ಫೆ.27: ವಕ್ವಾಡಿ ಪ್ರವೀಣ್ ಕುಮಾರ ಶೆಟ್ಟಿ ಅವರಿಗೆ ಹುಟ್ಟೂರು ಸನ್ಮಾನ

ಕುಂದಾಪುರ: ವಕ್ವಾಡಿ ಪ್ರವೀಣಕುಮಾರ್ ಶೆಟ್ಟಿ ಅವರಿಗೆ ಹುಟ್ಟೂರು ಸನ್ಮಾನ ಅಭಿನಂದನಾ ಸಮಾರಂಭವು ಫೆ.27 ರವಿವಾರ ಬೆಳಗ್ಗೆ 9ರಿಂದ ರಾತ್ರಿ 10.30ರ ವರೆಗೆ ವಕ್ವಾಡಿ ಮುಖ್ಯರಸ್ತೆ ಫಾರ್ಚೂನ್ ವಿಲೇಜ್ ಹೋಟೆಲ್ ಹತ್ತಿರ ನಡೆಯಲಿದೆ. ಫೆ.27 ಸಂಜೆ 5 ಗಂಟೆಗೆ ಸಮಾರಂಭದ ಆಶೀರ್ವಚನವನ್ನು ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು, ಶ್ರೀ ಸುಬ್ರಹ್ಮಣ್ಯ ಮಠಾಧೀಶರು ಮಾಡಲಿರುವರು. ಅಧ್ಯಕ್ಷತೆಯನ್ನು ವಕ್ವಾಡಿ ಪ್ರವೀಣ್ ಶೆಟ್ಟಿ ಹುಟ್ಟೂರು ಸನ್ಮಾನ ಸಮಿತಿಯ ಅಧ್ಯಕ್ಷರಾದ ಬಸ್ರೂರು ಅಪ್ಪಣ್ಣ ಹೆಗಡೆಯವರು ವಹಿಸಲಿರುವರು. ಕನ್ನಡ ಮತ್ತು ಸಂಸ್ಕೃತಿ ಸಚಿವರಾದ […]

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಮಕ್ಕಳಿಗೆ ಆರ್ಥಿಕ ಸಹಾಯ ಹಸ್ತ ನೀಡುತ್ತಿರುವ ಪ್ರತಿಷ್ಠಾನಗಳಿಗೆ ಸನ್ಮಾನ

ಮಣಿಪಾಲ: ಸರಿಯಾದ ಸಮಯದಲ್ಲಿ ಸರಿಯಾದ ತಂಡದಿಂದ ಸರಿಯಾದ ಚಿಕಿತ್ಸೆಯೊಂದಿಗೆ ನೀಡಿದರೆ ಬಾಲ್ಯದ ಕ್ಯಾನ್ಸರ್ ಕಾಯಿಲೆಯು  ಹೆಚ್ಚು ಗುಣಪಡಿಸಲ್ಪಡುತ್ತವೆ. ಚಿಕಿತ್ಸೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು, ಶ್ರೀ ಅರ್ಜುನ್ ಭಂಡಾರ್ಕರ್ ಸ್ಥಾಪಿಸಿದ ಸೇವ್ ಲೈಫ್ ಚಾರಿಟಬಲ್ ಟ್ರಸ್ಟ್ ಮತ್ತು ಶ್ರೀಮತಿ ಅಮಿತಾ ಪೈ ಸ್ಥಾಪಿಸಿದ ಒನ್ ಗುಡ್ ಸ್ಟೆಪ್ ಫೌಂಡೇಶನ್ ಕಸ್ತೂರ್ಬಾ ಆಸ್ಪತ್ರೆಯ ಮಕ್ಕಳ ರಕ್ತಶಾಸ್ತ್ರ  ಮತ್ತು ಆಂಕೊಲಾಜಿ ವಿಭಾಗಕ್ಕೆ ಬರುವ ಮಕ್ಕಳಿಗೆ ಹಣಕಾಸಿನ ನೆರವು ನೀಡಲು ಪಟ್ಟುಬಿಡದೆ ಕೆಲಸ ಮಾಡುತ್ತಿದೆ. ಅವರ ನಿಸ್ವಾರ್ಥ  ಸೇವೆ ಮತ್ತು ಪ್ರಯತ್ನಗಳನ್ನು ಶ್ಲಾಘಿಸಲು, ಫೆಬ್ರವರಿ […]

