ಪೂರ್ಣಗೊಂಡಿರುವ ರಸ್ತೆ ಕಾಮಗಾರಿಗೆ ಮತ್ತೆ ಟೆಂಡರ್ ಆರೋಪ; ಉಡುಪಿ ನಗರಸಭೆಯ ವಿರುದ್ಧ ಜಿಲ್ಲಾಧಿಕಾರಿಗೆ ಕಾಂಗ್ರೆಸ್ ದೂರು

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಸಂಪೂರ್ಣಗೊಂಡಿರುವ ಲಕ್ಷಾಂತರ ರೂ. ರಸ್ತೆ ಕಾಮಗಾರಿಗೆ ನಗರಸಭೆ ಮತ್ತೊಮ್ಮೆ ಟೆಂಡರ್ ಕರೆದಿದೆ. ಇದಕ್ಕೆ ಕೂಡಲೇ ತಡೆಯಾಜ್ಞೆ ನೀಡಿ, ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಮುಖಂಡರು ಸಲ್ಲಿಸಿದ ಮನವಿಯನ್ನು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವೀಕರಿಸಿದರು. ಉಡುಪಿ ನಗರಸಭೆಯು ಜ.29ರಂದು 17 ಕಾಮಗಾರಿಗಳಿಗೆ ಟೆಂಡರ್ ಪ್ರಕಟಣೆ ಹೊರಡಿಸಿದ್ದು, ಆ ಪೈಕಿ ಕುಂಜಿಬೆಟ್ಟು […]
ಫೆ.14ರಿಂದ ಹೈಸ್ಕೂಲ್ ಆರಂಭ; ಸಿಎಂ ಬೊಮ್ಮಾಯಿ

ಬೆಂಗಳೂರು: ಹಿಜಾಬ್ ಮತ್ತು ಕೇಸರಿ ವಿವಾದ ಕುರಿತು ಹೈಕೋರ್ಟ್ ನಿಂದ ಮಧ್ಯಂತರ ಮೌಖಿಕ ಆದೇಶ ಹೊರಬಿದ್ದ ಬೆನ್ನಲ್ಲೇ ಮೊದಲ ಹಂತದಲ್ಲಿ ಇದೇ ಸೋಮವಾರದಿಂದ (ಫೆ.14) 8 ರಿಂದ 10 ರವರೆಗಿನ ತರಗತಿಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಎರಡನೇ ಹಂತದಲ್ಲಿ ಪಿಯುಸಿ ಮತ್ತು ಪದವಿ ಕಾಲೇಜುಗಳನ್ನು ಆರಂಭಿಸಲಾಗುವುದು. ಆದರೆ ಆ ಬಗ್ಗೆ ದಿನಾಂಕ ನಿರ್ಧರಿಸಿಲ್ಲ. ಸಮಯ ಬಂದಾಗ ಹೇಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸ್ವಚ್ಛತಾ ಕಾರ್ಯಕರ್ತರಿಂದ ಉಡುಪಿಗೆ ರಾಷ್ಟ್ರಮಟ್ಟದ ಗರಿಮೆ: ಡಾ.ನವೀನ್ ಭಟ್

ಉಡುಪಿ, ಫೆ.10: ಉಡುಪಿ ಜಿಲ್ಲೆಯು ಸ್ವಚ್ಛತೆಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಲು ಸ್ವಚ್ಛತಾ ಕಾರ್ಯಕರ್ತರ ಶ್ರಮದಿಂದ ಸಾಧ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಹೇಳಿದರು. ಅವರು ಇಂದು ಉಡುಪಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಸ್ವಚ್ಛ ಭಾರತ ಮಿಷನ್ (ಗ್ರಾಮೀಣ), ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ, ಸ್ವಚ್ಛತಾ ಕಾರ್ಯಕರ್ತರ ಕ್ರೀಡಾಕೂಟ ಸ್ವಚ್ಛ ಸಂಭ್ರಮ 2022 ಕಾರ್ಯಕ್ರಮ ಉದ್ಘಾಟಿಸಿ […]
ಫೆ.11,12: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ, ಫೆ.10: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಫೆಬ್ರವರಿ 11 ಹಾಗೂ 12 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.11 ರಂದು ಸಂಜೆ ಕಾರ್ಕಳಕ್ಕೆ ಆಗಮಿಸಿ, ವಾಸ್ತವ್ಯ ಮಾಡಲಿದ್ದಾರೆ. ಫೆ. 12 ರಂದು ಬೆಳಗ್ಗೆ 8 ಗಂಟೆಗೆ ಹೆಬ್ರಿ ಬೈಪಾಸ್ ಬಳಿ ಹೆಬ್ರಿ ಪೊಲೀಸ್ ಠಾಣೆಯ ನೂತನ ಕಟ್ಟಡದ ಗುದ್ದಲಿಪೂಜೆ ನೆರವೇರಿಸಲಿರುವರು, 9 ಕ್ಕೆ ಹೆಬ್ರಿ ತಾಲೂಕು ಕಚೇರಿಯಲ್ಲಿ ಕಡತ ವಿಲೇವಾರಿ ಸಪ್ತಾಹಕ್ಕೆ ಚಾಲನೆ, 10.30 […]
ಉಡುಪಿ: ಆಸ್ತಿ ವಿಚಾರಕ್ಕಾಗಿ ಯೋಧನ ಪತ್ನಿಯ ಕೊಲೆಗೆ ಯತ್ನ; ದೂರು ದಾಖಲು

ಉಡುಪಿ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕತ್ತಿಯಿಂದ ಕಡಿದು ಯೋಧನ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ಉಡುಪಿ ತಾಲೂಕಿನ ಪರ್ಕಳ ಹೆರ್ಗದ ಗರಡಿ ಬಳಿ ನಡೆದಿದೆ. ಪರ್ಕಳ ಹೆರ್ಗದ ಗರಡಿ ಬಳಿ ನಿವಾಸಿ 28 ವರ್ಷದ ದೀಪಾ ನಾಯಕ್ ಅವರ ಮೇಲೆ ಕೊಲೆಯತ್ನ ನಡೆದಿದೆ ಎನ್ನಲಾಗಿದೆ. ಸೋದರ ಮಾವ ಜಗದೀಶ್ ನಾಯಕ್ ಎಂಬಾತ ಕತ್ತಿಯಿಂದ ಕಡಿದು ಕೊಲೆ ಮಾಡಲು ಯತ್ನಿಸಿದ ಆರೋಪಿ. ಬುಧವಾರ ಬೆಳಿಗ್ಗೆ 11.30 ರ ಸುಮಾರಿಗೆ ದೀಪಾ ನಾಯಕ್ ಅವರು ಮನೆಯ ಹೊರಗೆ ನಿಂತು […]