ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ದೇಶವಾಸಿಗಳ ನಿರೀಕ್ಷೆಯಂತೆಯೇ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಿದೆ. ಈ ಚುನಾವಣಾ ಫಲಿತಾಂಶವು ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎನಿಸಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಾ.10 ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಪಂಚರಾಜ್ಯ ಚುನಾವಣಾ ಗೆಲುವಿನ ಸಂಭ್ರಮಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಚುನಾವಣೆಯಲ್ಲಿ ಜನತೆ ವಿರೋಧ ಪಕ್ಷಗಳ ಜಾತಿ ರಾಜಕಾರಣ ಮತ್ತು ಕುಟುಂಬ ರಾಜಕಾರಣವನ್ನು […]

ಉಡುಪಿ ಜಿಲ್ಲೆಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಮನವಿ

ಉಡುಪಿ: ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಉಡುಪಿ ಜಿಲ್ಲೆಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಮಾನ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಮಾ.9 ರಂದು ಬಿಜೆಪಿ ಕರ್ನಾಟಕ ಕಛೇರಿಯಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಕಾಶನ ಪ್ರಕೋಷ್ಠದ ಸಹ ಸಂಚಾಲಕ ಅಜಿತ್ ಶೆಟ್ಟಿ ಹೆರಂಜೆ ಮತ್ತು ಉಡುಪಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಗಿರೀಶ್ ಎಮ್. ಅಂಚನ್ ಉಪಸ್ಥಿತರಿದ್ದರು.

ಕಾರ್ಕಳ ಉತ್ಸವ: ಯಕ್ಷ ರಂಗಾಯಣಕ್ಕೆ ಮೂರು ಎಕರೆ ಜಾಗ, ಒಂದು ಕೋಟಿ ಅನುದಾನ: ಸಚಿವ ವಿ. ಸುನಿಲ್ ಕುಮಾರ್

ಕಾರ್ಕಳ: ಯಕ್ಷ ರಂಗಾಯಣಕ್ಕೆ ಮೂಲಕ ರಂಗಕಲೆ, ಯಕ್ಷಗಾನ ಚಟುವಟಿಕೆಗಳಿಗೆ ಪ್ರಯೋಗ ಭೂಮಿಕೆಯಾಗಲಿದೆ ಎಂದು ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳದಲ್ಲಿ ಕೋಟಿ‌- ಚೆನ್ನಯ್ಯ ಥೀಂ ಪಾರ್ಕ್ ನಲ್ಲಿ ರಾಜ್ಯದ ಯಕ್ಷ ರಂಗಾಯಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಈಗಾಗಲೆ ಯಕ್ಷ ರಂಗಾಯಣಕ್ಕೆ ಮೂರು ಎಕರೆ ಜಾಗವನ್ನು ಮೀಸಲಿರಿಸಿ ಒಂದು ಕೋಟಿ ಅನುದಾನವನ್ನು ನೀಡಲಾಗಿದೆ. ಮಾರ್ಚ್ ಅಂತ್ಯದ ವೇಳೆಗೆ ಯಕ್ಷ ರಂಗಾಯಣಕ್ಕೆ ಅಧೀಕೃತವಾಗಿ ಚಾಲನೆ ಸಿಗಲಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಉಡುಪಿ […]

ಕಾರ್ಕಳ ಉತ್ಸವ: ಜಿಲ್ಲಾ ಉಸ್ತುವಾರಿ ಸಚಿವರಿಂದ ಬೋಟಿಂಗ್ ಉತ್ಸವಕ್ಕೆ ಚಾಲನೆ

ಕಾರ್ಕಳ: ಕಾರ್ಕಳ ಉತ್ಸವ ಪ್ರಯುಕ್ತ ಕಾರ್ಕಳ ರಾಮಸಮುದ್ರದಲ್ಲಿ ನಡೆದ ಬೋಟಿಂಗ್ ಉತ್ಸವಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಇಂದು ಚಾಲನೆ ನೀಡಿದರು. ಅವರು ಮಾತನಾಡಿ ಪರಂಪರೆಯ ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗಬೇಕಿದೆ. ಸ್ಥಳಿಯ ಕಲೆಗಳನ್ನು ಸಂಸ್ಕೃತಿಯ ಬೆಳಕು ಚೆಲ್ಲುವ ಕೆಲಸವಾಗಬೇಕಿದೆ. ಕಾರ್ಕಳ ಉತ್ಸವದಿಂದ ಜನರ ಮನಸ್ಸು ಗೆಲ್ಲುವ ಕೆಲಸ ಆಗಬೇಕಿದೆ.‌ ಕಾರ್ಕಳದ ಧಾರ್ಮಿಕ ಸಂಸ್ಕೃತಿಯ ಹಿನ್ನೆಲೆಯನ್ನು ಎಲ್ಲೆಡೆ ಪಸರಿಸುವ ಕಾರ್ಕಳ ಉತ್ಸವವಾಗಲಿ ಎಂದು ಅವರು ಹೇಳಿದರು. ಸಭೆಯಲ್ಲಿ ಕಾರ್ಕಳ ಪುರಸಭೆಯ ಮುಖ್ಯಾಧಿಕಾರಿ ರೂಪ ಶೆಟ್ಟಿ, […]

ಉತ್ತರ ಪ್ರದೇಶ ಚುನಾವಣೆ: ಎರಡನೇ ಬಾರಿ ಅಭೂತಪೂರ್ವ ಜಯ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹರ್ಷ

ಉಡುಪಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಎರಡನೇ ಬಾರಿ ಅಭೂತಪೂರ್ವ ಜಯಗಳಿಸಿರುವುದಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಸರ್ಕಾರ ಮತ್ತು ಸಂಘಟನೆಗೆ ದೊರೆತ ಗೆಲುವಾಗಿದ್ದು, ಪಂಚರಾಜ್ಯ ಚುನಾವಣೆಯಲ್ಲಿ ವಿರೋಧ ಪಕ್ಷ ಗಳ ಆರೋಪಗಳಿಗೆ ತಕ್ಕವಾದ ಉತ್ತರವನ್ನು ಮತದಾರರು ನೀಡಿದ್ದು, ಬಿಜೆಪಿ ಒಂದೇ ಈ ದೇಶಕ್ಕೆ ಆಶಾಕಿರಣವಾಗಿದೆ. ಈ ಚುನಾವಣೆಯ ಫಲಿತಾಂಶವೇ ಸಾಕ್ಷಿಯೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.