ರಾಜ್ಯ ಸರ್ಕಾರ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿಯ ಸಮಯ ವಿಸ್ತರಣೆ
ರಾಜ್ಯ ಸರ್ಕಾರವು ಇನ್ನು ಮುಂದೆ ಬೆ.9 ರಿಂದ ಸಂಜೆ 7 ರ ವರೆಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿಯ ಸಮಯವನ್ನು ವಿಸ್ತರಣೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ ಎಂದು ನೋಂದಣೆ ಉಪ ಮಹಾ ಪರಿವೀಕ್ಷಕರು ಆದೇಶ ಹೊರಡಿಸಿದ್ದಾರೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಗಳಲ್ಲಿ ಜನಸಂದಣಿ ಹೆಚ್ಚಿರುವ ಕಾರಣ ಸಾರ್ವಜನಿಕರ ಹಿತದೃಷ್ಟಿಯಿಂದ ಕಚೇರಿಯ ಸಮಯವನ್ನು ವಿಸ್ತರಿಸಲಾಗಿದೆ. ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಉಪ ನೋಂದಣಿ ಕಚೇರಿ ಕರ್ತವ್ಯದ ಸಮಯ ಪರಿಷ್ಕರಣೆ ಮಾಡಲಾಗಿದ್ದು, ಈ ಸಂಬಂಧ […]
ಮುಂಡ್ಕೂರು: ಕಿಟಕಿ ಬಾಗಿಲು ಒಡೆದು ಹಣ ಕಳವು
ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದಲ್ಲಿ ಕಿಟಕಿ ಬಾಗಿಲು ಒಡೆದು ಹಣ ಕಳವು ಗೈದ ಘಟನೆ ನಡೆದಿದೆ. ಮುಂಡ್ಕೂರು ಗ್ರಾಮದ ಪೊಸ್ರಾಲ್ ಮುಲ್ಲಗುಡ್ಡೆ ಎಂಬಲ್ಲಿ ಫೆ.15 ರಂದು ಕಿಟಕಿ ಒಡೆದು ಹಿಂದಿನ ಬಾಗಿಲಿನ ಚಿಲಕ ತೆಗೆದು ಮನೆಯೊಳಗೆ ಪ್ರವೇಶಿಸಿ ಕಪಾಟಿನಲ್ಲಿರಿಸಿದ್ದ 35 ಸಾವಿರ ರೂಪಾಯಿ ನಗದನ್ನು ಕಳ್ಳರು ದೋಚಿದ್ದಾರೆ ಎಂದು ಶ್ರೀಧರ್ ಸನಿಲ್ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾಜಕೀಯ ಪ್ರೇರಿತ ಹಿಜಾಬ್ ವಿವಾದದ ವಿದ್ಯಾರ್ಥಿನಿಯರ ಮುಖವಾಡ ಬಯಲು: ಯಶ್ ಪಾಲ್ ಸುವರ್ಣ
ಹಿಜಾಬ್ ವಿವಾದದ ಮೂಲಕ ದೇಶದಾದ್ಯಂತ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ಹಾಳುಗೆಡವಲು ಯತ್ನಿಸುತ್ತಿರುವ ಮತೀಯವಾದಿಗಳ ರಾಜಕೀಯ ಮುಖವಾಡ ಇದೀಗ ಬಯಲಾಗಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ಅರ್ಜಿ ಸಲ್ಲಿಸಿ ಹಿಜಾಬ್ ಧರಿಸಲು ಅವಕಾಶ ಕೋರಿ ಶೀಘ್ರ ತೀರ್ಪು ನೀಡುವಂತೆ ಮನವಿ ಮಾಡಿದ್ದ ವಿದ್ಯಾರ್ಥಿನಿಯರು ಇದೀಗ ಉತ್ತರ ಪ್ರದೇಶ ಸಹಿತ ಪಂಚ ರಾಜ್ಯಗಳ ಚುನಾವಣೆ ಮುಗಿಯುವವರೆಗೆ ವಿಚಾರಣೆ ನಡೆಸದಂತೆ ಹೈಕೋರ್ಟ್ ಮಧ್ಯಂತರ ಅರ್ಜಿ ಸಲ್ಲಿಸುವ […]
ದೆಹಲಿ ಪೇಜಾವರ ಮಠದಲ್ಲಿ 17 ಬಾಲಕರಿಗೆ ಸಾಮೂಹಿಕ ಬ್ರಹ್ಮೋಪದೇಶ; ಪೇಜಾವರ ಶ್ರೀ ಭಾಗಿ
ನವದೆಹಲಿಯ ವಸಂತ್ ಕುಂಜ್ ನಲ್ಲಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸ್ಥಾಪಿಸಿದ ಉಡುಪಿ ಶ್ರೀ ಕೃಷ್ಣ ಧಾಮದಲ್ಲಿ ಸಾಮೂಹಿಕ ಬ್ರಹ್ಮೋಪದೇಶ ಕಾರ್ಯಕ್ರಮವು ಅತ್ಯಂತ ವೈಭವದಿಂದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಸಾನ್ನಿಧ್ಯದಲ್ಲಿ ನೆರವೇರಿತು. ಉತ್ತರ ಭಾರತದಲ್ಲಿ ತತ್ವಜ್ಞಾನ ಪ್ರಸಾರಕ್ಕಾಗಿ ಸ್ಥಾಪಿತವಾದ ಗುರುಕುಲದಲ್ಲಿ ಸುಮಾರು 40ಕ್ಕೂ ಅಧಿಕ ವಿಪ್ರ ಬಾಲಕರುಗಳು ಕಳೆದ ಮೂರು ವರ್ಷಗಳಿಂದ ಅಧ್ಯಯನ ನಡೆಸುತ್ತಿದ್ದು, ಹಲವು ಅಧ್ಯಾಪಕರು ಅಧ್ಯಾಪನವನ್ನು ನಡೆಸುತ್ತಿದ್ದಾರೆ. ಈ ಧಾರ್ಮಿಕ ವಿಧಿಯ ನೇತೃತ್ವವನ್ನು ಶ್ರೀ ಮಠದ ವ್ಯವಸ್ಥಾಪಕರಾದ ವಿದ್ವಾನ್ ದೇವಿಪ್ರಸಾದ ಆಚಾರ್ಯರು […]
ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಪಾಲನೆ ಕುರಿತ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಪಾಲಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
ಉಡುಪಿ, ಫೆ.15 : ವಿದ್ಯಾರ್ಥಿಗಳು ಹಿಜಾಬ್ ಧಾರಣೆ, ಮಾಡುವ ಸಂಬಂದ ಮಾನ್ಯ ಉಚ್ಚ ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶವನ್ನು ಜಿಲ್ಲೆಯಲ್ಲಿ ಪಾಲನೆ ಮಾಡುವುದರೊಂದಿಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕುತ್ತು ಬಾರದೇ ಇರುವ ರೀತಿಯಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಮನವಿ ಮಾಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೈಕೋರ್ಟ್ ಆದೇಶ ಪಾಲನೆ ಮಾಡುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ: ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಪಾಲನೆ ಸಂಬಂದ […]