ಫೆ.19 ರಿಂದ 21 ವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಉಡುಪಿ: ಕರ್ನಾಟಕ ಲೋಕ ಸೇವಾ ಆಯೋಗದಿಂದ ನಡೆಸಲ್ಪಡುವ 2021 ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಫೆಬ್ರವರಿ 19 ರಿಂದ 21ರ ವರೆಗೆ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ನಡೆಯಲಿದೆ. ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರದ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ […]
ಫೆ.19ರಂದು ಜಿಲ್ಲೆಯಲ್ಲಿ ಕಂದಾಯ ಸಚಿವರ ಪ್ರವಾಸ
ಉಡುಪಿ: ರಾಜ್ಯದ ಕಂದಾಯ ಸಚಿವ ಆರ್. ಅಶೋಕ್ ಅವರು ಫೆಬ್ರವರಿ 19ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 10.30 ಕ್ಕೆ ಕಾರ್ಕಳದ ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಕಂದಾಯ ಮೇಳ ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆಗೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
ಉಡುಪಿ: ಕೃಷಿ ಇಲಾಖೆಯ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರವು ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ದೊರಕಿಸಲು ಹಾಗೂ ಸಾವಯವ ಕೃಷಿಯನ್ನು ಉತ್ತೇಜಿಸಲು ಸಾವಯವ ಸಿರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಸಾವಯವ ಸಿರಿ ಯೋಜನೆಯನ್ನು ಅನುಷ್ಠಾನ ಮಾಡಲು ಅರ್ಹ ನೊಂದಾಯಿತ ಸಾಮಾಜಿಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹತ್ತು ವರ್ಷಗಳಿಂದ ಸಾವಯವ ಕೃಷಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ, ಸಾವಯವ ಕೃಷಿ ಸಂಬಂಧಿತ ತರಬೇತಿ/ಕಾರ್ಯಾಗಾರಗಳನ್ನು ಆಯೋಜಿಸಲು ಅವಶ್ಯಕವಾದ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ, ಕನಿಷ್ಟ […]