ಜಿಲ್ಲೆಯಲ್ಲಿ ಗೌರವಾನ್ವಿತ ರಾಜ್ಯಪಾಲರ ಪ್ರವಾಸ
ಉಡುಪಿ: ಗೌರವಾನ್ವಿತ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮಾರ್ಚ್ 14 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಸಂಜೆ 5.30 ಕ್ಕೆ ಕಾರ್ಕಳ ದ ಗಾಂಧೀ ಮೈದಾನದಲ್ಲಿ ನಡೆಯುವ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 6.50 ಕ್ಕೆ ಕಾರ್ಕಳದಿಂದ ಮಂಗಳೂರಿಗೆ ತೆರಳಿದ್ದಾರೆ.
ಸಾರ್ವಜನಿಕರಿಗೆ ಕಂದಾಯ ಸೇವೆಗಳು ಸಮರ್ಪಕವಾಗಿ ತಲುಪಬೇಕು: ಶಾಸಕ ರಘುಪತಿ ಭಟ್
ಉಡುಪಿ, ಮಾ.12: ಸಾರ್ವಜನಿಕರಿಗೆ ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಸೇವೆಗಳನ್ನು ಸಮರ್ಪಕವಾಗಿ, ಮಧ್ಯವರ್ತಿಗಳ ಹಾವಳಿ ಇಲ್ಲದೆ, ಸಕಾಲದಲ್ಲಿ ಒದಗಿಸುವ ಮೂಲಕ, ಕಂದಾಯ ಸಮಸ್ಯೆಗಳನ್ನು ಸಮರ್ಪಕ ರೀತಿಯಲ್ಲಿ ಬಗೆಹರಿಸಲು, ಅಧಿಕಾರಿಗಳು ಪ್ರಾಮಾಣಿಕ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು “ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆಯಡಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ರೈತರ ಮನೆಗಳಿಗೆ, ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತೆರಳಿ ವಿತರಿಸಿ, ನಂತರ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ […]
ಕುಂದಾಪುರ: ಒಣಹುಲ್ಲು ಸಾಗಿಸುತ್ತಿದ್ದ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಬೆಂಕಿ ಅವಘಡ; ತಪ್ಪಿದ ಭಾರೀ ದುರಂತ
ಕುಂದಾಪುರ: ಒಣಹುಲ್ಲು ಸಾಗಿಸುತ್ತಿದ್ದ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ಅಗ್ನಿ ಅವಘಡ ಉಂಟಾದ ಘಟನೆ ಕುಂದಾಪುರ ತಾಲೂಕಿನ ಕೊರ್ಗಿ ಗಿರಿಜಾ ಚಂದ್ರಶೇಖರ್ ಹೆಗ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಶಿಕಾರಿಪುರದಿಂದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರ ನಿವಾಸಕ್ಕೆ ಜಾನುವಾರುಗಳ ಮೇವಿಗಾಗಿ ಬೈಹುಲ್ಲು ಸಾಗಿಸುತ್ತಿತ್ತು. ಶಾಲಾ ಸಮೀಪದಲ್ಲಿ ಬರುತ್ತಿದ್ದಂತೆ ವಿದ್ಯುತ್ ಸಂಪರ್ಕ ತಂತಿ ತಗುಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದಿದೆ. ಬೆಂಕಿ ತಗುಲಿದ ಪರಿಣಾಮ ವಾಹನದಲ್ಲಿದ್ದ […]
ಸದಸ್ಯತ್ವ ನೋಂದಾವಣಿ ಮೂಲಕ ಯುವಕರನ್ನು ಮುನ್ನಡೆಗೆ ತರುವಂತಾಗಬೇಕು: ಅಶೋಕ್ ಕುಮಾರ್ ಕೊಡವೂರು
ಉಡುಪಿ: ಸದಸ್ಯತ್ವ ನೋಂದಾವಣೆ ಬಗ್ಗೆ ಜವಾಬ್ದಾರಿಯನ್ನು ಪಡೆದವರು ತ್ವರಿತವಾಗಿ ನೋಂದಣಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಾಗಿದೆ. ಡಿಜಿಟಲ್ ನೋಂದಣಿ ಪಕ್ಷಕ್ಕೆ ಹೊಸ ಆಯಾಮವನ್ನು ನೀಡಲಿದ್ದು, ಪ್ರಾರಂಭಿಕ ಹಂತದಲ್ಲಿ ಸಮಸ್ಯೆಗಳು ಕಂಡು ಬಂದರೂ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಎಲ್ಲಾ ಬ್ಲಾಕ್‍ಗಳಲ್ಲಿಯೂ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಾಗುವುದು. 2023 ರಲ್ಲಿ ವಿಧಾನಸಭಾ ಚುನಾವಣೆ ಬರುವ ಹಿನ್ನಲೆಯಲ್ಲಿ ಸದಸ್ಯತ್ವ ನೋಂದಣಿ ಮೂಲಕ ಯುವ ಪ್ರತಿಭೆಗಳನ್ನು ರಾಜಕೀಯ ಮುನ್ನಡೆಗೆ ತರುವಂತಾಗಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಅವರು ಜಿಲ್ಲಾ ಕಾಂಗ್ರೆಸ್ […]