ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ

ಉಡುಪಿ, ಮಾ.03: ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ವಿಳಂಬವಿಲ್ಲದೇ ಜನರಿಗೆ ತಲುಪಿಸುವ ಕಾರ್ಯವನ್ನು ಕ್ರಿಯಾಶೀಲರಾಗಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಬಿ.ಬಿ.ಎಂ.ಪಿ ವಿಶೇಷ ಆಯುಕ್ತರಾದ ಮನೋಜ್ ಜೈನ್ ಅವರು ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಜನರ ಆಶೋತ್ತರಗಳನ್ನು ನೆರವೇರಿಸಲು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಅನುಷ್ಠಾನಗೊಳಿಸುವ […]

ಕನ್ನರ್ಪಾಡಿ: ವ್ಯಕ್ತಿ ನೇಣಿಗೆ ಶರಣು

ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ತಾಲೂಕಿನ ಕಿನ್ನಿಮೂಲ್ಕಿ ಕನ್ನರ್ಪಾಡಿ ದೇವಸ್ಥಾನದ ಬಳಿ ಇಂದು ನಡೆದಿದೆ. ಕನ್ನರ್ಪಾಡಿ ದೇವಸ್ಥಾನದ ಬಳಿಯ ನಿವಾಸಿ 45 ವರ್ಷದ ಮಹೇಶ್ ಗೌಡ ಆತ್ಮಹತ್ಯೆ ಮಾಡಿಕೊಂಡು ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ವಿಜ್ಞಾನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಉಡುಪಿ, ಮಾ.03: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್.ಟಿ) ಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಆಯೋಜಿಸಲಾಗಿದ್ದ “ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನದ ಉಪಯೋಗ” ಕುರಿತ ಆನ್‌ಲೈನ್ ವೈಜ್ಞಾನಿಕ ಸ್ಪರ್ಧೆಗಳಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಕೋಟತಟ್ಟು ಶಿವರಾಂ ಕಾರಂತ ಥೀಮ್ ಪಾರ್ಕ್ನಲ್ಲಿ ಇತ್ತೀಚೆಗೆ ಜರುಗಿದ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಶ್ರೀನಿವಾಸ ಪೂಜಾರಿ ಅವರು ಬಹುಮಾನ ವಿತರಿಸಿ ಶುಭ ಹಾರೈಸಿದರು.  […]

ಸಾವಯವ ಸಿರಿ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಹೊಸ ಸಾವಯುವ ಕೃಷಿ ಉತ್ತೇಜನಗೊಳಿಸಲು, ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ ಮುಕ್ತ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ದೊರಕಿಸಲು ಸಾವಯವ ಸಿರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿರುತ್ತದೆ. ಸಾವಯವ ಕೃಷಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಹಾಗೂ 10 ವರ್ಷಗಳ ಅನುಭವವುಳ್ಳ ಟ್ರಸ್ಟ್ ಹಾಗೂ ಸೊಸೈಟಿ ಕಾಯಿದೆಯಡಿ ನೋಂದಾಯಿತ ಸಾವಯವ ಕೃಷಿಕರ ಸಂಘ, ಸಾವಯವ ಒಕ್ಕೂಟ ಅಥವಾ ಸಾವಯವ ಗುಂಪುಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 17 ಕೊನೆಯ […]

ಕಾರ್ಕಳ ಉತ್ಸವಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿದ ಸಚಿವ ಸುನಿಲ್ ಕುಮಾರ್

ಬೆಂಗಳೂರು: ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಚರ್ಚೆ ನಡೆಸಿದ್ದಾರೆ. ಮಾರ್ಚ್ 10ರಿಂದ 20ರ ವರೆಗೆ ನಡೆಯಲಿರುವ ಕಾರ್ಕಳ ಉತ್ಸವಕ್ಕೆ ರಾಜ್ಯಪಾಲರನ್ನು ಆಹ್ವಾನಿಸಿರುವ ಅವರು ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸುವುದರ ಜತೆಗೆ ಉತ್ಸವದ ವೈಶಿಷ್ಟ್ಯಗಳನ್ನು ವಿವರಿಸಿದ್ದಾರೆ. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಯೋಗದೊಂದಿಗೆ ಮಾರ್ಚ್ 10ರಿಂದ 20ರ ವರೆಗೆ ಕಾರ್ಕಳ ಉತ್ಸವ ಆಯೋಜಿಸಲಾಗಿದೆ. ತುಳು ನಾಡಿನ ಸಾಂಸ್ಕ್ರತಿಕ ಬದುಕಿನ ಅನಾವರಣದ ಜತೆಗೆ […]