ಬಿ.ಎಡ್ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ಪ್ರವೇಶಾತಿ ಪ್ರಾರಂಭಗೊಂಡಿದ್ದು, ಸಿಇಟಿ ಪ್ರವೇಶ ಪರೀಕ್ಷೆ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದ್ದು, ಏಪ್ರಿಲ್ 3 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.ksoumysuru.ac.in ಅನ್ನು ಸಂಪರ್ಕಿಸುವಂತೆ ಮುಕ್ತ ವಿ.ವಿ.ಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ

ಉಡುಪಿ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು, ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ ಗೆ ಒಳಪಡುವ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಕಾಡುಗೊಲ್ಲ/ ಪಟ್ಟಿಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯಿತ, ಮರಾಠ ಮತ್ತು ಇದರ ಉಪಜಾತಿಗಳು ಹೊರತುಪಡಿಸಿ) ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ 1 ರಿಂದ ಗರಿಷ್ಠ 5 ಎಕರೆ […]