ಮೀನುಗಾರಿಕೆಗೆ ತೆರಳಿದ ವ್ಯಕ್ತಿ ನಾಪತ್ತೆ

ಉಡುಪಿ, ಫೆ.21: ಮೀನುಗಾರಿಕೆ ಕೆಲಸಕ್ಕೆಂದು ಮಲ್ಪೆಗೆ ತೆರಳಿದ ಜಿಲ್ಲೆಯ ಆವರ್ಸೆ ಗ್ರಾಮದ ನಿವಾಸಿ ಹರೀಶ (38) ಎಂಬ ವ್ಯಕ್ತಿಯು ಫೆಬ್ರವರಿ 10 ರಿಂದ ನಾಪತ್ತೆಯಾಗಿರುತ್ತಾರೆ. 5.5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ವೃತ್ತ ಕಚೇರಿ ಮೊ.ನಂ: 9480805432, ಕೋಟ ಠಾಣೆ ದೂ.ಸಂಖ್ಯೆ: 0820-2564155, ಮೊ.ನಂ: 9480805454 ಅನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ […]

ಅಜೆಕಾರು: ಸರಕು ಸಾಗಾಣಿಕೆಯ ಲಾರಿ ಪಲ್ಟಿ; ಚಾಲಕ ಗಂಭೀರ

ಅಜೆಕಾರು: ಸರಕು ಸಾಗಾಣಿಕೆಯ ಲಾರಿಯೊಂದು ತಿರುವಿನಲ್ಲಿ ಉರುಳಿ ಬಿದ್ದ ಪರಿಣಾಮ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಕೈಕಂಬ ಸಮೀಪದ ಮಾರಿಗುಡಿ ಬಳಿ ಇಂದು ಬೆಳಿಗ್ಗೆ ನಡೆದಿದೆ. ಲಾರಿ ಹುಬ್ಬಳ್ಳಿಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದು, ಈ ವೇಳೆ ಅಜೆಕಾರು ಕೈಕಂಬದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಇದರ ಪರಿಣಾಮ ಚಾಲಕನಿಗೆ ಗಂಭೀರ ಗಾಯವಾಗಿದ್ದು, ನಿರ್ವಾಹಕ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಗೆ ದಾಖಲಿಸಲಾಗಿದೆ ಎಂದು […]

ಉಡುಪಿ: ಸಚಿವ ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯರ್ತರು ಸಚಿವ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿದರು. ದೇಶದ್ರೋಹದ ಹೇಳಿಕೆ ನೀಡಿರುವ ಈಶ್ವರಪ್ಪರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಕಾಂಗ್ರೆಸ್ […]

ಇಂದು ಅಂತರಾಷ್ಟ್ರೀಯ ಮಾತೃಭಾಷಾ ದಿನ: ಮಾತೃ ಭಾಷೆಯಲ್ಲಿ ಮಾತನಾಡೋಣ… ಸಂಸ್ಕೃತಿ ಉಳಿಸೋಣ….

  ಹೊಸದಿಲ್ಲಿ: ಪ್ರತಿ ವರ್ಷ ಫೆಬ್ರವರಿ 21ನ್ನು ಅಂತರಾಷ್ಟ್ರೀಯ ಮಾತೃಭಾಷಾ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರಪಂಚದಾದ್ಯಂತ ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆ ಮತ್ತು ಬಹುಭಾಷಾ ಸಂಸ್ಕೃತಿಯನ್ನು ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಭಾಷೆ ಕೇವಲ ಸಂವಹನ ಸಾಧನ ಮಾತ್ರವಲ್ಲ; ಇದು ವಿಶಾಲವಾದ ಸಾಂಸ್ಕೃತಿಕ ಮತ್ತು ಬೌದ್ಧಿಕ ಪರಂಪರೆಯನ್ನು ಪ್ರತಿನಿಧಿಸುತ್ತದೆ. ಭಾರತದಲ್ಲಿ 2022 ರಲ್ಲಿ ಮುನ್ನೆಲೆಗೆ ಬಂದಿರುವ ವಿಷಯ “ಬಹುಭಾಷಾ ಕಲಿಕೆಗಾಗಿ ತಂತ್ರಜ್ಞಾನವನ್ನು ಬಳಸುವುದು: ಸವಾಲುಗಳು ಮತ್ತು ಅವಕಾಶಗಳು”. ಬಹುಭಾಷಾ ಶಿಕ್ಷಣವನ್ನು ಮುಂದುವರಿಸಲು ಮತ್ತು ಎಲ್ಲರಿಗೂ ಗುಣಮಟ್ಟದ ಬೋಧನೆ ಮತ್ತು […]

ಕಾರ್ಕಳದ ಅತ್ತೂರು ಬೆಸಿಲಿಕಾ ಚರ್ಚಿನಲ್ಲಿ ಸಂಭ್ರಮದ ವಾರ್ಷಿಕೋತ್ಸವಾಚರಣೆಗಳು ಪ್ರಾರಂಭ

ಕಾರ್ಕಳ: ಫೆ.20, ಭಾನುವಾರದಂದು, ಅತ್ತೂರಿನ ಸಂತ ಲಾರೆನ್ಸ್ ಮೈನರ್ ಬೆಸಿಲಿಕಾದ ವಾರ್ಷಿಕ ಉತ್ಸವದ ಆಚರಣೆಗಳು ಸಂಭ್ರಮದಿಂದ ಆರಂಭವಾಯಿತು. ಜನವರಿ ಕೊನೆಯ ವಾರದಲ್ಲಿ ನಡೆಯಬೇಕಿದ್ದ ವಾರ್ಷಿಕ ಹಬ್ಬವನ್ನು ಕೋವಿಡ್ ಭೀತಿಯಿಂದಾಗಿ ಮುಂದೂಡಲಾಗಿತ್ತು. ಭಾನುವಾರ ಬೆಳಗ್ಗೆ ಧ್ವಜಾರೋಹಣದೊಂದಿಗೆ ವಾರ್ಷಿಕ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಬೆಳಗಿನ ಜಾವ ನಡೆದ ಹಬ್ಬದ ಪವಿತ್ರ ಆಚರಣೆಯ ಅಧ್ಯಕ್ಷತೆಯನ್ನು ಶಿವಮೊಗ್ಗ ಧರ್ಮಪ್ರಾಂತ್ಯದ ಬಿಷಪ್ ಡಾ.ಫ್ರಾನ್ಸಿಸ್ ಸೆರಾವೋ ವಹಿಸಿದ್ದರೆ, ಸಂಜೆ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ವಹಿಸಿದ್ದರು.   […]