ಇಂದಿನಿಂದ ಪ್ರಾಯೋಗಿಕ ಪರೀಕ್ಷೆಗಳು ಶುರು; ಹಾಜರಾಗದವರಿಗೆ ಮರುಪರೀಕ್ಷೆಯೂ ಇಲ್ಲ, ಅಂಕವೂ ಇಲ್ಲ

ಬೆಂಗಳೂರು: ಹಿಜಬ್ ಧರಿಸುವ ಕುರಿತು ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಹೈಕೋರ್ಟ್ ಮಧ್ಯಂತರ ಆದೇಶವನ್ನು ನೀಡಿದ್ದರೂ ಅದಕ್ಕೆ ಸೊಪ್ಪು ಹಾಕದೆ ಹಿಜಬ್ ಗಾಗಿ ಪಟ್ಟು ಹಿಡಿದು ಕುಳಿತುಬಿಟ್ಟರೆ ಅಂತಹ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಹಾಜರಾಗುವ ಅವಕಾಶವನ್ನು ಕಳೆದುಕೊಳ್ಳಲಿರುವುದು ನಿಶ್ಚಿತ. ಫೆ. 21, ಸೋಮವಾರದಿಂದಲೇ ಪ್ರಾಯೋಗಿಕ ಪರೀಕ್ಷೆಗಳು ಶುರುವಾಗಲಿದ್ದು, ಹಿಜಬ್ ಗಾಗಿ ಪಟ್ಟು ಹಿಡಿದಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಒಂದು ವೇಳೆ ಪ್ರಾಯೋಗಿಕ ಪರೀಕ್ಷೆಗಳಿಗೆ ಹಾಜರಾಗದಿದ್ದಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. […]

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ಲಾಸ್ಟಿಕ್ ತಂತ್ರಜ್ಞಾನದ ಕುರಿತು ತರಬೇತಿ

ಉಡುಪಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಯುವಕ ಹಾಗೂ ಯುವತಿಯರಿಗೆ ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯಲ್ಲಿ (ಸಿಪೆಟ್) ಉಚಿತ ಊಟ ಹಾಗೂ ವಸತಿಯೊಂದಿಗೆ ಪ್ಲಾಸ್ಟಿಕ್ ತಂತ್ರಜ್ಞಾನದ ಕುರಿತು 3 ತಿಂಗಳ ವಿವಿಧ ರೀತಿಯ ವೃತ್ತಿಪರ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದ್ದು, ತರಬೇತಿ ಅವಧಿಯಲ್ಲಿ ಮಾಸಿಕ 2000 ರೂ. ಶಿಷ್ಯವೇತನ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಸಂಪೂರ್ಣ ವಿವರಗಳೊಂದಿಗೆ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ಹೆಬ್ಬಾಳ ಇಂಡಸ್ಟ್ರಿಯಲ್ […]

ಫೆ.22: ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣೆ, ಚಿಕಿತ್ಸೆ ಶಿಬಿರ

ಪಡುಬಿದ್ರಿ:  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಹಾಗೂ ಪಡುಬಿದ್ರಿ ಆರೋಗ್ಯ ಕೇಂದ್ರಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಚಿಕಿತ್ಸಾ ಶಿಬಿರವು ಫೆ.22 ರಂದು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ. ಫೆ.22 ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ರ ವರೆಗೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಂಘಟಕರು ತಿಳಿಸಿದ್ದಾರೆ.