ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮಾ.7 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 12 ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ […]
ಮೀನುಗಾರಿಕೆ ಯೋಜನೆಗಳ ಶೀಘ್ರ ಅನುಷ್ಠಾನದ ಬಗ್ಗೆ ಕೇಂದ್ರ ಮೀನುಗಾರಿಕೆ ಸಚಿವ ಪರ್ಶೋತ್ತಮ್ ರೂಪಾಲ ರವರಿಗೆ ಮನವಿ: ಯಶ್ ಪಾಲ್ ಸುವರ್ಣ
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಆತ್ಮ ನಿರ್ಭರ ಭಾರತ ಪ್ಯಾಕೇಜ್ ಮೂಲಕ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಗಾರಿಕೆ ಅಭಿವೃದ್ಧಿಗೆ ಮೀಸಲಿಟ್ಟ 20,000 ಕೋಟಿ ಅನುದಾನದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಯೋಜನೆಯನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಕೇಂದ್ರ ಮೀನುಗಾರಿಕೆ ಇಲಾಖೆಯ ವತಿಯಿಂದ ದೇಶದ ಕರಾವಳಿ ರಾಜ್ಯಗಳ ಬಂದರುಗಳಿಗೆ ಭೇಟಿ ನೀಡಿ, ಮೀನುಗಾರರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಗುಜರಾತ್ ಕಛ್ ಜಿಲ್ಲೆಯ ಮಾಂಡವಿ ಬಂದರಿನಲ್ಲಿ ಆಯೋಜಿಸಿದ್ದ ಸಾಗರ ಪರಿಕ್ರಮ ಜಲ ಯಾತ್ರೆಯ ಉದ್ಘಾಟನಾ […]
ಉಡುಪಿ: ಮಾ.8ಕ್ಕೆ ಬಿಜೆಪಿ ಮಹಿಳಾ ಮೋರ್ಚಾದಿಂದ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ
ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ, ಜಿಲ್ಲಾ ಮಹಿಳಾ ಮೋರ್ಚಾ ಇವರ ನೇತೃತ್ವದಲ್ಲಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಇದರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನುರಿತ ಸ್ತ್ರೀ ರೋಗ ತಜ್ಞ ವೈದ್ಯರಿಂದ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರವು ಮಾ.8ರಂದು ಮಂಗಳವಾರ ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00 ರ ವರೆಗೆ ಕಡಿಯಾಳಿ ಉಡುಪಿ ಜಿಲ್ಲಾ ಬಿ.ಜೆ.ಪಿ ಕಚೇರಿಯಲ್ಲಿ ನಡೆಯಲಿದೆ. ಸಾರ್ವಜನಿಕರ ಬಂಧುಗಳು, ಪಕ್ಷದ ಪ್ರಮುಖರು, ವಿವಿಧ ಸ್ತರದ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು […]
ಹಿರಿಯಡ್ಕ: ನಾಳೆ ತಾಲೂಕು ಮಟ್ಟದ “ಭಜನಾಮೃತ – 2022” ಕಾರ್ಯಕ್ರಮ
ಹಿರಿಯಡ್ಕ: ಹಿರಿಯಡಕ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ, ಉಡುಪಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಹಾಗೂ ಉಡುಪಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇವರು ಜಂಟಿಯಾಗಿ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಹಿರಿಯಡಕ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ ವಠಾರದ ಶ್ರೀಮತಿ ಪದ್ಮಾವತಿ ಪಿ. ಶೆಟ್ಟಿ ಗುಮ್ಮೆ ವೇದಿಕೆಯಲ್ಲಿ ತಾಲೂಕು ಮಟ್ಟದ “ಭಜನಾಮೃತ – 2022” ಕಾರ್ಯಕ್ರಮ ಮಾರ್ಚ್ 6ರಂದು […]
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಿಂದ ಮಾಜಿ ಯೋಧರ ವಿವರ ಸಲ್ಲಿಸಲು ಸೂಚನೆ
ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 1971 ರ ಯುದ್ಧದ ಅವಧಿಯಲ್ಲಿ ಸೇವೆ ಸಲ್ಲಿಸಿದ ಮಾಜಿ ಯೋಧರಿಗೆ ಅಭಿನಂದನೆ ಸಲ್ಲಿಸಲು, ಮಾಜಿ ಯೋಧರ ನಂ. ರ‍್ಯಾಂಕ್ ಮತ್ತು ಹೆಸರು, ರೆಜಿಮೆಂಟ್ / ಕೋರ್ಪ್ಸ, ಪೂರ್ವಿ / ಪಶ್ಚಿಮಿ ಸ್ಟಾರ್ ಪಡೆದ ಸ್ವೀಕೃತಿ, 1971 ರಲ್ಲಿ ಸೇವೆ ಸಲ್ಲಿಸಿದ ವಿವರ ಹಾಗೂ ಪ್ರಸ್ತುತ ವಿಳಾಸ ಮತ್ತು ದೂರವಾಣಿ ಸಂಖ್ಯೆಯ ವಿವರಗಳನ್ನು ಮಾರ್ಚ್ 7 ರ ಒಳಗೆ ಇ-ಮೇಲ್ [email protected] ಅಥವಾ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ […]