ಕನ್ನಡ ಪುಸ್ತಕ ರಿಯಾಯಿತಿ ಮಾರಾಟ ಮೇಳ: ಅರ್ಜಿ ಆಹ್ವಾನ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು ಮಾರ್ಚ್ 10 ರಿಂದ 15 ರ ವರೆಗೆ ಒಟ್ಟು ಆರು ದಿನಗಳ ಕಾಲ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ “ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ- 2022” ನ್ನು ಆಯೋಜಿಸಿದೆ. ಪುಸ್ತಕ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವ ಜಿಲ್ಲೆಯ ಎಲ್ಲಾ ಕನ್ನಡ ಪುಸ್ತಕ ಪ್ರಕಾಶಕರು ಹಾಗೂ ಮಾರಾಟಗಾರರು ಮಾರ್ಚ್ 8 ರ ಒಳಗೆ ಅರ್ಜಿ ಸಲ್ಲಿಸಿ, ಮಾರಾಟ ಮಳಿಗೆಯನ್ನು ಕಾಯ್ದಿರಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ […]

8ನೇ ತರಗತಿಗೆ ಮಿಲಿಟರಿ ಕಾಲೇಜು ಪ್ರವೇಶ: ಜೂ.4 ರಂದು ಅರ್ಹತಾ ಪರೀಕ್ಷೆ

ಉಡುಪಿ: ಜನವರಿ 2023 ನೇ ಸಾಲಿಗಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8 ತರಗತಿಗೆ ಪ್ರವೇಶ ಬಯಸುವ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪರೀಕ್ಷೆಯನ್ನು ಬೆಂಗಳೂರು ಕೆಂದ್ರದಲ್ಲಿ ಜೂನ್ 4 ರಂದು ನಡೆಸಲಾಗುವುದು. ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ 2023 ಜನವರಿ 1 ಕ್ಕೆ 11.5 ಯಿಂದ 13 ವರ್ಷದೊಳಗಿರುವ ಬಾಲಕ ಹಾಗೂ ಬಾಲಕಿಯರು ಮಾತ್ರ ಪರೀಕ್ಷೆಗೆ ಅರ್ಹರಿರುತ್ತಾರೆ. […]

ಕಾರ್ಕಳದ ಸಂಗಮವಿದು, ಸಂಸ್ಕೃತಿಯ ಸಂಭ್ರಮವಿದು: ಕಾರ್ಕಳ ಉತ್ಸವಕ್ಕೆ ಇನ್ನು ಕೆಲವೇ ದಿನ

ಕಾರ್ಕಳ: ಕಾರ್ಕಳದ ಸಂಸ್ಕೃತಿ, ಕಲೆ, ಪ್ರವಾಸೋದ್ಯಮವನ್ನು ಪರಿಚಯಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಕಳ ಉತ್ಸವ 2022ಕ್ಕೆ ಈಗ ದಿನಗಣನೆ ಆರಂಭವಾಗಿದೆ. ಮಾ.10 ರಿಂದ 20ರವರೆಗೆ ಕಾರ್ಕಳ ಉತ್ಸವವನ್ನು ಆಯೋಜಿಸಲಾಗಿದೆ. ಕರೋನ ಮೂರನೇ ಅಲೆಯ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಈ ಕಾರ್ಕಳ ಉತ್ಸವದ ಸಿದ್ಧತೆಗೀಗ ಮತ್ತೆ ಜೀವ ಬಂದಿದೆ. ಕಾರ್ಕಳ ಶಾಸಕ, ರಾಜ್ಯದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕಾರ್ಕಳ ಉತ್ಸವಕ್ಕೆ  ಮಾ.10 ರಂದು ಇಲ್ಲಿನ ಕೋಟಿ ಚೆನ್ನಯ್ಯ ಥೀಂ ಪಾರ್ಕ್‌ನಲ್ಲಿ ಯಕ್ಷ […]