ಹೊರರಾಜ್ಯದ ವಾಹನಗಳು ರಾಜ್ಯದ ತೆರಿಗೆ ಪಾವತಿಸದಿದ್ದರೆ ವಾಹನ ಮುಟ್ಟುಗೋಲು
ಉಡುಪಿ: ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಅಧಿಕ ದಿನಗಳಿಂದ ತೆರಿಗೆ ಪಾವತಿಸದೇ ಹೊರರಾಜ್ಯದ ವಾಹನಗಳು ಓಡಾಡುತ್ತಿರುವುದು ಕಂಡುಬಂದಿದ್ದು, ಹೊರರಾಜ್ಯದ ಮೋಟಾರು ವಾಹನ ಮಾಲೀಕರು ಈ ಪ್ರಕಟಣೆಯ ಒಂದು ವಾರದ ಒಳಗೆ ತಮ್ಮ ವಾಹನಗಳಿಗೆ ರಾಜ್ಯದ ತೆರಿಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಪಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೊರರಾಜ್ಯದ ವಾಹನಗಳು ತೆರಿಗೆ ಪಾವತಿಸದೇ ಜಿಲ್ಲೆಯಲ್ಲಿ ಸಂಚರಿಸುತ್ತಿರುವುದು ಕಂಡುಬಂದಲ್ಲಿ ತಪಾಸಣೆ ವೇಳೆ ವಾಹನವನ್ನು ಮುಟ್ಟುಗೋಲು ಹಾಕಲಾಗುವುದು. ಹೊರರಾಜ್ಯದ ವಾಹನಗಳಿಗೆ ಬಿ.ಹೆಚ್ ಸೀರಿಸ್ ಸಂಖ್ಯೆಯನ್ನು ಪಡೆಯಲು ಇಚ್ಛಿಸುವ […]