ಮಣಿಪಾಲ: ಸ್ಕೂಟರ್ ಗೆ ಹಾಲಿನ ವಾಹನ ಡಿಕ್ಕಿ: ಪವಾಡ ಸದೃಶವಾಗಿ ಪಾರಾದ ಮಹಿಳೆ
ಉಡುಪಿ: ರಸ್ತೆ ಕ್ರಾಸ್ ಮಾಡುತ್ತಿದ್ದ ಸ್ಕೂಟರ್ ಗೆ ಹಾಲಿನ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಗಾಯಗೊಂಡ ಘಟನೆ ಮಣಿಪಾಲ ಪೆರಂಪಳ್ಳಿ ಸಾಯಿರಾಧಾ ಗ್ರೀನ್ ವ್ಯಾಲ್ಯೂ ಮುಂಭಾಗದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸ್ಕೂಟರ್ ಸವಾರೆ ಸಾಯಿರಾಧಾ ಗ್ರೀನ್ ವ್ಯಾಲ್ಯೂ ನಿವಾಸಿ ಎನ್ನಲಾಗಿದೆ. ಇವರು ಸ್ಕೂಟರ್ ನಲ್ಲಿ ಗ್ರೀನ್ ವ್ಯಾಲ್ಯೂನಿಂದ ಪೆರಂಪಳ್ಳಿ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದರು. ಈ ವೇಳೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದ ಖಾಸಗಿ ಬಸ್ ನ ಹಿಂಬದಿಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಗಮನಿಸದೆ ಸ್ಕೂಟರ್ […]
ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆ ಪಾತ್ರ ಮುಖ್ಯ: ನ್ಯಾ. ಶರ್ಮಿಳಾ
ಉಡುಪಿ, ಮಾ.8: ಮಹಿಳೆ ಸಮಾಜದ ಶಕ್ತಿ ಹಾಗೂ ಕುಟುಂಬದ ಕಣ್ಣು. ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸುತ್ತಿದ್ದು, ಇಂದು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಸಾಧನೆಯ ಛಾಪು ಮೂಡಿಸಿದ್ದಾಳೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು. ಅವರು ಇಂದು ನಗರದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ, […]
ಮಾ.9: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ
ಉಡುಪಿ, ಮಾ.8: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಅವರು ಮಾರ್ಚ್ 9 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.30 ಕ್ಕೆ ನಿಟ್ಟೆ ಪದವು ಗೃಹ ಕಚೇರಿಯಲ್ಲಿ ಯುವಮೋರ್ಚಾ ತಂಡದೊಂದಿಗೆ ಹಾಗೂ 9 ಗಂಟೆಗೆ ಕಾರ್ಕಳ ವಿಕಾಸ ಕಚೇರಿಯಲ್ಲಿ ಎಸ್.ಸಿ.ಎಸ್.ಟಿ ಮೋರ್ಚಾದೊಂದಿಗೆ ಕಾರ್ಕಳ ಉತ್ಸವ ಕುರಿತ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಗಂಟೆ 11ಕ್ಕೆ ಹೆಬ್ರಿ ಚೈತನ್ಯ ಸಭಾಭವನದಲ್ಲಿ ಹೆಬ್ರಿ ಉತ್ಸವ ಸ್ವಚ್ಛತೆ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ […]
ಚಿಪ್ಸಿ ಐಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ”
ಉಡುಪಿ ಚಿಪ್ಸಿ ಐಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಂಗಳವಾರ ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಗುಲಾಬಿ, ಚಾಕೊಲೇಟ್ ಮತ್ತು ಉಡುಗೊರೆಗಳನ್ನು ವಿತರಿಸಲಾಯಿತು. ಸಂಸ್ಥೆ ಆರಂಭವಾಗಿನಿಂದ ಮಹಿಳೆಯರು ಹಾಗೂ ಪುರುಷರ ಮಧ್ಯೆ ಸಮಾನತೆ ಕಾಯ್ದುಕೊಳ್ಳುವ ಸಂಸ್ಥೆ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ವೈವಿಧ್ಯತೆ ಮತ್ತು ಸೇರ್ಪಡೆ (D&I) ನೀತಿಗಳು, ಕಾರ್ಯಕ್ರಮಗಳು ಅಥವಾ ಹೆಡ್‌ಕೌಂಟ್‌ಗಳಿಗಿಂತ ಹೆಚ್ಚಿನದಾಗಿದೆ ಮತ್ತು Chipsy IT Services Pvt Ltd 10 ವರ್ಷಗಳ […]
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳಾ ಆರೋಗ್ಯ ತಪಾಸಣಾ ಶಿಬಿರ, ಸಾಧಕಿಯರಿಗೆ ಸನ್ಮಾನ
ಉಡುಪಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಸಹಯೋಗದೊಂದಿಗೆ ನುರಿತ ಸ್ತ್ರೀ ರೋಗ ತಜ್ಞ ವೈದ್ಯರಿಂದ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರವು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಾ.8 ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ನವಮಾಸ ವುಮನ್ಸ್ ಸ್ಪೆಷಾಲಿಟಿ ಕ್ಲಿನಿಕ್ ಕೋಟೇಶ್ವರ ಇದರ ವೈದ್ಯಾಧಿಕಾರಿ ಹಾಗೂ ಸ್ತ್ರೀರೋಗ ತಜ್ಞೆ ಡಾ| ಪ್ರಿಯಾಂಕ ಜೋಗಿ, ಸುನಾಗ್ ಹಾಸ್ಪಿಟಲ್ ಉಡುಪಿ […]