ಹಿಜಾಬ್ – ಕೇಸರಿ ಶಾಲು ವಿವಾದ: ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಉಡುಪಿ, ಫೆ.19: ಜಿಲ್ಲೆಯಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು, ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲಿನ 200 ಮೀ. ಪ್ರದೇಶದಲ್ಲಿ ಫೆಬ್ರವರಿ 21 ರ ಬೆಳಗ್ಗೆ 6 ಗಂಟೆಯಿಂದ ಫೆ. 28ರ ಸಂಜೆ 6 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973 ರ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ. ಈ […]

ಉಡುಪಿ: ಮಾನಸಿಕ ಅಸ್ವಸ್ಥ ನಾಪತ್ತೆ

ಉಡುಪಿ, ಫೆ.19: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ, ನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶಂಕರಪುರದ ವಿಶ್ವಾಸದ ಮನೆ ಎಂಬ ಮಾನಸಿಕ ಅಸ್ವಸ್ಥರ ಪುನರ್ವಸತಿ ಆಶ್ರಮದಲ್ಲಿ ವಾಸವಿದ್ದ, ಪಂಕಜ್ (24) ಎಂಬ ಯುವಕನು ಫೆ.18 ರಿಂದ ನಾಪತ್ತೆಯಾಗಿರುತ್ತಾರೆ. 152 ಸೆಂ.ಮೀ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2520444 ಅನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಕಂದಾಯ ಸಚಿವರ ಗ್ರಾಮ ವಾಸ್ತವ್ಯ: 1000 ಕ್ಕೂ ಅಧಿಕ ಮಂದಿಗೆ ಸವಲತ್ತು ವಿತರಣೆ

ಉಡುಪಿ: ಫೆ.19 ರಂದು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಗ್ರಾಮದಲ್ಲಿ ನಡೆಯುವ ರಾಜ್ಯದ ಕಂದಾಯ ಸಚಿವ ಆರ್. ಅಶೋಕ್ ಅವರ ಜನಸ್ಪಂದನ ಕಾರ್ಯಕ್ರಮದಲ್ಲಿ 1000 ಕ್ಕೂ ಅಧಿಕ ಮಂದಿಗೆ ವಿವಿಧ ಇಲಾಖೆಗಳಿಂದ ಸವಲತ್ತುಗಳನ್ನು ವಿತರಿಸಲಾಗುವುದು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು ಕೊಕ್ಕರ್ಣೆಯ ಕೆಪಿಎಸ್ ಶಾಲೆಯಲ್ಲಿ, ಕಂದಾಯ ಸಚಿವರ ಜನಸ್ಪಂದನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಕುರಿತು ಕೈಗೊಂಡಿರುವ  ಸಿದ್ಧತೆಗಳ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಂದಾಯ ಸಚಿವರು ಫೆಬ್ರವರಿ 19 ರಂದು […]

ಮುಕ್ತ ವಿವಿ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಕೆಂದ್ರದಲ್ಲಿ ಪ್ರಸಕ್ತ ಸಾಲಿಗೆ ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಲಿಬ್ ಐ.ಎಸ್ಸಿ, ಬಿ.ಬಿ.ಎ, ಬಿ.ಎಸ್ಸಿ, ಬಿ.ಸಿ.ಎ, ಬಿ.ಎಡ್, ಎಂ.ಎ, ಎಂಕಾ, ಎಂ.ಬಿ.ಎ, ಎಂಎಸ್ಸಿ, ಎಂ.ಲಿ.ಬ್‌ಐ.ಎಸ್.ಸಿ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅರ್ಜಿ ಜೊತೆ ದಾಖಲಾತಿಗಳನ್ನು ಪ್ರಾದೇಶಿಕ ಕೇಂದ್ರಕ್ಕೆ ಸಲ್ಲಿಸಿ ಗುರುತಿನ ಪತ್ರ ಮತ್ತು ಸಿದ್ಧಪಾಠಗಳನ್ನು ಪಡೆಯಬಹುದು. ಬಿ.ಎಡ್ ಶಿಕ್ಷಣ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಮಾರ್ಚ್ […]

ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆ

ಉಡುಪಿ: ನಾಗರಿಕರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚು ಭಾಗವಹಿಸುವಂತೆ ಮಾಡುವ ಉದ್ದೇಶದಿಂದ, ಭಾರತೀಯ ಚುನಾವಣಾ ಆಯೋಗವು, ಜನವರಿ 25 ರಿಂದ ಮಾರ್ಚ್ 15 ರ ವರೆಗೆ ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ “ನನ್ನ ಮತ ನನ್ನ ಭವಿಷ್ಯ ಒಂದು ಮತದ ಶಕ್ತಿ” ವಿಷಯದ ಕುರಿತು ರಸಪ್ರಶ್ನೆ, ವೀಡಿಯೋ ತಯಾರಿಕೆ, ಗಾಯನ, ಭಿತ್ತಿಚಿತ್ರ ವಿನ್ಯಾಸ ಹಾಗೂ ಘೋಷ ವಾಕ್ಯ ಬರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿರುತ್ತದೆ. ಸ್ಫರ್ಧೆಯಲ್ಲಿ  ಹವ್ಯಾಸಿಗಳು, ವೃತ್ತಿಪರರು, ಸಾಂಸ್ಥಿಕ ಸಂಸ್ಥೆಗಳು ಎಂಬ ವರ್ಗಗಳಿದ್ದು,  ಭಾಗವಹಿಸಲು ವಯಸ್ಸಿನ ಮಿತಿ […]