ಮಣಿಪಾಲ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ‌ ತಗುಲಿ ಸುಟ್ಟು ಕರಕಲಾದ ಖಾಸಗಿ ಬಸ್: ಪ್ರಯಾಣಿಕರು ಅದೃಷ್ಟವಶಾತ್ ಪಾರು

ಉಡುಪಿ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ‌ ತಗುಲಿದ ಪರಿಣಾಮ ದುರ್ಗಾಂಬ ಖಾಸಗಿ ಬಸ್ ಸುಟ್ಟು ಕರಕಲಾದ ಘಟನೆ ಮಣಿಪಾಲ ಟೈಗರ್ ಸರ್ಕಲ್ ನಲ್ಲಿ ಇಂದು ಮಂಜಾನೆ 4.30ಕ್ಕೆ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುರ್ಗಾಂಬ ಬಸ್ ಬಳ್ಳಾರಿಯ ಕೊಟ್ಟೂರಿನಿಂದ ಮಣಿಪಾಲಕ್ಕೆ ಬರುತ್ತಿತ್ತು. ಮಣಿಪಾಲದ ಟೈಗರ್ ಸರ್ಕಲ್ ಬಳಿ ಬರುತ್ತಿದ್ದಂತೆ ಬಸ್ಸಿನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಈ ಘಟನೆ ನಡೆದಿದೆ. ಆರಂಭದಲ್ಲಿ ಚಾಲಕನ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಬಸ್ ನಲ್ಲಿದ್ದ ಪ್ರಯಾಣಿಕರನ್ನು […]