ಬಾಲ್ಯ ವಿವಾಹ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ, ಮಾ.6: ಬಾಲ್ಯ ವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಪಿಡುಗನ್ನು ಸಮಾಜದಿಂದ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ಪ್ರತಿಯೊಬ್ಬರೂ ತಮ್ಮ ಸಂಪೂರ್ಣ ಸಹಕಾರವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ […]

ಉಡುಪಿ ಜಿಲ್ಲಾ ಕೃಷಿಕ ಸಂಘದ ರಜತ ಸಂಭ್ರಮದ ರೈತ ಸಮಾವೇಶ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ಕೃಷಿಕ ಸಂಘದ ರಜತ ಸಂಭ್ರಮದ ಜಿಲ್ಲಾ ರೈತ ಸಮಾವೇಶವು ಉಡುಪಿ ಕುಂಜಿಬೆಟ್ಟು ಶ್ರೀ ಶಾರದಾ ಮಂಟಪ ಆವರಣದಲ್ಲಿ ಭಾನುವಾರ ಅದ್ಧೂರಿಯಾಗಿ ನಡೆಯಿತು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಸಮಾವೇಶವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಾರುಕಟ್ಟೆ, ರಸ್ತೆ ಹಾಗೂ ನೀರು ರೈತರಿಗೆ ಅತೀ ಅವಶ್ಯಕ. ಇವು ಮೂರು ಸಮರ್ಪಕವಾಗಿದ್ದರೆ, ಕೃಷಿಯಲ್ಲಿ ಹೆಚ್ಚು ಲಾಭಗಳಿಸಬಹುದು ಎಂದರು. ಬೆಳೆಗಳ ಇಳಿಯುವರಿ ಬರುವ ಹೊತ್ತಿನಲ್ಲಿ ಸರ್ಕಾರ ಬೆಂಬಲ ಬೆಲೆ ಘೋಷಣೆ […]

ಮಹಿಮೆಯೋ! ಪವಾಡವೋ! ಶ್ರೀ ಲಕ್ಷ್ಮೀಸಮುದ್ರತೀರ್ಥರ ಕಾಲಾವಧಿಯ ಘಟನೆ..

ಬರಹ: ಪಿ.ಲಾತವ್ಯ ಆಚಾರ್ಯ ಉಡುಪಿ. 1914-16 ರ ಸಂದರ್ಭದಲ್ಲಿ ನಡೆದ ಅಪೂರ್ವ ಘಟನೆ. ಶ್ರೀ ಶಿರೂರು ಮಠದ 27 ನೇ ಯತಿಗಳಾದ ಶ್ರೀಲಕ್ಷ್ಮೀಸಮುದ್ರತೀರ್ಥರ ಪರ್ಯಾಯದ ಸಂದರ್ಭ. ಜಗತ್ತು ಮೊದಲನೇ ಮಹಾಯುದ್ಧದ ಭೀತಿಯಲ್ಲಿ ತಲ್ಲಣಿಸಿತ್ತು. ಜೊತೆಗೆ ಭಾರತ ದೇಶದಲ್ಲಿ ಸ್ವಾತಂತ್ರ್ಯಸಮರದ ಕಾವು ದಿನೇ ದಿನೇ ಉಲ್ಬಣಿಸುತ್ತಿತ್ತು. ಸಾಲದ್ದಕ್ಕೆ ಅನಿರೀಕ್ಷಿತವಾಗಿ ಹುಟ್ಟಿಕೊಂಡ ಭೀಕರ ಬರಗಾಲಕ್ಕೆ ಭಾರತೀಯರು ತರಗುಟ್ಟಿ ಹೋಗಿದ್ದರು. ಆಗಿನ ಮೈಸೂರು ಈಗಿನ ಕರ್ನಾಟಕ ರಾಜ್ಯದ ಬಹುತೇಕ ಪ್ರದೇಶಗಳಲ್ಲಿದ್ದ ಕೆರೆ, ಬಾವಿ , ನದಿಗಳು ಮಳೆನೀರ ಹನಿ ಕಾಣದೆ ಒಣಗಿ […]

ಭೂ ಒಡೆತನ ಯೋಜನೆಯಡಿ ಜಮೀನು ಖರೀದಿ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ಅಧೀನಕ್ಕೊಳಪಟ್ಟಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಜಿಲ್ಲೆಯಲ್ಲಿ ಭೂ ಒಡೆತನ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು, ಈ ಯೋಜನೆಯಡಿ ಪರಿಶಿಷ್ಟ ಪಂಗಡದ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಘಟಕ ವೆಚ್ಚ 15 ಲಕ್ಷ ರೂ. ಗಳಲ್ಲಿ ಲಭ್ಯವಾಗುವಷ್ಟು ಖುಷ್ಕಿ ಅಥವಾ ತರಿ ಅಥವಾ ಭಾಗಾಯ್ತು ಜಮೀನನ್ನು ಖರೀದಿಸಿಕೊಡಲಾಗುವುದು. ಖರೀದಿಸಲು ಉದ್ದೇಶಿಸಿರುವ ಜಮೀನು ಕೃಷಿಗೆ ಯೋಗ್ಯವಾಗಿರಬೇಕು. ಹಾಲಿ ವ್ಯವಸಾಯಕ್ಕೆ ಒಳಪಟ್ಟಿರುವ ಜಮೀನಾಗಿರಬೇಕು. ಪಿ.ಟಿ.ಸಿ.ಎಲ್. ಕಾಯ್ದೆ, ಭೂ ಸುಧಾರಣೆ ಕಾಯ್ದೆ, […]