ಫೆ.27ರಂದು ‘ಅರೆಹೊಳೆ ಯಕ್ಷ ಸಂಜೆ’ -2022
ಅರೆಹೊಳೆ ಪ್ರತಿಷ್ಠಾನವು ಫೆಬ್ರವರಿ 27ರ ಭಾನುವಾರ ಸಂಜೆ 2.30ರಂದು ಕೆಂಜುರು ಸಮೀಪದ ಬಲ್ಲೇಬೈಲ್ಲಿನಲ್ಲಿ ಸುಮಕೃಷ್ಣ ಯಕ್ಷಗಾನ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಂದಗೋಕುಲ ಯಕ್ಷಗಾನ ತರಬೇತಿ ಕೇಂದ್ರದ ಅರೆಹೊಳೆ ಯಕ್ಷ ಸಂಜೆ 2022ರನ್ನು ಆಯೋಜಿಸಿದೆ. ಈ ಸಂದರ್ಭದಲ್ಲಿ ಶ್ರೀ ಐರೋಡಿ ಮಂಜುನಾಥ ಕುಲಾಲ್ ಯೆಡ್ತಾಡಿ ಇವರಿಗೆ ಸುಮಕೃಷ್ಣ ಯಕ್ಷಗಾನ ಪ್ರಶಸ್ತಿ ಪ್ರಧಾನಿಸಲಾಗುವುದು. ಈ ಸಂದರ್ಭದಲ್ಲಿ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರಾತ್ಯಕ್ಷಿಕೆ ಹಾಗೂ ಲಂಕಿಣಿ ಮೋಕ್ಷ ಪ್ರಾತ್ಯಕ್ಷಿಕೆಗಳು ಯಕ್ಷಗಾನ ಗುರು ಮಿಥುನ ಹಂದಾಡಿ ಅವರ ನಿರ್ದೇಶನದಲ್ಲಿ […]
ಪ್ರೌಢಶಾಲಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ: ಜಿಲ್ಲಾಧಿಕಾರಿ
ಉಡುಪಿ, ಫೆ.25: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮಾರ್ಚ್ 2 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 12 ರ ಸಂಜೆ 6 ಗಂಟೆಯವರೆಗೆ (ಭಾನುವಾರ ಹೊರತುಪಡಿಸಿ) ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲಿನ 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ […]
ಪೊಲೀಸರು ಒತ್ತಡಕ್ಕೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕು: ನ್ಯಾ.ಸುಬ್ರಮಣ್ಯ
ಉಡುಪಿ, ಫೆ.25: ಪೊಲೀಸರು ಕರ್ತವ್ಯ ನಿರ್ವಹಣೆ ಸಮಯದಲ್ಲಿ ಯಾವುದೇ ಮಾನಸಿಕ ಮತ್ತು ದೈಹಿಕ ಒತ್ತಡಗಳಿಗೆ ಒಳಗಾಗದೆ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜೆ.ಎನ್.ಸುಬ್ರಮಣ್ಯ ಹೇಳಿದರು. ಅವರು ಇಂದು ಉಡುಪಿಯ ಚಂದು ಮೈದಾನದಲ್ಲಿ, ಉಡುಪಿ ಪೊಲೀಸ್ ತರಬೇತಿ ಶಾಲೆಯ 13 ನೇ ತಂಡದ ಸಶಸ್ತ್ರ ಪೊಲೀಸ್ ಕಾನ್ಸ್ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ, ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು. ಪೊಲೀಸರು ಯಾವುದೇ ಒತ್ತಡ, ಪ್ರಲೋಭನೆಗಳಿಗೆ ಒಳಗಾಗದೇ […]
ಬ್ರಹ್ಮಾವರ: “ವಿ ದ ಪೀಪಲ್ ಆಫ್ ಇಂಡಿಯಾ” ನಾಟಕ ಪ್ರದರ್ಶನ
ಬ್ರಹ್ಮಾವರ: ಬೈಕಾಡಿ ಮಂದಾರ (ರಿ.) ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಮತ್ತು ಬ್ರಹ್ಮಾವರ ದಿಮ್ಸಾಲ್ ನಾಟಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರ ಎಸ್. ಎಮ್. ಎಸ್ ಮಕ್ಕಳ ಮಂಟಪದಲ್ಲಿ, ಫೆ.26 ಶನಿವಾರ ಸಂಜೆ 6.15 ಕ್ಕೆ ರಂಗಾಯಣ ಶಿವಮೊಗ್ಗ ಪ್ರಸ್ತುತಪಡಿಸುವ ವಿ ದ ಪೀಪಲ್ ಆಫ್ ಇಂಡಿಯಾ ನಾಟಕ ಪ್ರದರ್ಶನ ಗೊಳ್ಳಲಿದೆ.
ಫೆ.26,27,28: ಜಿಲ್ಲೆಯಲ್ಲಿ ಇಂಧನ ಸಚಿವರ ಪ್ರವಾಸ
ಉಡುಪಿ, ಫೆಬ್ರವರಿ 25: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರು ಫೆಬ್ರವರಿ 26, 27 ಮತ್ತು 28 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.26 ರಂದು ಸಂಜೆ 4 ಗಂಟೆಗೆ ಮುಂಡ್ಕೂರು ಕಜೆ-ಮಹಮ್ಮಾಯಿ ದೇವಸ್ಥಾನದ ಸಭಾಭವನ ಉದ್ಘಾಟನಾ ಕಾರ್ಯಕ್ರಮ, 5.30 ಕ್ಕೆ ಕುಕ್ಕುಂದೂರು ಗಣಿತ ನಗರದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಇದರ ಫೌಂಡರ್ಸ್ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು. ಫೆ.27 ರಂದು ಬೆಳಗ್ಗೆ 6.30 ಕ್ಕೆ ಕಾರ್ಕಳ […]