ಇಲಾಖಾ ದರದಲ್ಲಿ ತೋಟಗಾರಿಕಾ ಸಸಿಗಳು ಲಭ್ಯ

ಉಡುಪಿ, ಫೆ.8: ತೋಟಗಾರಿಕಾ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ವಿವಿಧ ತೋಟಗಾರಿಕೆ ಸಸಿ ಗಿಡಗಳನ್ನು ಉತ್ಪಾದಿಸಿ, ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಉಡುಪಿ ತಾಲೂಕಿನ ಶಿವಳ್ಳಿ, ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ, ಕುಂದಾಪುರ ತಾಲೂಕಿನ ಕುಂಭಾಶಿ ಹಾಗೂ ಕೆದೂರು ಮತ್ತು ಕಾರ್ಕಳ ತಾಲೂಕಿನ ರಾಮಸಮುದ್ರ ಹಾಗೂ ಕುಕ್ಕಂದೂರು ತೋಟಗಾರಿಕಾ ಕ್ಷೇತ್ರಗಳಲ್ಲಿ ಉತ್ತಮ ಗುಣಮಟ್ಟದ ಅಡಿಕೆ (20 ರೂ.), ಕಸಿ ಗೇರು (32 ರೂ.), ಕಾಳುಮೆಣಸು (11 ರೂ.), ತೆಂಗು (70 ರೂ.) […]

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರಿಂದ ಅಲೋಜೆನಿಕ್ ಅಸ್ಥಿಮಜ್ಜೆಯ ಕಸಿ ಯಶಸ್ವಿ; ಕರಾವಳಿ ಕರ್ನಾಟಕದಲ್ಲೇ ಪ್ರಥಮ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಕ್ಕಳ ರಕ್ತಶಾಸ್ತ್ರ  ಮತ್ತು ಆಂಕೊಲಾಜಿ ವಿಭಾಗದ ವೈದ್ಯರ ತಂಡವು ರೋಗನಿರೋಧಕ ಅಸ್ವಸ್ಥತೆ (ಹಿಮೋಫಾಗೊಸೈಟಿಕ್ ಲಿಂಫೋಹಿಸ್ಟಿಯೊಸೈಟೋಸಿಸ್) ಯಿಂದ ಬಳಲುತ್ತಿದ್ದ ಬಾಲಕಿಗೆ ಕರಾವಳಿಯಲ್ಲೇ  ಮೊದಲ ಬಾರಿಗೆ ಯಶಸ್ವಿಯಾಗಿ  ಅಲೋಜೆನಿಕ್ ಅಸ್ಥಿಮಜ್ಜೆಯ ಕಸಿ  ನಿರ್ವಹಿಸಿದೆ. ಚಿತ್ರದುರ್ಗದ ಎರಡುವರೆ ವರ್ಷದ ಬಾಲಕಿ  ಜ್ವರ ಮತ್ತು ದುಗ್ಧರಸ ಗ್ರಂಥಿಗಳ ಹಿಗ್ಗುವಿಕೆಯ ತೊಂದರೆಯಿಂದ ಬಳಲುತ್ತಿದ್ದಳು , ಹೆಚ್ಚಿನ ಚಿಕಿತ್ಸೆಗೆ  ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಕರೆ ತಂದಿದ್ದರು. ಕೆಲವು ವರ್ಷಗಳ ಹಿಂದೆ ಇಂತದೇ  ವೈದ್ಯಕೀಯ ತೊಂದರೆಗಳಿಂದ  ಅವಳು […]

ಉಡುಪಿ: ಜಿಲ್ಲಾಸ್ಪತ್ರೆಯಿಂದ ಮಹಿಳೆ ನಾಪತ್ತೆ

ಉಡುಪಿ ನಿಟ್ಟೂರಿನ ಸ್ತ್ರೀ ಸೇವಾ ನಿಕೇತನದ ಮಹಿಳೆಯೋರ್ವಳು ನಾಪತ್ತೆಯಾಗಿರುವ ಘಟನೆ ಉಡುಪಿ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯಲ್ಲಿ ಫೆ. 7ರಂದು ನಡೆದಿದೆ. ನಳಿನಿ ದೇವಾಡಿಗ ನಾಪತ್ತೆಯಾದ ಯುವತಿ. ಇವರು ಮೂಕಿಯಾಗಿದ್ದು, ಐದು ದಿನಗಳ ಹಿಂದೆಯಷ್ಟೇ ಸ್ತ್ರೀ ಸೇವಾ ನಿಕೇತನಕ್ಕೆ ದಾಖಲಾಗಿದ್ದರು. ಫೆ‌.7ರಂದು ಬೆಳಿಗ್ಗೆ 10 ಗಂಟೆಗೆ ಆರೋಗ್ಯ ತಪಾಸಣೆಗಾಗಿ ನಳಿನಿ ಅವರನ್ನು ನಿಕೇತನದ ಮಹಿಳಾ ರಕ್ಷಕಿ ವೀಣಾ ಎಂಬವರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ನಳಿನಿ ಮಧ್ಯಾಹ್ನ 12.15ರ ಸುಮಾರಿಗೆ ವೀಣಾ ಅವರ ಕಣ್ಣುತಪ್ಪಿಸಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾರೆ ಎಂದು ನಿಟ್ಟೂರು […]