ಮಂಗಳಮುಖಿಯರಿಂದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಸೇವೆ: ದೇವರ ಭಕ್ತಿಗೆ ಲಿಂಗದ ಭೇದವಿಲ್ಲ, ಇದು ಇತಿಹಾಸದಲ್ಲೆ ಮೊದಲು

ಮಂಗಳೂರು: ನಾವೆಲ್ಲರೂ ದೇವರ ಸೃಷ್ಟಿ. ಮನುಷ್ಯ ತನ್ನ ಜೊತೆಗಾರ ಮನುಷ್ಯರಲ್ಲಿ ಭೇದವೆಣಿಸಬಹುದು ಆದರೆ ದೇವರ ಸಮ್ಮುಖದಲ್ಲಿ ಬಡವ-ಬಲ್ಲಿದ, ಹೆಣ್ಣು-ಗಂಡು, ಅಷ್ಟೇ ಏಕೆ ತೃತೀಯ ಲಿಂಗಿಗಳೂ ಸಮಾನರು. ದೇವರ ಭಕ್ತಿಗೆ ಲಿಂಗದ ಭೇದವುಂಟೆ? ಇಲ್ಲ ಎಂದು ತೋರಿಸಿಕೊಡುತ್ತಿದ್ದಾರೆ ಮಂಗಳೂರಿನ ಐವರು ತೃತೀಯ ಲಿಂಗಿಗಳು. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐವರು ತೃತೀಯ ಲಿಂಗಿಗಳು ಸೇರಿ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ ಸೇವೆಯನ್ನು ನೀಡಲು ನಿರ್ಧರಿಸಿದ್ದಾರೆ. ಮಂಗಳೂರಿನ ಕೋಡಿಕಲ್ ಕಟ್ಟೆ ಮೈದಾನದಲ್ಲಿ ಫೆ.25 ರಂದು ಸಾಂಜೆ ಪಾವಂಜೆ ಶ್ರೀ ಜ್ಞಾನಶಕ್ತಿ […]

ಕಾಪು: ದಿ.ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ಸ್ಮರಣಾರ್ಥ ‘ಗುರ್ಮೆ ಗೋ ವಿಹಾರ ಕೇಂದ್ರ ಲೋಕಾರ್ಪಣೆ’

ಕಾಪು: ಗುರ್ಮೆ ಫೌಂಡೇಶನ್ ವತಿಯಿಂದ ದಿ.ಪದ್ಮಾವತಿ ಪಿ. ಶೆಟ್ಟಿ ಗುರ್ಮೆ ಅವರ ಸ್ಮರಣಾರ್ಥ ಕಾಪುವಿನ ಕಳತ್ತೂರಿನ ಗುರ್ಮೆಯಲ್ಲಿ ನಿರ್ಮಿಸಲಾದ ಗುರ್ಮೆ ಗೋ ವಿಹಾರ ಕೇಂದ್ರ ಲೋಕಾರ್ಪಣೆಗೊಂಡಿತು. ಇದೇ ಸಂದರ್ಭದಲ್ಲಿ ಕೀರ್ತನ, ಸಾಂತ್ವನ, ಯಕ್ಷಗಾನ ಕಾರ್ಯಕ್ರಮ ವೈಭವದಿಂದ ನಡೆಯಿತು. ಕಾರ್ಯಕ್ರಮವನ್ನು ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ಬಳಿಕ ಆಶೀರ್ವಚನ ನೀಡಿದ ಶ್ರೀಗಳು, ಮಾತೃ ಸೇವೆ, ಗೋ ಸೇವೆಯಿಂದ ದೇವರ ಅನುಗ್ರಹ ಪ್ರಾಪ್ತಿಯಾಗುತ್ತದೆ. ಮಾತೃ ಸೇವೆ ಹಾಗೂ ಗೋ ಸೇವೆಯಿಂದ ಏಳಿಗೆ ಸಾಧ್ಯ ಎಂದರು. ಗ್ರಾಮೀಣಾಭಿವೃದ್ಧಿ ಸಚಿವ […]

ವರಂಗ ಬಳಿ ಕಂಟೈನರ್ ಗೆ ಕಾರು ಡಿಕ್ಕಿ; ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರು

ಹೆಬ್ರಿ ತಾಲೂಕಿನ ವರಂಗ ಸಮೀಪ ಇಂದು ಬೆಳಿಗ್ಗೆ ಕಂಟೈನರ್ ಲಾರಿ ಹಾಗೂ ಕ್ರೆಟಾ ಕಾರು ಮಧ್ಯೆ ಅಪಘಾತ ಸಂಭವಿಸಿದೆ.ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.  ತೀರ್ಥಹಳ್ಳಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಂಟೈನರ್ ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ವರಂಗದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕಾರು ಚಾಲಕ ಇದನ್ನು ಲೆಕ್ಕಿಸದೆ ಅಜಾಗರೂಕತೆಯಿಂದ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದವರು […]

ಮುಖ್ಯ ವಾರ್ಡನ್ ಪೌರ ರಕ್ಷಣೆ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯಲ್ಲಿ ಹೊಸದಾಗಿ ಪೌರ ರಕ್ಷಣಾ ದಳವನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಮುಖ್ಯ ವಾರ್ಡನ್ ಪೌರ ರಕ್ಷಣೆ ಗೌರವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಗೃಹ ರಕ್ಷಕ ದಳದ ಮಹಾ ಸಮಾದೇಷ್ಟರಾದ ಆರಕ್ಷಕ ಮಹಾ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಮೀನುಗಾರರಿಗೆ ಸಹಾಯಧನ: ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಡೀಸೆಲ್ ಮಾರಾಟ ತೆರಿಗೆ ಮರುಪಾವತಿ, ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಹಾಗೂ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೋವಿಡ್ ಪರಿಹಾರವನ್ನು ಡಿ.ಬಿ.ಟಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ತಂತ್ರಾಂಶದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಪಾವತಿಸಲು ಕ್ರಮ ವಹಿಸಲಾಗಿರುತ್ತದೆ. ಈ ಮೇಲ್ಕಂಡ ಯೋಜನೆಗಳಲ್ಲಿ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಜೋಡಣೆಯಾಗದೇ, ಸಹಾಯಧನ ಪಡೆಯಲು ಬಾಕಿಯಿರುವ ಫಲಾನುಭವಿಗಳು ವಾರಾಂತ್ಯದೊಳಗೆ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಲು ಶೀಘ್ರವಾಗಿ […]