ಖ್ಯಾತ ರಂಗನಟ ಕಲಾವಿದ ಉಮೇಶ್ ಹೆಗ್ಡೆ ಕಡ್ತಲ ನಿಧನ
ಕಾರ್ಕಳ: ಖ್ಯಾತ ರಂಗ ನಟ ಕಲಾವಿದ ನಾಟಕಕಾರ ಉಮೇಶ್ ಹೆಗ್ಡೆ (47) ಕಡ್ತಲ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತಿದ್ದರು. ಅವರು ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮದ ಲಿಂಗಯ್ಯ ಹೆಗ್ಡೆ ಮತ್ತು ಲಲಿತಾ ಹೆಗ್ಡೆ ಅವರ ದಂಪತಿಯ ಪುತ್ರರಾಗಿರುವ ಉಮೇಶ್ ಹೆಗ್ಡೆ ಕಡ್ತಲ ಅವರು ಪ್ರಾಥಮಿಕ ಹಾಗೂ ಪದವಿಪೂರ್ವ ಶಿಕ್ಷಣವನ್ನು ಕಾರ್ಕಳದಲ್ಲಿ ಪೂರೈಸಿದರು. ಸಾಧನೆಗಳು: ಕನ್ನಡ ಸೇವಾ ಸಂಘ ಪೊವಾಯಿ ಇದರ 2016ನೇ ಸಾಲಿನ ಕರ್ನಾಟಕ ಸಂಸ್ಕೃತಿ- ಸಂಭ್ರಮ ಕಾರ್ಯಕ್ರಮದ ವಾರ್ಷಿಕ ವಾರ್ಷಿಕ ಅಭಿನಯಶ್ರೀ […]
ಉಡುಪಿ ಶ್ರೀಕೃಷ್ಣ ಮಠಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಭೇಟಿ
ಉಡುಪಿ ಶ್ರೀಕೃಷ್ಣ ಮಠಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಭೇಟಿ ನೀಡಿದರು. ವೀರೇಂದ್ರ ಹೆಗ್ಗಡೆ ಅವರನ್ನು ವಾದ್ಯಘೋಷದೊಂದಿಗೆ ಸ್ವಾಗತಿಸಿ, ಶ್ರೀಮಠದ ದಿವಾನರಾದ ವರದರಾಜ ಭಟ್ ಹಾಗೂ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಬರಮಾಡಿಕೊಂಡು ದೇವರ ದರ್ಶನ ಮಾಡಿಸಿದರು. ಬಳಿಕ ಅವರು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್ ಎಚ್ ಮಂಜುನಾಥ್, ಜಿಲ್ಲಾ ನಿರ್ದೇಶಕ ಗಣೇಶ್, ಪ್ರಾದೇಶಿಕ ನಿರ್ದೇಶಕ ವಸಂತ್ […]
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಉತ್ಸವ: ಫೆ.13ಕ್ಕೆ ಮನ್ಮಹಾರಥೋತ್ಸವ, ಫೆ.14ಕ್ಕೆ ದೀಪೋತ್ಸವ
ಬ್ರಹ್ಮಾವರ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಉತ್ಸವ ನಾಳೆಯಿಂದ ಫೆ.15ರ ವರೆಗೆ ದೇವಳದ ಸನ್ನಿಧಿಯಲ್ಲಿ ನಡೆಯಲಿದೆ. ಫೆ.12ರಂದು ಕುಂಭ ಸಂಕ್ರಮಣ, ಕೆಂಡಸೇವೆ. ಫೆ.13ರಂದು ಮನ್ಮಹಾರಥೋತ್ಸವ, ಫೆ. 14ರಂದು ದೀಪೋತ್ಸವ, ಐದು ಮೇಳದವರಿಂದ ಯಕ್ಷಗಾನ ಸೇವೆ ಆಟ ಜರುಗಲಿದೆ. ಸೂಚನೆ: ಫೆ. 12ರ ಶನಿವಾರ ರಾತ್ರಿ ಗಂಟೆ 8 ರ ವರೆಗೆ ಮಾತ್ರ ದೇವರ ದರ್ಶನ ಹಾಗೂ ಸೇವೆಗಳಿಗೆ ಅವಕಾಶ ಇರುತ್ತದೆ. ಕೆಂಡಸೇವಾ ನಂತರ ಸೇವೆಗಳಿಗೆ ಅವಕಾಶವಿರುತ್ತದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ. ಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ. ಮಹೇಶ, […]
ಫೆ.16ರ ವರೆಗೂ ಪಿಯುಸಿ, ಪದವಿ ಕಾಲೇಜುಗಳಿಗೆ ರಜೆ: ಸಚಿವ ಅಶ್ವಥ್ ನಾರಾಯಣ
ಬೆಂಗಳೂರು: ರಾಜ್ಯಾದ್ಯಂತ ನಡೆದಿರುವ ಹಿಜಾಬ್ ಪ್ರಕರಣದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ವಿಶ್ವವಿದ್ಯಾಲಯಗಳು, ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು […]
ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ಸಮರ್ಪಿತ ಬದುಕು ಪ್ರತಿಯೊಬ್ಬ ಕಾರ್ಯಕರ್ತರಿಗೆ ಪ್ರೇರಣೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಪಂಡಿತ್ ದಯಾಳ್ ಉಪಾಧ್ಯಾಯರವರ ಬಲಿದಾನ ದಿನವನ್ನು ಸಮರ್ಪಣಾ ದಿನವನ್ನಾಗಿ ಫೆ.11ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಯಿಲಾಡಿ, ದೇಶ ಸೇವೆಗೆ ತನ್ನ ಇಡೀ ಜೀವನವನ್ನು ಮುಡಿಪಾಗಿಟ್ಟು ಇಂದಿಗೂ ಕಾರ್ಯಕರ್ತರಿಗೆ ಸ್ಫೂರ್ತಿ ಹಾಗೂ ಪ್ರೇರಣಾ ಶಕ್ತಿಯಾಗಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯರವರು ಅಜರಾಮರ. ಪಂಡಿತ್ ಜೀ ಅವರ ಜೀವನಾದರ್ಶ, ನಡೆದು ಬಂದ […]