ಐಕಳ ಬಾವ “ಕಾಂತಾಬಾರೆ – ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾಂಶ
ಮಂಗಳೂರು: ಫೆ.26 ರಂದು ನಡೆದ ಇತಿಹಾಸ ಪ್ರಸಿದ್ಧ ಐಕಳ ಬಾವ “ಕಾಂತಾಬಾರೆ – ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 04 ಜೊತೆ ಅಡ್ಡಹಲಗೆ: 09 ಜೊತೆ ಹಗ್ಗ ಹಿರಿಯ: 17 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 18 ಜೊತೆ ನೇಗಿಲು ಕಿರಿಯ: 99 ಜೊತೆ ಒಟ್ಟು ಕೋಣಗಳ ಸಂಖ್ಯೆ: 179 ಜೊತೆ ಕನೆಹಲಗೆ: ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: […]
ನೀರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಅದೃಷ್ಟವಶಾತ್ ಕಾರಿನಲ್ಲಿದ್ದವರು ಅಪಾಯದಿಂದ ಪಾರು
ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಕಾರ್ಕಳ ತಾಲೂಕಿನ ನೀರೆ ಅಂಚೆ ಕಚೇರಿ ಸಮೀಪ ಭಾನುವಾರ ರಾತ್ರಿ 8 ಗಂಟೆಗೆ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕಾರು ಬೈಲೂರಿನಿಂದ ಉಡುಪಿಗೆ ಬರುತ್ತಿದ್ದು, ನೀರೆ ಅಂಚೆ ಕಚೇರಿ ಹತ್ತಿರ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಸಹಿತ ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಘಟನೆಯಲ್ಲಿ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಕಾಪು ಉಚ್ಚಿಲದ ನಿವಾಸಿಗಳೆಂದು ತಿಳಿದುಬಂದಿದೆ.
ಉತ್ತರಪ್ರದೇಶ: ಸರಯೂ ನದಿ ತೀರ ಸ್ವಚ್ಛತಾ ಅಭಿಯಾನದಲ್ಲಿ ಶೋಭಾ ಭಾಗಿ
ಉತ್ತರ ಪ್ರದೇಶ ಚುನಾವಣಾ ಬಿಜೆಪಿ ಸಹ ಉಸ್ತುವಾರಿ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆಯವರು ಭಾನುವಾರ ಅಲ್ಲಿನ ಅಂಬೇಡ್ಕರ್ ನಗರ ಜಿಲ್ಲೆಯ ಸರಯೂ ನದಿ ತೀರದಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.
ವಕ್ವಾಡಿಯಲ್ಲಿ ಪ್ರವೀಣ್ ಕುಮಾರ್ ಶೆಟ್ಟಿ ಪ್ರಾಯೋಜಕತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಪ್ರಾಯೋಜಕತ್ವದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಆರೋಗ್ಯ ತಪಾಸಣೆ ಶಿಬಿರವನ್ನು ವಕ್ವಾಡಿಯ ಫಾರ್ಚೂನ್ ವಿಲೇಜ್ ಹೋಟೆಲ್ ಬಳಿ ಭಾನುವಾರ ಏರ್ಪಡಿಸಲಾಗಿತ್ತು.ಶಿಬಿರವನ್ನು ಉದ್ಘಾಟಿಸಿದ ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮನುಷ್ಯ ಸಂಸಾರಮುಖಿಯಾಗಿರದೆ ಸಮಾಜಮುಖಿಯಾಗಿ ಬದುಕಿದರೆ ಸನ್ಮಾನಗಳು ಹುಡುಕಿ ಬರುತ್ತದೆ. ಕರ್ತವ್ಯವು ಧರ್ಮದ ಕಡೆಗೆ ಇರಬೇಕು. ಈ ನಿಟ್ಟಿನಲ್ಲಿ ಪರಿಶ್ರಮದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘದಿಂದ ಪ್ರವೀಣ್ ಕುಮಾರ್ […]
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರಿಂದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಿಗೆ ಅಭಿನಂದನೆ
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಕಾರ್ಯಕರ್ತರ ಸಮಾಲೋಚನ ಸಭೆಗೆ ಆಗಮಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಆಯ್ಕೆಗೊಂಡ ರಮೇಶ್ ಕಾಂಚನ್ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿ ಶುಭಾಶಯ ಸಲ್ಲಿಸಿದರು. ಬೂತ್ ಮಟ್ಟದಿಂದ ಪಕ್ಷ ಸಂಘಟನೆಯನ್ನು ಮಾಡುವ ನಿಟ್ಟಿನಲ್ಲಿ ಬ್ಲಾಕ್ ಕಾಂಗ್ರೆಸ್‌ನ ಅಡಿಯಲ್ಲಿ ಎಲ್ಲಾ ಕಾರ್ಯಕರ್ತರನ್ನು ಒಗ್ಗುಡಿಸಿ ವಿವಿಧ ಘಟಕಗಳ ಪದಾಧಿಕಾರಿಗಳನ್ನು ನೇಮಕ ಮಾಡುವಂತೆ ಅಧ್ಯಕ್ಷರಿಗೆ ಸಲಹೆ ಸೂಚನೆಗಳನ್ನು ನೀಡಿದರು. ಈ […]