯಕ್ರಮಗಳು ಜೀವಂತ: ಸಾಧು ಪಾಣರ
ಉಡುಪಿ, ಫೆ.9: ಯುವಜನತೆ ಜನಪರ ಮೌಲ್ಯಗಳನ್ನು ಅರಿತು, ಸಮಾಜದಲ್ಲಿ ಮುಂದಿನ ಪೀಳಿಗೆಗಳಿಗೆ ಜನಪರ ಕಾರ್ಯಕ್ರಮಗಳನ್ನು ಜೀವಂತವಾಗಿರಿಸಲು ಸಹಕರಿಸುವಂತೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಧು ಪಾಣರ ಹೇಳಿದರು. ಅವರು ಮಂಗಳವಾರ ಅಲೆವೂರು ಪ್ರಗತಿನಗರದ ಡಾ. ಶಿವರಾಮ ಕಾರಂತ ಕಲಾಗ್ರಾಮದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಂಗಣದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ವಿಶೇಷ ಘಟಕ ಯೋಜನೆಯಡಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಜನರು ಆಚರಿಸಿಕೊಂಡು […]
ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂತೋಷ್ ಕುಲಾಲ್ ಪಕ್ಕಾಲ್ ನೇಮಕ
ಪೆರ್ಡೂರು: ಕಾಪು ವಿಧಾನಸಭಾ ಕ್ಷೇತ್ರದ ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪೆರ್ಡೂರು ಗ್ರಾಪಂ ಸದಸ್ಯ ಸಂತೋಷ್ ಕುಲಾಲ್ ಪಕ್ಕಾಲ್ ಅವರು ನೇಮಕಗೊಂಡಿದ್ದಾರೆ. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ಶಿಫಾರಸಿನ ಮೇರೆಗೆ ಪೆರ್ಡೂರಿನ ಕಾಂಗ್ರೆಸ್ ಮುಖಂಡ ಕೆ. ಶಾಂತಾರಾಮ ಸೂಡ ಅವರ ವಿಶೇಷ ಮುತುವರ್ಜಿಯಿಂದ ಸಂತೋಷ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಫೋಟೋಗ್ರಾಫಿ ಕ್ಲಬ್ ಉದ್ಘಾಟನೆ
ಶಿರ್ವ: ಇಲ್ಲಿನ ಸಂತ ಮೇರಿ ಕಾಲೇಜಿನ ಐಕ್ಯುಎಸಿ ಸಹಯೋಗದೊಂದಿಗೆ ನಡೆದ ಫೋಟೋಗ್ರಾಫಿ ಕ್ಲಬ್‌ನ ಉದ್ಘಾಟನಾ ಕಾರ್ಯಕ್ರಮವನ್ನು ಸೌತ್ ಕೆನರಾ ಫೋಟೋಗ್ರಾಪರ್ಸ್ ಎಸೋಸಿಯೆಶನ್ ಕಾಪು ವಲಯದ ಅಧ್ಯಕ್ಷರಾದ ವಿನೋದ್ ಕಾಂಚನ್ ಇವರು ನೆರವೇರಿಸಿದರು. ಫೋಟೋಗ್ರಾಫಿ ಎನ್ನುವುದು ಒಂದು ಸೃಜನಾತ್ಮಕ ಕಲೆ, ಇಂದಿನ ಯುವ ಪೀಡಿಗೆ ಈ ಕಲೆಯನ್ನು ಒಂದು ವ್ಯವಸ್ಥಿತ ರೂಪದಲ್ಲಿ ಕಲಿತು ಬೆಳೆಯಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆರಾಲ್ಡ್ ಐವನ್ ಮೋನಿಸ್ ಇವರು ಫೋಟೋಗ್ರಾಫಿ ಕ್ಷೇತ್ರದಲ್ಲಿ ಈಗ ಸಾಕಷ್ಟು ಅವಕಾಶಗಳಿವೆ, […]