ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ: ಅವಧಿ ವಿಸ್ತರಣೆ

ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2022-23 ನೇ ಸಾಲಿನ 6 ನೇ ತರಗತಿ ಪ್ರವೇಶಕ್ಕಾಗಿ, ಪ್ರಸ್ತುತ 5 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರುಗಳಾದ ಜಿಲ್ಲಾ ಸಮನ್ವಯಾಧಿಕಾರಿ ಹಾಗೂ ಉಡುಪಿ ತಾಲೂಕು ಪಟ್ಲಾ ಹೀರೆಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮೊ.ನಂ: 9480586729, ಕುಂದಾಪುರ ತಾಲೂಕು ಯಡ್ಯಾಡಿ- ಮತ್ಯಾಡಿ […]

ವಸತಿ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಮನೆ ನಿರ್ಮಿಸಲು ವಾಜಪೇಯಿ ನಗರ ವಸತಿ ಯೋಜನೆಯಡಿ 76 ಫಲಾನುಭವಿಗಳಿಗೆ 1,20,000 ರೂ. ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯಡಿ 24 ಫಲಾನುಭವಿಗಳಿಗೆ 2 ಲಕ್ಷ ರೂ. ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಸತಿ ಸೌಲಭ್ಯ ಪಡೆಯಲು, ಸ್ವಂತ ನಿವೇಶನ ಹೊಂದಿರುವ ಮಹಿಳೆ, ವಿಧುರ, ಅಂಗವಿಕಲ ಹಾಗೂ ಹಿರಿಯ ನಾಗರೀಕರು ಸೂಕ್ತ ದಾಖಲೆಗಳೊಂದಿಗೆ ಫೆಬ್ರವರಿ 28 ರ ಒಳಗೆ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಿ […]

ಫೆ.27: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಷಬ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆಯು ಫೆಬ್ರವರಿ 27 ರಂದು ಬೆಳಗ್ಗೆ 8 ಗಂಟೆಗೆ ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.