ಉಡುಪಿ: ಕಿದಿಯೂರಿನ ಯುವತಿ ನಾಪತ್ತೆ
ಉಡುಪಿ: ಕ್ಯಾಂಟೀನ್ ಹೋಗಿ ಬರುತ್ತೇನೆಂದು ಹೇಳಿ ಹೋದ ಯುವತಿಯೊಬ್ಬಳು ಮನೆಗೆ ವಾಪಸು ಬಾರದೆ ನಾಪತ್ತೆಯಾಗಿರುವ ಘಟನೆ ಅಂಬಲಪಾಡಿ ಕಿದಿಯೂರು ಎಂಬಲ್ಲಿ ನಡೆದಿದೆ. ಅಂಬಲಪಾಡಿ ಕಿದಿಯೂರು ನಿವಾಸಿ ಧರ್ಮಪಾಲ ವರ್ಮ ಅವರ ಮಗಳು 23 ವರ್ಷದ ಏಕತಾ ವರ್ಮಾ ನಾಪತ್ತೆಯಾದ ಯುವತಿ. ಈಕೆ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿಯೇ ಇದ್ದಳು. ಫೆ. 21ರಂದು ಮಧ್ಯಾಹ್ನ 1.30 ಗಂಟೆಗೆ ಮಣಿಪಾಲದಲ್ಲಿರುವ ಅಣ್ಣನ ಕ್ಯಾಂಟೀನ್ ಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋಗಿದ್ದಳು. ಆ ಬಳಿಕ ಮಣಿಪಾಲ ಕ್ಯಾಂಟೀನ್ ಗೂ ಹೋಗದೆ ಮನೆಗೂ […]
ಹಿರಿಯಡಕ: ಪರೀಕ್ಷೆಯ ಭಯದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣಿಗೆ ಶರಣು
ಹಿರಿಯಡ್ಕ: ಪರೀಕ್ಷೆಯ ಭಯದಿಂದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ತಾಲೂಕಿನ ಬೊಮ್ಮರಬೆಟ್ಟು ಗ್ರಾಮದ ಕಾಜರಗುತ್ತು ರಸ್ತೆ ಎಂಬಲ್ಲಿ ನಡೆದಿದೆ. ಬೊಮ್ಮರಬೆಟ್ಟು ಗ್ರಾಮದ ಕಾಜರಗುತ್ತು ರಸ್ತೆಯ ಕುಕ್ಕುದಕಟ್ಟೆ ನಿವಾಸಿ ಜಿಸಾನ್ ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ. ಈತ ಮಣಿಪಾಲ ಎಂಜೆಸಿ ಕಾಲೇಜಿನಲ್ಲಿ 10ನೇ ತರಗತಿಯ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದನು. ಆದರೆ, ಕಳೆದ ಒಂದು ವಾರದಿಂದ ಶಾಲೆಗೆ ಸರಿಯಾಗಿ ಹೋಗದೆ ಮನೆಯಲ್ಲಿಯೇ ಇದ್ದನು. ಅಲ್ಲದೆ, ಫೆ.21ರಂದು ಪರೀಕ್ಷೆ ಇದ್ದು, ಅದಕ್ಕೂ ಹೋಗದೆ ಮನೆಯಲ್ಲಿಯೇ ಇದ್ದನು. ಇದಕ್ಕೆ […]
ಉಡುಪಿ: ಮನೆಯೊಂದರ ಬಾವಿಗೆ ಬಿದ್ದ ಮೂರು ಕುರಿಗಳ ರಕ್ಷಣೆ; ಕುರಿಗಳಿಗೆ ಮರುಜನ್ಮ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ
ಉಡುಪಿ: ಬಾವಿಗೆ ಬಿದ್ದ ಮೂರು ಕುರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಉಡುಪಿ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಮೀಪ ಇಂದು ಸಂಜೆ ನಡೆದಿದೆ. ಇಲ್ಲಿನ ಮನೆಯೊಂದರ ಬಾವಿಯಲ್ಲಿ ಮೂರು ಕುರಿಗಳು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕದ ದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸುಧಾಕರ್ ಹಗ್ಗದ ಸಹಾಯದಿಂದ ಬಾವಿಗಿಳಿದು, ಅಗ್ನಿಶಾಮಕದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೂರು ಕುರಿಗಳನ್ನು ರಕ್ಷಣೆ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ […]
ಹಿಜಾಬ್– ಕೇಸರಿ ಶಾಲು ವಿವಾದ ಹಿನ್ನೆಲೆ: ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಉಡುಪಿ, ಫೆ.22: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಫೆ. 24 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 5 ರ ಸಂಜೆ 6 ಗಂಟೆಯವರೆಗೆ (ಫೆ. 27 ಭಾನುವಾರ ಹಾಗೂ ಮಾರ್ಚ್ 1 ರಂದು ಮಹಾಶಿವರಾತ್ರಿ ಪ್ರಯುಕ್ತ ರಜೆ ಇದ್ದು, ಈ ಎರಡು ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪದವಿ ಪೂರ್ವ, ಪಾಲಿಟೆಕ್ನಿಕ್ […]
ಜಿಲ್ಲೆಯಲ್ಲಿ 73,995 ಮಕ್ಕಳಿಗೆ ಪೋಲಿಯೋ ಲಸಿಕೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ಫೆಬ್ರವರಿ 27 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 0-5 ವರ್ಷದೊಳಗಿನ 73,995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 0-5 ವರ್ಷದೊಳಗೆ ಗ್ರಾಮೀಣ ಪ್ರದೇಶದ 61,105 ಮತ್ತು ನಗರ ಪ್ರದೇಶದ 12,890 ಸೇರಿದಂತೆ ಒಟ್ಟು 73,995 ಮಕ್ಕಳಿಗೆ ಫೆಬ್ರವರಿ 27 ರಂದು ಪಲ್ಸ್ ಪೋಲಿಯೋ ಲಸಿಕೆ ನೀಡಲು, […]