ಉಡುಪಿ: ಮಾ.6 ರಂದು ಉಡುಪಿ ಜಿಲ್ಲಾ ಕೃಷಿಕ ಸಂಘ ರೈತ ಸಮಾವೇಶ- 2022
ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘದ ರಜತ ಸಂಭ್ರಮದ ಜಿಲ್ಲಾ ರೈತ ಸಮಾವೇಶ – 2022 ಮಾ.6 ರಂದು ಉಡುಪಿ ಕುಂಜಿಬೆಟ್ಟು ಶ್ರೀ ಶಾರದಾ ಮಂಟಪ ಆವರಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು ಅಂದು ಬೆಳಿಗ್ಗೆ 10.15ಕ್ಕೆ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಶಾಸಕ ರಘುಪತಿ ಭಟ್, […]
ಮಾ.7 ರಂದು ಶಾಂತಿ ನಿಕೇತನ ಯುವ ವೃಂದಕ್ಕೆ ಪ್ರಶಸ್ತಿ ಪ್ರಧಾನ
ಉಡುಪಿ, ಮಾ.5: ಕೇಂದ್ರ ಸರ್ಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ನೀಡುವ ರಾಜ್ಯದ ಅತ್ಯುತ್ತಮ ಯುವಕ ಮಂಡಳ ಪ್ರಶಸ್ತಿಗೆ ಹೆಬ್ರಿ ತಾಲೂಕಿನ ಕುಚ್ಚೂರು ಕುಡಿಬೈಲ್ ಶಾಂತಿನಿಕೇತನ ಯುವ ವೃಂದವು ಅಯ್ಕೆಯಾಗಿದ್ದು, ಇದರ ಪ್ರಶಸ್ತಿ ಪ್ರಧಾನ ಸಮಾರಂಭವು ಮಾರ್ಚ್ 7 ರಂದು ಬೆಳಗ್ಗೆ 9.30 ಕ್ಕೆ ನಗರದ ಪಿ.ಪಿ.ಸಿ ಕಾಲೇಜಿನಲ್ಲಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಕ್ಷಗಾನ ಕಲೆಯನ್ನು ಶ್ರೀಮಂತಗೊಳಿಸಿ: ಗೋಪಾಲ ಗಾಣಿಗ
ಉಡುಪಿ, ಮಾ.5: ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸುವವರು ಸತತ ಅಧ್ಯಯನಶೀಲರಾಗಿರಬೇಕು ಮತ್ತು ಕಲೆಯನ್ನು ತಪಸ್ಸಿನಂತೆ ಆಚರಿಸುತ್ತ ಶ್ರೀಮಂತಗೊಳಿಸಿಕೊಳ್ಳಬೇಕು ಎಂದು ಹಿರಿಯ ರಂಗಗುರು ಹಾಗೂ ಭಾಗವತರಾದ ಹೆರಂಜಾಲು ಗೋಪಾಲ ಗಾಣಿಗ ಹೇಳಿದರು. ಅವರು ಶುಕ್ರವಾರ ಸಾಲಿಗ್ರಾಮದ ಗುಂಡ್ಮಿ ಸದಾನಂದ ರಂಗಮಂಟಪದಲ್ಲಿ, ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ತಂಜಾವೂರು ಮತ್ತು ಸಮಸ್ತರು ರಂಗ ಸಂಶೋಧನಾ ಕೆಂದ್ರ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 3 ದಿನಗಳ ಯಕ್ಷೋತ್ಸವವನ್ನು ಚಂಡೆ ನುಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಯಕ್ಷೋತ್ಸವಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ […]
ಭೂಮಿ ಯೋಜನೆ: ರಾಜ್ಯದಲ್ಲಿಯೇ ಉಡುಪಿ ಜಿಲ್ಲೆ ಪ್ರಥಮ
ಉಡುಪಿ: ಸರ್ಕಾರದ ಭೂಮಿ ಯೋಜನೆಯಡಿ ಫೆಬ್ರವರಿ- 2022 ರ ಮಾಹೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಭೂಮಿ ಸಂಬಂಧಿತ ಅರ್ಜಿಗಳ ಪಹಣಿ ಕಾಲಂ 3 & 9, ವಿವಾದಾಸ್ಪದ/ ವಿವಾದಾಸ್ಪದವಲ್ಲದ ಮ್ಯುಟೇಷನ್ ಪ್ರಕ್ರಿಯೆಗಳ ವಿಲೇವಾರಿ, ಪೈಕಿ ಪಹಣಿ ತಿದ್ದುಪಡಿ, ಭೂಪರಿವರ್ತನೆ, ಕಂದಾಯ ನ್ಯಾಯಾಲಯದ ಕೋರ್ಟ್ ಪ್ರಕರಣ ಇತ್ಯಾದಿಗಳನ್ನು ನಿಗಧಿತ ಅವಧಿಯೊಳಗೆ ಶೀಘ್ರ ವಿಲೇವಾರಿ ಮಾಡಿ 2.19 ವಿಲೇವಾರಿ ಸೂಚ್ಯಂಕವನ್ನು ಸಾಧಿಸಿ ಸತತವಾಗಿ ಏಪ್ರಿಲ್- 2020 ರಿಂದ ಫೆಬ್ರವರಿ- 2022 ಮಾಹೆಯವರೆಗೆ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತದೆ. ಜಿಲ್ಲೆಯ […]
ಮಾ.7-13ರ ವರೆಗೆ ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸಪ್ತಾಹ
ಉಡುಪಿ: ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸುವ ಸಲುವಾಗಿ ಮಾರ್ಚ್ 7 ರಿಂದ 13 ರ ವರೆಗೆ ಪಿಂಚಣಿ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ನೋಂದಣಿ ಶಿಬಿರ ಆಯೋಜಿಸಲಾಗಿರುತ್ತದೆ. ಮಾ.7 ರಂದು ಬೆಳಗ್ಗೆ 11 ಗಂಟೆಗೆ ನಗರದ ಒಳಕಾಡು ವ್ಯವಹಾರ ಕಾಂಪ್ಲೆಕ್ಸ್ ಬೀಡಿನಗುಡ್ಡೆ ಇಲ್ಲಿ ಪಿಂಚಣಿ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಹಾಗೂ ನೋಂದಣಿ ಶಿಬಿರ ನಡೆಯಲಿದೆ. ಮಾ.8 ರಂದು ಬೆಳಗ್ಗೆ 8 ಗಂಟೆಗೆ ನಗರದ ಕೆ.ಎಸ್.ಆರ್.ಟಿ.ಸಿ ನರ್ಮ್ ಬಸ್ […]