ಫೆ.16 ರಿಂದ ಪಿಯುಸಿ, ಪದವಿ ತರಗತಿಗಳು ಆರಂಭ

ಬೆಂಗಳೂರು: ಫೆ.16 ರಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿದೆ ಎಂದು ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಹೈಕೋರ್ಟ್ ಸೂಚನೆಯಂತೆ ಕಾಲೇಜು ಅರಂಭ ಮಾಡಲಾಗಿದ್ದು, ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರಬೇಕು. ಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.

ಪದವಿ ಕಾಲೇಜಿಗೆ ಹೇಗೆ ಬೇಕಾದರೂ ಬರಲಿ; ಸಚಿವ ಅಶ್ವತ್ಥನಾರಾಯಣ

ಚಾಮರಾಜನಗರ: ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಹಾಗಾಗಿ, ವಿದ್ಯಾರ್ಥಿಗಳು ಯಾವ ರೀತಿಯ ಬಟ್ಟೆ ಹಾಕಿಕೊಂಡು ಬರುವುದಕ್ಕೆ ಅವಕಾಶ ಇದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ನಿಯಮಕ್ಕೆ ಅನುಸಾರವಾಗಿಯೇ ಬರಬೇಕು. ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡುವುದಿಲ್ಲ ಎಂದರು. ಹಿಜಾಬ್- ಕೇಸರಿ ಶಾಲು ವಿಚಾರದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಅದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಹೇಳಿದರು.

ಮಲ್ಪೆ: ಬಂದರಿನ ದಕ್ಕೆ ನೀರಿಗೆ ಬಿದ್ದು ಕಾರ್ಮಿಕ ಸಾವು

ಮಲ್ಪೆ ಬಂದರಿನ ದಕ್ಕೆಯ ನೀರಿಗೆ ಬಿದ್ದು ಕಾರ್ಮಿಕ ನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಮಹಾರಾಷ್ಟ್ರ ರತ್ನಗಿರಿಯ ನಿವಾಸಿ ನಿತಿನ್ ಮೃತಪಟ್ಟ ಕಾರ್ಮಿಕ. ಈತ ಇತರ ಇಬ್ಬರು ಕಾರ್ಮಿಕರೊಂದಿಗೆ ಮಲ್ಪೆ ಬಂದರಿನಲ್ಲಿ ನಾಗಾರ್ಜುನ ಕಂಪೆನಿಯ ಪೈಪ್ ಲೈನ್ ಕಾಮಗಾರಿಯ ಕೆಲಸ ಮಾಡುತ್ತಿದ್ದನು. ಈ ವೇಳೆ ಆಕಸ್ಮಿಕವಾಗಿ ದಕ್ಕೆಯ ನೀರಿಗೆ ಬಿದ್ದು ಕಣ್ಮರೆಯಾಗಿದ್ದನು. ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು, ನಿನ್ನೆ ತಡರಾತ್ರಿ 12 ಗಂಟೆಯವರೆಗೆ ಶೋಧ ಕಾರ್ಯ ನಡೆಸಿದ್ದರು. […]

ಫೆ.17: ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆ

ಉಡುಪಿ, ಫೆ14: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು ವತಿಯಿಂದ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ 9 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಫೆಬ್ರವರಿ 17 ರಂದು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸ್ಫರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಜಿಲ್ಲಾ ಹಂತದಲ್ಲಿ ಪ್ರಥಮ ಹಾಗೂ ದ್ವಿತೀಯ […]