ನೀಟ್–2021 ಜ್ಞಾನ ಸುಧಾಕ್ಕೆ ಪ್ರಥಮ ಸುತ್ತಿನ ಆಯ್ಕೆಯಲ್ಲಿ 70 MBBS ಸೀಟುಗಳು.

ಕಾರ್ಕಳ ಫೆ.8: ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿರುವ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ, ಎಂಬಿಬಿಎಸ್ ಪ್ರವೇಶ ಪರೀಕ್ಷೆಯಾದ ನೀಟ್- 2021ರ ಪ್ರಥಮ ಸುತ್ತಿನ ಆಯ್ಕೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 320 ವಿದ್ಯಾರ್ಥಿಗಳಲ್ಲಿ 70 ವಿದ್ಯಾರ್ಥಿಗಳಿಗೆ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ MBBS ಸೀಟು ದೊರಕಿರುತ್ತದೆ. 4 ವಿದ್ಯಾರ್ಥಿಗಳು ಪ್ರತಿಷ್ಠಿತ ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ, 7 ವಿದ್ಯಾರ್ಥಿಗಳು ಮೈಸೂರು ಮೆಡಿಕಲ್‍ಕಾಲೇಜು, ಇಬ್ಬರು ವಿದ್ಯಾರ್ಥಿಗಳು ಕೆ.ಎಂ.ಸಿ. ಮಂಗಳೂರಿನಲ್ಲಿ ಪ್ರವೇಶ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯಲ್ಲಿ ಜ್ಞಾನ ಸುಧಾ ಎಂಟ್ರೆನ್ಸ್ ಅಕಾಡೆಮಿ ನಿರ್ವಹಿಸುತ್ತಿರುವ ಪಾತ್ರವನ್ನು ಅಧ್ಯಕ್ಷರಾದ ಡಾ. […]
ಪ್ರಸ್ತುತ ಸಾಲಿನ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಅನುದಾನದ ಪರಿಣಾಮಕಾರಿ ಅನುಷ್ಠಾನಕ್ಕೆ ಉಸ್ತುವಾರಿ ಸಚಿವ ಅಂಗಾರ ಸೂಚನೆ

ಉಡುಪಿ: ಸರ್ಕಾರ ಪ್ರಸುತ್ತ ಸಾಲಿಗೆ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಯೋಜನೆಗಳಿಗೆ ಮಂಜೂರು ಮಾಡಿರುವ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರೊಂದಿಗೆ ಪ್ರತಿಶತ 100 ರಷ್ಟು ಪರಿಣಾಮಕಾರಿಯಾಗಿ ಮಾರ್ಚ್ ಅಂತ್ಯದೊಳಗೆ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ ಅದಕ್ಕನುಗುಣವಾಗಿ ಅನುದಾನವನ್ನೂ ಸಹ ನೀಡಿದೆ. ಇವುಗಳ […]
ವಿಕಲಚೇತನರಿಗೆ ಆಧಾರ ಸ್ವ- ಉದ್ಯೋಗ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಆಧಾರ ಸ್ವ-ಉದ್ಯೋಗ ಯೋಜನೆಯಡಿ ಲಾಭದಾಯಕ ಸ್ವ-ಉದ್ಯೋಗ ಕೈಗೊಳ್ಳಲು 1 ಲಕ್ಷ ರೂ. ವರೆಗೆ ಸಾಲ ಸೌಲಭ್ಯ ಒದಗಿಸಲು ಅರ್ಹ ಪರಿಶಿಷ್ಟ ಜಾತಿಯವರಿಗೆ ಶೇಕಡ 50 ರಷ್ಟು ಬ್ಯಾಂಕ್ ಸಾಲ ಮತ್ತು ಶೇಕಡ 50 ರಷ್ಟು ಸಬ್ಸಿಡಿ ಒದಗಿಸಲಾಗುವುದು. ಬಿ.ಪಿ.ಎಲ್ ಕಾರ್ಡ್ ಹೊಂದಿರುವ, 18 ರಿಂದ 55 ವರ್ಷದೊಳಗಿನ ವಿಕಲಚೇತನರು ಫೆಬ್ರವರಿ 16 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ […]