ಉಡುಪಿ: ಮಗುವಿನ ವಾರಸುದಾರರ ಪತ್ತೆಗೆ ಮನವಿ

ಉಡುಪಿ: ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ಪುನರ್ವಸತಿಗಾಗಿ ಕೃಷ್ಣಾನುಗೃಹ ದತ್ತು ಸಂಸ್ಥೆಗೆ ದಾಖಲಿಸಲಾದ ಪವನ್ ಎಂಬ ಗಂಡು ಮಗುವಿನ ಪೋಷಕರು ಅಥವಾ ವಾರಸುದಾರರು ಯಾರಾದರೂ ಇದ್ದಲ್ಲಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾಧಿಕಾರಿಗಳ ಸಂಕೀರ್ಣ, ಮಣಿಪಾಲ. ದೂ. ಸಂಖ್ಯೆ: 0820-2574964 ಅನ್ನು ಸಂಪರ್ಕಿಸುವOತೆ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುರತ್ಕಲ್: ಟೋಲ್ ಅಕ್ರಮ ವಿರೋಧಿಸಿ ಆಪತ್ಭಾಂದವ ಆಸೀಫ್ ನಡೆಸುತ್ತಿರುವ ಹೋರಾಟಕ್ಕೆ ಕರವೇ ಉಡುಪಿ ಘಟಕದಿಂದ ನೈತಿಕ‌ ಬೆಂಬಲ

ಸುರತ್ಕಲ್: ಇಲ್ಲಿನ ಟೋಲ್ ಅಕ್ರಮ ವಿರೋಧಿಸಿ ಆಪತ್ಭಾಂದವ ಆಸೀಫ್ ಅವರು ಕಳೆದ ಹತ್ತು ದಿನಗಳಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಉಡುಪಿ ಘಟಕ ವತಿಯಿಂದ ನೈತಿಕ ಬೆಂಬಲ ನೀಡಿದೆ. ಕರವೇ ಉಡುಪಿ ಜಿಲ್ಲಾ ಹಾಗೂ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಇಂದು ತೆರಳಿ ನೈತಿಕ‌ ಬೆಂಬಲ ಸೂಚಿಸಿದರು. ಇದೇ ವೇಳೆ ಮುಂದಿನ ಹೋರಾಟದಲ್ಲಿ ಕರವೇ ಕಾರ್ಯಕರ್ತರು ಕೂಡ ಭಾಗಿಯಾಗಲಿದ್ದಾರೆಂದು ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ […]

ಉಡುಪಿ: ಕೌಂಟುಬಿಕ ಕಲಹ; ಕಾರ್ಮಿಕ ನೇಣಿಗೆ ಶರಣು

ಉಡುಪಿ: ವಲಸೆ ಕಾರ್ಮಿಕರೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹನುಮಂತ ನಗರದಲ್ಲಿ ಬುಧವಾರ ನಡೆದಿದೆ. ಮೃತ ವ್ಯಕ್ತಿಯನ್ನು 40 ವರ್ಷದ ವಿನೋದ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ವಿಜಯಪುರದ ನಿವಾಸಿ ಎಂದು ತಿಳಿದು ಬಂದಿದ್ದು, ಇಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಕೌಂಟುಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು, ರಾಜೇಶ್ ಬಿ. […]

ಉಡುಪಿ: ಸರ್ಕಾರಿ ಜಮೀನು ಒತ್ತುವರಿ ಕಂಡು ಬಂದಲ್ಲಿ ದೂರು ನೀಡಿ

ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಅಥವಾ ಸಂಬಂಧಪಟ್ಟ ತಹಶೀಲ್ದಾರಿಗೆ ದೂರು ನೀಡುವಂತೆ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಂತರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆ

ಮಣಿಪಾಲ: ಬಾಲ್ಯದ ಕ್ಯಾನ್ಸರ್‌ಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಕ್ಯಾನ್ಸರ್ ಪೀಡಿತ ಮಕ್ಕಳು, ಅವರ ಆರೈಕೆ ಮಾಡುವವರು ಮತ್ತು ಕ್ಯಾನ್ಸರ್ ನಿಂದ ಬದುಕುಳಿದವರಿಗೆ ಬೆಂಬಲ ವ್ಯಕ್ತಪಡಿಸಲು ಜಾಗತಿಕವಾಗಿ ಪ್ರತಿ ವರ್ಷ ಫೆಬ್ರವರಿ 15 ರಂದು ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನವನ್ನು (ಐ ಸಿ ಸಿ ಡಿ ) ಆಚರಿಸಲಾಗುತ್ತದೆ. “ಉತ್ತಮ ಬದುಕುಳಿಯುವಿಕೆ “ನಿಮ್ಮ ಕೈಗಳ ಮೂಲಕ ಸಾಧಿಸಬಹುದಾಗಿದೆ” ಎಂಬುದು ಐಸಿಸಿಡಿಯ ಮೂರು ವರ್ಷಗಳ ಧ್ಯೇಯ  (2021-2023) ವಾಕ್ಯವಾಗಿದ್ದು, ಇದು ಈ ಅಭಿಯಾನದ ಎರಡನೇ ವರ್ಷವಾಗಿದೆ. ಕಸ್ತೂರ್ಬಾ  ವೈದ್ಯಕೀಯ […]