ಕಾರ್ಕಳ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಕಾರ್ಕಳ: ಇಲ್ಲಿನ ಕಾಲೇಜಿನ ಅಂತಿಮ ಬಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಶ್ರೀರಕ್ಷ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವೈಯಕ್ತಿಕ ಕಾರಣಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

ಅಪರ ಸರ್ಕಾರಿ ವಕೀಲರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಮಾ.2: ಕುಂದಾಪುರ ತಾಲೂಕಿಗೆ ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಏಳು ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ: ಮಟ್ಟಿ ಲಕ್ಷ್ಮೀನಾರಾಯಣ ರಾವ್ ಗೆ ಸೇವಾ ಭೂಷಣ ಪ್ರಶಸ್ತಿ ಪ್ರದಾನ

ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಎಸ್. ಗೋಪಾಲಕೃಷ್ಣರ ನೆನಪಿನಲ್ಲಿ ನೀಡುವ ‘ಸೇವಾ ಭೂಷಣ ಪ್ರಶಸ್ತಿ’ ಅನ್ನು ನಿವೃತ್ತ ಬ್ಯಾಂಕ್ ಅಧಿಕಾರಿ ಮಟ್ಟಿ ಲಕ್ಷ್ಮೀನಾರಾಯಣ ರಾವ್ ಅವರಿಗೆ ಕಾಣಿಯೂರು ಮಠಾಧೀಶ ವಿದ್ಯಾವಲ್ಲಭತೀರ್ಥ ಶ್ರೀಪಾದರು ನಗರದ ಪೇಜಾವರ ಮಠದ ರಾಮವಿಠಲ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿದರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಅತಿಥಿಯಾಗಿ ಭಾಗವಹಿಸಿದ್ದರು. ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಉಪಾಧ್ಯಕ್ಷರಾದ ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ, ಎಸ್. ವಿ. ಭಟ್ ಉಪಸ್ಥಿತರಿದ್ದರು. […]

ಕಾಪು: ಸಾಲ ಕೊಡಿಸುವುದಾಗಿ ಹೇಳಿ ಮಹಿಳೆಗೆ ವಂಚನೆ; ದೂರು ದಾಖಲು

ಕಾಪು: ಪರಿಚಯಸ್ಥನಿಂದಲೇ ಮಹಿಳೆಯೊಬ್ಬರು ವಂಚನೆಗೊಳಗಾದ ಘಟನೆ ಕಾಪು ತಾಲೂಕಿನ ಉಚ್ಚಿಲ ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಉಚ್ಚಿಲ ನಿವಾಸಿ ಮುಮ್ತಾಜ್‌ ವಂಚನೆಗೆ ಒಳಗಾದ ಮಹಿಳೆ. ಇವರಿಗೆ ಪರಿಚಯದವನಾದ ಆರೋಪಿ ಅನ್ವರ್‌ ಸಾಲ ಕೊಡಿಸುವುದಾಗಿ ಭರವಸೆ ನೀಡಿ, ಉಡುಪಿ ಉಜ್ವನ್‌ ಬ್ಯಾಂಕ್‌ನಲ್ಲಿ ಮುಮ್ತಾಜ್‌ ಅವರ ಬ್ಯಾಂಕ್‌ ಖಾತೆಯನ್ನು ತೆರೆಸಿದ್ದನು. ಮೊದಲೇ ತಿಳಿಸಿದ್ದಂತೆ 15,000 ರೂ. ಶುಲ್ಕ, ಸಾಲದ ಹಣ ಹಾಗೂ ದಾಖಲೆಗಳ ತಯಾರಿಕೆ ವೆಚ್ಚವನ್ನು ಮುಮ್ತಾಜ್ ಆತನಿಗೆ ನೀಡಿದ್ದರು. ಎಲ್ಲ ಹಣವನ್ನು ನೀಡಿ ಒಂದು ವಾರ ಆದರೂ ಮುಮ್ತಾಜ್‌ […]

ಬ್ರಹ್ಮಾವರ: ಬಾವಿಗೆ ಹಾರಿ ವೃದ್ಧೆ ಆತ್ಮಹತ್ಯೆ

ಬ್ರಹ್ಮಾವರ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ಎಂಬಲ್ಲಿ ನಡೆದಿದೆ. ಹೊನ್ನಾಳ ನಿವಾಸಿ 70 ವರ್ಷದ ಅಕ್ಕಣಿ ಪೂಜಾರ್ತಿ ಆತ್ಮಹತ್ಯೆ ಮಾಡಿಕೊಂಡ ವೃದ್ಧೆ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ. 28ರಂದು ಸಂಜೆ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.