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ವತಿಯಿಂದ ನೂತನವಾಗಿ ನಿರ್ಮಿಸಲಾದ ಸಭಾ ಭವನದ ಉದ್ಘಾಟನೆ

ಉಡುಪಿ: ಕರ್ನಾಟಕ ಸರಕಾರದ ಇಂಧನ ಇಲಾಖೆ ಅಧೀನದಲ್ಲಿ ಬರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ (659) ವತಿಯಿಂದ ಉಡುಪಿ ಜಿಲ್ಲೆಯ ಉಡುಪಿ ನಗರದ ಹೃದಯಭಾಗದಲ್ಲಿರುವ ಕುಂಜಿಬೆಟ್ಟುವಿನಲ್ಲಿ ನೂತನವಾಗಿ ನಿರ್ಮಿಸಲಾದ ಕಟ್ಟಡದಲ್ಲಿ ಸಭಾ ಗೃಹ ಹಾಗೂ ಅತಿಥಿ ಗೃಹ ನಿರ್ಮಿಸಲಾಗಿದ್ದು, ಫೆ.28 ರಂದು ಇಂಧನ ಸಚಿವರಾದ ಶ್ರೀ ಸುನಿಲ್ ಕುಮಾರ್ ರವರು ಉದ್ಘಾಟಿಸಲಿದ್ದಾರೆ. ನಂತರದಲ್ಲಿ ಈ ಆವರಣದಲ್ಲಿ ನಿರ್ಮಾಣವಾಗಿರುವ ಸುಸಜ್ಜಿತ ಸಭಾ ಗೃಹವು ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂ ಕಾರ್ಯಕರ್ತರು ಪ್ರತೀಕಾರ ಶುರು ಮಾಡಿದರೆ ನಿಮಗೆ ಉಳಿಗಾಲವಿಲ್ಲ; ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಎಚ್ಚರಿಕೆ

ಮಣಿಪಾಲ: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಯೇ ಕೊನೆಯಾಗಬೇಕು. ಇಲ್ಲದಿದ್ದರೆ, ಹಿಂದೂ ಕಾರ್ಯಕರ್ತರು ಪ್ರತೀಕಾರ ಶುರು ಮಾಡಿದರೆ ನಿಮಗೆ ಈ ದೇಶದಲ್ಲಿ ಉಳಿಯಲು ಕಷ್ಟ ಆಗಬಹುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಸ್ಡಿಪಿಐ, ಪಿಎಫ್ ಐ ಕಾರ್ಯಕರ್ತರಿಗೆ ಪರೋಕ್ಷ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಜನ ವಿರೋಧಿ ನೀತಿ ವಿರೋಧಿಸಿ ಹಾಗೂ ಹರ್ಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಣಿಪಾಲ ಟೈಗರ್ ಸರ್ಕಲ್ ಬಳಿ ಶನಿವಾರ ಆಯೋಜಿಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.ಎಸ್ ಡಿಪಿಐ ತನ್ನ […]

ಪ್ರಧಾನಮಂತ್ರಿ ಶಿಷ್ಯವೇತನ: ಅವಧಿ ವಿಸ್ತರಣೆ

ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪಿ.ಯು.ಸಿ 2 ನೇ ವರ್ಷ ಹಾಗೂ ಡಿಪ್ಲೋಮಾ 3 ನೇ ವರ್ಷದಲ್ಲಿ ಶೇ. 60 ಅಂಕ ಪಡೆದು ಪ್ರಸಕ್ತ ಸಾಲಿನಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು, ಪ್ರಧಾನ ಮಂತ್ರಿ ಶಿಷ್ಯವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.ksb.gov.in ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು […]